Chikkaballapur News: ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನ
ಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯ ಬೇಡ, ಏ.೧ ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗತ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಬೇಕು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಹೆಚ್ಚಿಸಲು ತಾಲ್ಲೂಕು ಮಟ್ಟದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ. ನಾಗಮಣಿ ತಿಳಿಸಿದರು.

ಗುಡಿಬಂಡೆ : ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಹೆಚ್ಚಿಸಲು ತಾಲ್ಲೂಕು ಮಟ್ಟದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ನಾಗಮಣಿ ತಿಳಿಸಿದರು. ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ಹಮ್ಮಿಕೊಂಡಿದ್ದ ಸ್ತ್ರೀ ಚೇತನ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯ ಬೇಡ, ಏ.೧ ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗು ತ್ತಿದ್ದು, ಈ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗತ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಬೇಕು. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನರೇಗಾ ಯೋಜನೆ ಮಹತ್ವದ ಪಾತ್ರ ವಹಿಸಿದೆ. ಯೋಜನೆಯಡಿ ವಾರ್ಷಿಕವಾಗಿ ೧೦೦ ದಿನಗಳವರೆಗೆ ಗ್ರಾಮಿಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು. ಆ ಮೂಲಕ ಗ್ರಾಮೀಣ ಪ್ರದೇಶದ ಮೂಲ ಸಮಸ್ಯೆ ಗಳನ್ನು ನಿವಾರಿಸಲು ನರೇಗಾ ವರದಾನವಾಗಲಿದೆ. ಏಪ್ರಿಲ್ ೧ ರಿಂದ ಕೂಲಿ ಮೊತ್ತ ೩೭೦ ರೂ ಹೆಚ್ಚಳವಾಗಿದೆ ಎಂದರು.
ಇದನ್ನೂ ಓದಿ: Chikkaballapur News: ದಲಿತಪರ ಸಂಘಟನೆಗಳಿಂದ ಡಾ.ಬಾಬು ಜಗಜೀವನ್‌ರಾಮ್ ಜಯಂತಿ ಆಚರಣೆ
ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನದ ಮೂಲಕ ಪ್ರಯತ್ನ ನಡೆಸಿದೆ. ಮ-ನರೇಗಾ ಸಂಪೂರ್ಣವಾಗಿ ಮಹಿಳಾ ಸ್ನೇಹಿ ಎಂಬುದಾಗಿ ಪರಿಚಯಿಸುವ ಉದ್ದೇಶವನ್ನು ಸ್ತ್ರೀ ಚೇತನ ಅಭಿಯಾನ ಒಳಗೊಂಡಿದೆ. ಮ-ನರೇಗಾದಲ್ಲಿ ಶೇ.೫೦ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ತಾಯಿ ಮತ್ತು ಮಕ್ಕಳಿಗೆ ಅನುಕೂಲ ವಾಗುವಂತೆ ಮಕ್ಕಳಿಗಾಗಿ ಕೂಸಿನ ಮನೆ, ವೈಯಕ್ತಿಕ ಕಾಮಗಾರಿಗಳಾದ ಇಂಗುಗುಂಡಿ, ವೈಯಕ್ತಿಕ ಶೌಚಾಲಯ, ಪೌಷ್ಟಿಕ ಕೈತೋಟ, ದನ ಮತ್ತು ಕುರಿ ಕಾಮಗಾರಿಗಳನ್ನು ನೀಡುವುದಾಗಿದೆ. ಮ-ನರೇಗಾ ಯೋಜನೆ ಮೂಲಕ ಮಹಿಳಾ ಸಬಲೀಕರಣ ಕೈಗೊಳ್ಳುವ ಬಹುಮುಖ್ಯ ಉದ್ದೇಶವನ್ನು ಸ್ತ್ರೀ ಚೇತನ ಕಾರ್ಯಕ್ರಮ ಹೊಂದಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿಯ ಮಾರ್ಗದರ್ಶನದ ಮೂಲಕ ಸ್ಥಳೀಯ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ಮೂಲಕ ಸ್ತ್ರೀ ಚೇತನ ಅಭಿಯಾನವು ಮೂರು ತಿಂಗಳವರೆಗೆ ಜಾರಿಯಲ್ಲಿರಲಿದ್ದು, ಈ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಇರುವ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಮನದಟ್ಟು ಮಾಡಿಕೊಡ ಲಾಯಿತು. ಈ ಮೂಲಕ ಮ-ನರೇಗಾ ಯೋಜನೆಯಲ್ಲಿ ಮತ್ತಷ್ಟು ಮಹಿಳೆಯರು ಪಾಲ್ಗೊಳ್ಳುವಂತೆ ಉತ್ತೇಜಿಸುವ ನೂತನ ಪ್ರಯತ್ನಕ್ಕೆ ತಾಲ್ಲೂಕು ಪಂಚಾಯಿತಿ ಮುಂದಾ ಗಿರುವುದು ವಿಶೇಷವಾಗಿದೆ.
ರಾಷ್ಟ್ರೀಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುವ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಆಯಾ ದಿನದ ನಿಗದಿತ ಅವಧಿಯಲ್ಲಿ ಅರ್ಧ ಕೆಲಸ ನಿರ್ವಹಿಸಿದರೂ ಪೂರ್ತಿ ಕೂಲಿ ಕೈಸೇರಲಿದೆ. ಅದರಂತೆ ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.೫೦ರಷ್ಟು ರಿಯಾಯಿತಿ ಘೋಷಿಸಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗರ್ಭಿಣಿ ಯರು ಹಾಗೂ ಬಾಣಂತಿಯರ ರಿಯಾಯಿತಿ ನೀಡಲಾಗುವುದು ಎಂದರು.
ನರೇಗಾ ಕೆಲಸ ಮಾಡುವ ೬ ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನದ ನಂತರದ ಆರು ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ಕೆಲಸದಲ್ಲಿ ಶೇ.೫೦ರಷ್ಟು ರಿಯಾಯತಿ ಸೌಲಭ್ಯ ನೀಡುತ್ತಿರುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಂಗಳಮ್ಮ, ಉಪಾಧ್ಯಕ್ಷ ಸೋಮಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಿಂಹಮೂರ್ತಿ, ಎನ್.ಆರ್.ಎಲ್.ಎಂ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಆಂಜಿನೇಯಪ್ಪ, ತಾಲ್ಲೂಕು ಐ.ಇ.ಸಿ ಸಂಯೋಜಕ ರಾಮಾಂಜಿ ಮುಂತಾದವರು ಉಪಸ್ಥಿತರಿದ್ದರು.