Gudibande News: ಗುಡಿಬಂಡೆಯಲ್ಲಿ ಪಿಯು ಕಾಲೇಜುಗಳ ಕ್ರೀಡಾಸ್ಪರ್ಧೆಗೆ ಚಾಲನೆ
ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಎ.ರವೀಂದ್ರ, ವಿದ್ಯಾರ್ಥಿ ಗಳು ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು. ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿ ಕೊಂಡು ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು
-
ಗುಡಿಬಂಡೆ: 2026-27ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾ ಸ್ಪರ್ಧೆಗಳಿಗೆ ಗುಡಿಬಂಡೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ತಾಲ್ಲೂಕಿನ ಸರ್ಕಾರಿ ಪಿಯು ಕಾಲೇಜು ಸಾದಲಿ, ಆದರ್ಶ ಪಿಯು ಕಾಲೇಜು ಬೀಚಗಾನಹಳ್ಳಿ, ಎಸ್ ಬೆಸ್ಟ್ ಪಿಯು ಕಾಲೇಜು ಹಾಗೂ ಸರ್ಕಾರಿ ಪಿಯು ಕಾಲೇಜು ಗುಡಿಬಂಡೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಇದನ್ನೂ ಓದಿ: Gudibande News: ದೇವರಾಜ ಅರಸು ಅವರ ಆದರ್ಶ ಪಾಲನೆಯೇ ಜಯಂತಿ ಆಚರಣೆಗೆ ಸಾರ್ಥಕತೆ: ಪರಿಮಳ
ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಎ.ರವೀಂದ್ರ, ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು. ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.
ಆದರ್ಶ ಪಿಯು ಕಾಲೇಜಿನ ವೆಂಕಟೇಶ್ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನ ವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲು ಮುಂದಿನ ಸಾಧನೆಗೆ ಪಾಠವಾಗ ಲಿದ್ದು, ಫಲಿತಾಂಶಕ್ಕಿಂತ ಪರಿಶ್ರಮ ಹಾಗೂ ಕ್ರೀಡಾಸ್ಫೂರ್ತಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶಿವಮೂರ್ತಿ, ಪ್ರಕಾಶ್ ಒಂಟೆ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.