ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

chikkaballapur News: ರಾಜ್ಯದ ಗ್ಯಾರಂಟಿ ಯೋಜನೆಗಳು ಮಾದರಿಯಾಗುವ ಮೂಲಕ ದೇಶದ ಇತರ ರಾಜ್ಯಗಳಲ್ಲೂ ವಿಸ್ತರಿಸುತ್ತಿವೆ : ಸೂರಜ್ ಎ.ಎನ್.ಹೆಗ್ಗಡೆ

ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಗೆ ೫೨ ಸಾವಿರ ಕೋಟಿ ರೂಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ ೩೬ ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ.

ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಪರಿಗಣಿಸಿ ಇತರ ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿವೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್. ಹೆಗಡೆ ತಿಳಿಸಿದರು.

Profile Ashok Nayak Mar 1, 2025 10:22 PM

ಚಿಕ್ಕಬಳ್ಳಾಪುರ : ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಗಳನ್ನು ಮಾದರಿಯಾಗಿ ಪರಿಗಣಿಸಿ ಇತರ ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿವೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾ ಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಇಂದು ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: Chikkaballapur News: ಗೃಹ ರಕ್ಷಕದಳ ಸಿಬ್ಬಂದಿ ಕೆಲಸವನ್ನು ಮಾಡಬೇಕಾದರೂ ಹಿರಿಯ ಅಧಿಕಾರಿಗೆ ಲಂಚ ನೀಡಬೇಕಾಗಿದೆ

ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ಯಾರಂಟಿ ಯೋಜನೆಗಳು ತಲುಪು ತ್ತಿವೆ. ಗ್ಯಾರಂಟಿ ಯೋಜನೆಗಳಿಗೆ ೫೨ ಸಾವಿರ ಕೋಟಿ ರೂಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ ೩೬ ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಜನರಿಗೆ ನೇರವಾಗಿ ತಲುಪುವ ಗ್ಯಾರಂಟಿ ಯೋಜನೆಗಳನ್ನು ಇಂದು ಮಧ್ಯಪ್ರದೇಶ,ಜಾರ್ಖಂಡ್, ಮಹಾರಾಷ್ಟ್ರ, ರಾಜಾಸ್ಥಾನ, ದೆಹಲಿ, ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಜಾರಿ ಮಾಡಿದ್ದಾರೆ. ನಿರೀಕ್ಷೆಗೂ ಮೀರಿ ಗ್ಯಾರಂಟಿ ಯೋಜನೆಗಳು ಕರ್ನಾಟಕ ಒಳಗೆ ಬೆಳೆದು, ರಾಜ್ಯದ ಹೊರಗೂ ವಿಸ್ತರಿಸಿವೆ. ಇದು ಗ್ಯಾರಂಟಿ ಯೋಜನೆಗಳಿಗಿರುವ ಶಕ್ತಿ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಯೋಜನೆಗಳ ಅನುಷ್ಠಾನದಲ್ಲಿ ಏನಾದರೂ ಸಣ್ಣ ಪುಟ್ಟ ತೊಂದರೆಗಳು, ದೋಷಗಳು ಮತ್ತು ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತಂದಲ್ಲಿ ಪರಿಶೀಲಿಸಿ ಸೂಕ್ತವೆನಿಸಿದಲ್ಲಿ ಸರಿಪಡಿ ಸಲು ಕ್ರಮಕೈಗೊಳ್ಳಲಾಗುವುದು. ಒಟ್ಟಾರೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ.

ಗೃಹಲಕ್ಷ್ಮಿ ಹಣ ನವೆಂಬರ್ ತಿಂಗಳವರೆಗೆ ಬಿಡುಗಡೆಯಾಗಿದ್ದು, ಎಲ್ಲಾ  ಗ್ಯಾರಂಟಿ ಯೋಜನೆಗಳ ಬಾಕಿ ಹಣ ಶೀಘ್ರದಲ್ಲೇ ಬಿಡುಗಡೆಯಾಗಿ ಫಲಾನುಭವಿಗಳಿಗೆ ತಲುಪಲಿದೆ. ಇದರಲ್ಲಿ ಯಾವುದೇ ಅನುಮಾನ ಗೊಂದಲ ಬೇಡ. ಗ್ಯಾರಂಟಿ ಯೋಜನೆಗಳ ಕುರಿತಾದ ಅಪಪ್ರಚಾರ, ಗೊಂದಲಗಳಿಗೆ ಯಾರೊಬ್ಬರೂ ಕಿವಿಗೊಡಬಾರದು. ಜನರಿಗೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಸಮರ್ಥವಾಗಿದೆ ಹಾಗೂ ಬದ್ಧವಾಗಿದೆ ಎಂದು ತಿಳಿಸಿ ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪಂಚ ಗ್ಯಾರಂಟಿ ಯೋಜ ನೆಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡಲು ಜಾಗೃತಿ ಸಂಚಾರಿ ವಾಹನಗಳ ಮೂಲಕ ಅರಿವು ಮೂಡಿಸಲು ಉದ್ದೇಶಿಸಲಾಗಿದೆ. ಈ ವಾಹನಗಳು ಪ್ರತಿ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ವರೆಗೆ ರಾಜ್ಯಾದ್ಯಂತ ವಿವಿಧ ವಾರ್ಡ್ ಗಳು, ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿವೆ. ಪಂಚ ಗ್ಯಾರಂಟಿ ಯೋಜನೆಗಳು ಈಗಾಗಲೇ ಬಹುತೇಕ ಎಲ್ಲರನ್ನು ತಲುಪಿವೆ. ಅನಿ ವಾರ್ಯ ಕಾರಣಗಳಿಂದ ರವರೆಗೆ ಈ ಯೋಜನೆಯಿಂದ ಯಾವುದೇ ಅರ್ಹ ಫಲಾನುಭ ವಿಗಳು ಹೊರಗುಳಿದಿದ್ದರೆ ಅಂತಹವರನ್ನು ಗುರಿಯಾಗಿಸಿಕೊಂಡು ಈ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಯೋಜನೆಗಳ ವ್ಯಾಪ್ತಿಗೆ ಈವರೆಗೂ ಒಳಪಡದ ಅರ್ಹ ಫಲಾನುಭವಿಗಳು ಹತ್ತಿರದ ಸಕ್ಷಮ ಪ್ರಾಧಿಕಾರಗಳನ್ನು ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕ ಮಾಡಿ ಈ ಯೋಜನೆ ಗಳಡಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಈ ಮೂಲಕ ಜಾಗೃತಿ ಮೂಡಿಸಿ ದರು. ಈ ಸಂಚಾರಿ ವಾಹನದಲ್ಲಿ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವ ಬಗ್ಗೆ ಮಾಹಿತಿಗಳನ್ನು ಬಿತ್ತಿ ಪತ್ರದ ರೂಪದಲ್ಲಿ ಅಳವಡಿಸಲಾಗಿದೆ. ೫ ಜನರ ಕಲಾವಿದರ ತಂಡ  ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ. ಈ ಉಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಸಂಚಾರಿ ವಾಹನ ಈಗಾಗಲೇ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ. ಈ ವಾಹನವು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅರಿವು ಮೂಡಿಸಿ ಮುಂದಿನ ಜಿಲ್ಲೆಗೆ ತೆರಳಲಿದೆ ಎಂದು ಮಾಹಿತಿ ನೀಡುತ್ತಾ ಪತ್ರಿಕಾಗೋಷ್ಠಿಯ ನಂತರ ಜಿಲ್ಲಾಡಳಿತ ಭವನದ ಮುಂಭಾಗದಿAದ ಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಉಪಾಧ್ಯಕ್ಷರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಳುವಳ್ಳಿ ರಮೇಶ್, ಉಪಾಧ್ಯಕ್ಷರುಗಳಾದ ರಾಮಕೃಷ್ಣಪ್ಪ, ಜಿ.ಸುಬ್ಬಾರೆಡ್ಡಿ, ಆದಿರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರಿದ ಅಧ್ಯಕ್ಷರುಗಳಾದ ಮಧುಸೂದನ್ ರೆಡ್ಡಿ (ಮಂಚೇನಹಳ್ಳಿ), ಮುನಿನಾರಾಯಣ (ಚಿಂತಾ ಮಣಿ), ಹೆಚ್.ಎಸ್. ನರೇಂದ್ರ (ಬಾಗೇಪಲ್ಲಿ) ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾಗಳ ಸದಸ್ಯರು, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಎಂ.ಆರ್. ಮಂಜುನಾಥ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗೌತಮ ಬುದ್ಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಲಾತಂಡದ ಕಲಾವಿದರಾದ ವೈ.ಟಿ. ಪ್ರಸನ್ನ ಕುಮಾರ್, ಕಿರಣ್, ನರಸಿಂಹಮೂರ್ತಿ, ಲೋಕೇಶ್.ಬಿ.ಸಿ,  ಡಿ.ಹೆಸ್.ನಂದೀಶ್, ಮುಂತಾದವರು ಉಪಸ್ಥಿತರಿದ್ದರು.