ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gudibande News: ಶ್ರೀ ಗಂಗಾ ಭಗೀರಥ ತಾಯಿ ಪುರ್ನಪ್ರತಿಷ್ಟಾಪನಾ ಮಹೋತ್ಸವ ವೈಭವ; ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿಶೇಷ ಪೂಜೆ

ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿತ್ತು. ವೇದಮೂರ್ತಿಗಳ ನೇತೃತ್ವದಲ್ಲಿ ಗಣಪತಿ ಪೂಜೆ, ಗಂಗೆ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ ಹಾಗೂ ವಾಸ್ತು ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳನ್ನು ವೇದಮಂತ್ರಗಳ ಘೋಷದೊಂದಿಗೆ ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

ತಾಲ್ಲೂಕಿನ ಎಲ್ಲೋಡು ಗ್ರಾಪಂ ವ್ಯಾಪ್ತಿಯ ಗುಂಡ್ಲಹಳ್ಳಿ ಗ್ರಾಮದಲ್ಲಿ ಶ್ರೀ ಗಂಗಾ ಭಗೀರಥ ತಾಯಿಯ  ಪುರ್ನಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸುಬ್ಬಾರೆಡ್ಡಿ ರವರು ದೇವರಿಗೆ ಮಹಾಪೂರ್ಣಾಹುತಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಗುಡಿಬಂಡೆ: ತಾಲ್ಲೂಕಿನ ಎಲ್ಲೋಡು ಗ್ರಾಪಂ ವ್ಯಾಪ್ತಿಯ ಗುಂಡ್ಲಹಳ್ಳಿ ಗ್ರಾಮದಲ್ಲಿ ಶ್ರೀ ಗಂಗಾ ಭಗೀರಥ ತಾಯಿಯ ಪುನರ್‌ ಪ್ರತಿಷ್ಟಾಪನಾ ಮಹೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ವೈಭವದಿಂದ ನೆರವೇರಿತು. ಮೂರು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವೇದಮೂರ್ತಿಗಳ ನೇತೃತ್ವದಲ್ಲಿ ಗಣಪತಿ ಪೂಜೆ, ಗಂಗೆ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ ಹಾಗೂ ವಾಸ್ತು ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳನ್ನು ವೇದಮಂತ್ರಗಳ ಘೋಷದೊಂದಿಗೆ ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

ಬಾಗೇಪಲ್ಲಿ ಕ್ಷೇತ್ರದ ಶಾಸಕರಾದ ಎಸ್. ಎನ್. ಸುಬ್ಬಾರೆಡ್ಡಿ(Bagepalli constituency MLA S. n. Subbareddy) ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವರಿಗೆ ಮಹಾಪೂರ್ಣಾಹುತಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: Bagepalli MLA SN Subba Reddy: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬಳಿಕ ಮಾತನಾಡಿದ ಶಾಸಕರು ಶ್ರೀ ಗಂಗಾ ಭಗೀರಥ ತಾಯಿಯ ಅಪಾರ ಕೃಪೆಯಿಂದ ಗುಂಡ್ಲಹಳ್ಳಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸದಾ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸಲಿ. ಪ್ರಮುಖವಾಗಿ ನಮ್ಮ ರೈತ ಬಾಂಧವರಿಗೆ, ಬಡವರಿಗೆ ಹಾಗೂ ಶ್ರಮಿಕರಿಗೆ ತಾಯಿಯು ಸಕಲ ಐಶ್ವರ್ಯವನ್ನು ನೀಡಿ ಆಶೀರ್ವದಿಸಲಿ ಎಂದು ಹಾರೈಸಿದರು.

ಈ ಧಾರ್ಮಿಕ ಮಹೋತ್ಸವದಲ್ಲಿ ಗುಂಡ್ಲಹಳ್ಳಿ ಗ್ರಾಮಸ್ಥರು ತೋರಿದ ಒಗ್ಗಟ್ಟು ಮತ್ತು ಸೇವಾ ಮನೋಭಾವ ಎಲ್ಲರ ಗಮನ ಸೆಳೆಯಿತು. ಮಹಿಳೆಯರು, ಯುವಕರು ಹಾಗೂ ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಒಂದಾಗಿ ಸೇವೆ ಸಲ್ಲಿಸಿದರು.

ದೇವಸ್ಥಾನವನ್ನು ವಿವಿಧ ಪುಷ್ಪಗಳು ಹಾಗೂ ವಿದ್ಯುತ್ ದೀಪಗಳಿಂದ ನಯನಮನೋಹರವಾಗಿ ಅಲಂಕರಿಸಲಾಗಿತ್ತು. ಧರ್ಮಸಭೆಗೆ ಆಗಮಿಸಿದ ಭಕ್ತಾದಿಗಳಿಗೆ ಅನ್ನದಾಸೋಹ ಹಾಗೂ ಪ್ರಸಾದ ವಿನಿಯೋಗದ ವ್ಯವಸ್ಥೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಲಾಗಿತ್ತು.