ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B.N.Ravikumar: ಸಂಸ್ಕೃತಿ ಹಾಗೂ ಧಾರ್ಮಿಕ ಮೌಲ್ಯಗಳ ಪ್ರತೀಕ ಶ್ರೀರಾಮನವಮಿ: ಶಾಸಕ ರವಿಕುಮಾರ್

ನಗರದ ಕೋಟೆ ವೃತ್ತದಲ್ಲಿರುವ ಪುರಾತನ ಹಾಗೂ ಪ್ರಾಣ ಪ್ರಸಿದ್ಧ ಶ್ರೀರಾಮ ದೇವಾಲಯ ದಲ್ಲಿ ಶ್ರೀರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸ ಲಾಯಿತು. ಈ ಸಂದರ್ಭದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶಿಡ್ಲಘಟ್ಟ: ಶ್ರೀರಾಮನವಮಿ ಹಬ್ಬವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಮೌಲ್ಯಗಳ ಪ್ರತೀಕವಾಗಿದ್ದು, ಶ್ರೀರಾಮನ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್(MLA B.N. Ravikumar) ಹೇಳಿದರು.

ನಗರದ ಕೋಟೆ ವೃತ್ತದಲ್ಲಿರುವ ಪುರಾತನ ಹಾಗೂ ಪ್ರಾಣ ಪ್ರಸಿದ್ಧ ಶ್ರೀರಾಮ ದೇವಾಲಯ ದಲ್ಲಿ ಶ್ರೀರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸ ಲಾಯಿತು. ಈ ಸಂದರ್ಭದಲ್ಲಿ ಶಾಸಕ ಬಿ.ಎನ್. ರವಿಕುಮಾರ್ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಇಂತಹ ಹಬ್ಬಗಳು ಸಮಾಜದಲ್ಲಿ ಸೌಹಾರ್ದತೆ, ಶಾಂತಿ ಮತ್ತು ಭಕ್ತಿ ಭಾವವನ್ನು ಹೆಚ್ಚಿಸುವುದರ ಜೊತೆಗೆ ಜನರಲ್ಲಿ ಒಗ್ಗಟ್ಟಿನ ಮನೋಭಾವ ವನ್ನು ಬೆಳೆಸುತ್ತವೆ ಎಂದು ಹೇಳಿದರು. ಇಂದಿನ ಯುವಕರು ಧಾರ್ಮಿಕ ಮೌಲ್ಯಗಳು, ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆಯದೇ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Chikkaballapur News: ಒತ್ತಡರಹಿತ ಜೀವನಕ್ರಮ ಹಾಗೂ ನಿಯಮಿತ ದೈಹಿಕ ಚಟುವಟಿಕೆಗಳೇ ಆರೋಗ್ಯದ ಜೀವನಾಡಿಗಳು : ಡಿವೈಎಸ್ಪಿ ಪ್ರಕಾಶ್ ಸಲಹೆ

ಹಬ್ಬದ ಅಂಗವಾಗಿ ದೇವಾಲಯವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಬೆಳಗ್ಗಿ ನಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನಕ್ಕೆ ಆಗಮಿಸಿದ್ದರು. ಭಕ್ತರಿಗಾಗಿ ಪಾನಕ, ಹೆಸರುಬೇಳೆ ಸೇರಿದಂತೆ ವಿವಿಧ ಪ್ರಸಾದಗಳನ್ನು ವಿತರಿಸಲಾಯಿತು. ದೇವಾ ಲಯದ ಆವರಣದಲ್ಲಿ ಭಕ್ತರ ಸಂಭ್ರಮ, ಭಕ್ತಿ ಹಾಗೂ ಆಧ್ಯಾತ್ಮಿಕ ವಾತಾವರಣ ಎಲ್ಲರ ಗಮನ ಸೆಳೆಯಿತು.

ಇದೇ ವೇಳೆ, ಸಮಾಜ ಸೇವಕರಾದ ರಮೇಶ್ ಎ ಅವರ ಹುಟ್ಟುಹಬ್ಬದ ಅಂಗವಾಗಿ ಅವರನ್ನು ಶಾಲು ಹೊದಿಸಿ ಹಾರ ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಸದಸ್ಯ ಅನಿಲ್ ಕುಮಾರ್, ನವೀನ್, ರಮೇಶ್, ದೀಪು ಸೇರಿದಂತೆ ದೇವಾಲಯ ಆಡಳಿತ ಮಂಡಳಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿದ್ದರು.