ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ರಾಜ್ಯ ವ್ಯಾಪ್ತಿ ಜು.9ರಂದು ಬಿಸಿಯೂಟ ನೌಕರರು ತಮ್ಮ ಕೆಲಸಗಳ ಬಂದ್‌ ಮಾಡಿ, ಮುಷ್ಕರ

ಬಿಸಿಯೂಟ ನೌಕರರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಮತ್ತು ಅವರ ಕೆಲಸದ ಕಾರ್ಯಗಳು ಹೆಚ್ಚಿದೆ. ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲಿ ವೇತನವನ್ನು ಹೆಚ್ಚಿಸಿಲ್ಲ. ಬಿಸಿಯೂಟ ಯೋಜನೆ ಪ್ರಾರಂಭವಾಗಿ 24 ವರ್ಷಗಳಾದರೂ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ

ಜು.9ರಂದು ಬಿಸಿಯೂಟ ನೌಕರರು ತಮ್ಮ ಕೆಲಸಗಳನ್ನು ಬಂದ್‌ ಮಾಡಿ, ಮುಷ್ಕರ

Profile Ashok Nayak Jul 6, 2025 10:05 PM

ಬಾಗೇಪಲ್ಲಿ: ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಜು.9ರಂದು ರಾಷ್ಟ್ರಾ ದ್ಯಂತ ಮುಷ್ಕರ ಹಮ್ಮಿಕೊಂಡಿದ್ದು, ಅದರಂತೆ ತಾಲೂಕಿನಲ್ಲಿ ಕೂಡ ಬಿಸಿಯೂಟ ಅಡುಗೆಯನ್ನು ಬಂದ್ ಮಾಡಿ, ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ತಾಲ್ಲೂಕು ಬಿಸಿಯೂಟ ನೌಕರರ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೇಳಿದರು

ಇಂದು ತಾಲ್ಲೂಕು ಬಿಇಓ ವೆಂಕಟೇಶಪ್ಪ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೆಂಕಟರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿ 

ಜುಲೈ 9 ರಂದು ಬಿಸಿಯೂಟ ನೌಕರರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ನಗರಸಭೆ ವತಿಯಿಂದ ಸವಲತ್ತುಗಳ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ತದನಂತರ ಮಾತನಾಡಿ, ಬಿಸಿಯೂಟ ನೌಕರರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಮತ್ತು ಅವರ ಕೆಲಸದ ಕಾರ್ಯಗಳು ಹೆಚ್ಚಿದೆ. ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲಿ ವೇತನವನ್ನು ಹೆಚ್ಚಿಸಿಲ್ಲ. ಬಿಸಿಯೂಟ ಯೋಜನೆ ಪ್ರಾರಂಭವಾಗಿ 24 ವರ್ಷಗಳಾದರೂ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದರು.

ಜುಲೈ 9 ರಂದು ಬಿಸಿಯೂಟ ನೌಕರರು ತಮ್ಮ ಕೆಲಸಗಳನ್ನು ಬಂದ್‌ಮಾಡಿ, ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರಮುಖವಾಗಿ ಎಂಡಿಎಂ ಯೋಜನೆ ಅನುದಾನ ಹೆಚ್ಚಿಸಬೇಕು. 26 ಸಾವಿರ ಕನಿಷ್ಟ ವೇತನ ನೀಡಬೇಕು. ಮಾಸಿಕ ಪಿಂಚಣಿ 10 ಸಾವಿರ ನೀಡಬೇಕು. ಕನಿಷ್ಠ ಕೂಲಿ ಜಾರಿಯಾಗ ಬೇಕು. ಸಾದಿಲ್ವಾರು ಜಂಟಿಖಾತೆ ಜವಾಬ್ದಾರಿಯನ್ನು ಮೊದಲಿನಂತೆ ಇಡಬೇಕು. ಪ್ರಮುಖವಾಗಿ ನಿವೃತ್ತಿಯಾದರೆ ಇಡಿಗಂಟು ನೀಡಬೇಕು. ಮೊಟ್ಟೆ ಸುಲಿಯುವ ಹಣವನ್ನು ಹೆಚ್ಚಿಸಬೇಕು. ಅನು ದಾನಿತ ಶಾಲೆಗಳು ಸೇರಿದಂತೆ ಎಲ್ಲಾ ಶಾಲೆಗಳಲ್ಲೂ ಮೊಟ್ಟೆ ಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಸಿಯೂಟ ನೌಕರರು ಪದಾಧಿಕಾರಿಗಳು ಹಾಜರಿದ್ದರು.