ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Eshwar B Khandre: ಕಲುಷಿತ ನೀರು ಪೂರೈಸಿದರೆ ಕಠಿಣ ಕ್ರಮ: ಈಶ್ವರ ಖಂಡ್ರೆ

ಮುಂದಿನ 30 ವರ್ಷಗಳ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶುದ್ಧ ಮೇಲ್ಮೈ ಜಲಮೂಲ ದಿಂದ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಸರ್ಕಾರ ಆದ್ಯತೆ ನೀಡಿದೆ. ಬಹುಗ್ರಾಮ ಹಾಗೂ ಏಕಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ.

ಚಿಂತಾಮಣಿ: ಸಾರ್ವಜನಿಕರಿಗೆ ಪೂರೈಸುವ ಕುಡಿಯುವ ನೀರಿನ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಕಲುಷಿತ ನೀರು ಪೂರೈಕೆಯಿಂದ ಜನರು ಹಾಗೂ ಜಾನುವಾರುಗಳು ಅಸ್ವಸ್ಥರಾಗುವ ಅಥವಾ ಪ್ರಾಣಹಾನಿಯಾಗುವ ಪ್ರಕರಣಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ(Eshwar B Khandre) ಎಚ್ಚರಿಕೆ ನೀಡಿದರು.

ಚಿಂತಾಮಣಿ ತಾಲೂಕು ಪಂಚಾಯಿತಿಯ ನೂತನ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಿಗೆ ಪೂರೈಸುವ ಕುಡಿಯುವ ನೀರನ್ನು ನಿಯಮಿತ ವಾಗಿ ಪರೀಕ್ಷಿಸಬೇಕು. ಕೊಳವೆ ಮಾರ್ಗಗಳು ಒಡೆದು ತ್ಯಾಜ್ಯ ನೀರು ಕುಡಿಯುವ ನೀರಿಗೆ ಸೇರ್ಪಡೆ ಯಾಗದಂತೆ ನಿರಂತರವಾಗಿ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Eshwar Khandre: ತಾಲೂಕು ಕೇಂದ್ರಗಳಲ್ಲಿ ಪಂಚಾಯಿತಿ ಭವನ, ಸಾಮರ್ಥ್ಯಸೌಧ ಅಗತ್ಯ: ಈಶ್ವರ ಖಂಡ್ರೆ

ಮುಂದಿನ 30 ವರ್ಷಗಳ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶುದ್ಧ ಮೇಲ್ಮೈ ಜಲಮೂಲ ದಿಂದ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಸರ್ಕಾರ ಆದ್ಯತೆ ನೀಡಿದೆ. ಬಹುಗ್ರಾಮ ಹಾಗೂ ಏಕಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 1,640 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೇ.68ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ ಹಣಕಾಸಿನ ಕೊರತೆಯಿಲ್ಲ. ನೀರು ಪೂರೈಕೆಯಲ್ಲಿ ಯಾವುದೇ ಅಡೆತಡೆ ಉಂಟಾದರೆ ತಕ್ಷಣ ದುರಸ್ತಿ ಕೈಗೊಳ್ಳಬೇಕು. ಸಾಧ್ಯವಾಗದಿದ್ದರೆ 24 ಗಂಟೆ ಯೊಳಗೆ ಪರ್ಯಾಯ ಮೂಲದಿಂದ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ರೈತರಿಗೆ ಖಂಡ್ರೆ ಮೆಚ್ಚುಗೆ

ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಪರಿಶ್ರಮ ಜೀವಿಗಳು. ನೀರಿನ ಲಭ್ಯತೆ ಕಡಿಮೆ ಇದ್ದರೂ ಹೂವು, ತರಕಾರಿ, ತೋಟಗಾರಿಕೆ ಬೆಳೆ, ಟೊಮೇಟೊ, ದ್ರಾಕ್ಷಿ ಹಾಗೂ ಅಲಂಕಾರಿಕ ಪುಷ್ಪಗಳನ್ನು ಬೆಳೆಯು ತ್ತಿದ್ದಾರೆ. ಇಂತಹ ಪರಿಶ್ರಮಿ ರೈತರ ಶ್ರಮವನ್ನು ಅಭಿನಂದಿಸಬೇಕು ಎಂದು ಖಂಡ್ರೆ ಹೇಳಿದರು.

ನಕಲಿ ಬಿಲ್ ಸೃಷ್ಟಿಸಿದರೆ ಕ್ರಮ

ವಿಬಿಜಿ ರಾಮ್ ಜಿ ಯೋಜನೆಯಡಿ ನಕಲಿ ಬಿಲ್ ಸೃಷ್ಟಿಸಿ, ಕೆಲಸ ಮಾಡದವರನ್ನು ಕೆಲಸ ಮಾಡುತ್ತಿರುವಂತೆ ತೋರಿಸಿ ಛಾಯಾಚಿತ್ರ ತೆಗೆದು ವಂಚನೆ ನಡೆಸುವ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಟ್ಟೆಚ್ಚರ ನೀಡಿದರು.

ಇ-ಸ್ವತ್ತು ವಿಳಂಬ ತಪ್ಪಿಸಲು ಸೂಚನೆ

ಇ-ಸ್ವತ್ತು, 11ಎ ಹಾಗೂ 11ಬಿ ದಾಖಲೆಗಳ ವಿತರಣೆಯಲ್ಲಿ ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಪ್ರಕ್ರಿಯೆ ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಠಾಣಾ ವ್ಯಾಪ್ತಿಯ ದಾಖಲೆಗಳಿಲ್ಲದ ಆಸ್ತಿಗಳಿಗೂ ಸ್ಥಳ ಪರಿಶೀಲನೆ ನಡೆಸಿ, ಯಾವುದೇ ವ್ಯಾಜ್ಯವಿಲ್ಲದ ಹಾಗೂ ಸ್ವಂತ ಜಮೀನಿನಲ್ಲಿರುವ ಆಸ್ತಿಗಳಿಗೆ ಇ-ಸ್ವತ್ತು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಮೂಲಸೌಕರ್ಯ ಕಲ್ಪಿಸಿದರೆ ನಗರಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಹಾಗೂ ಗ್ರಾಮಗಳಿಂದ ನಗರಗಳತ್ತ ವಲಸೆ ಹೋಗುವುದನ್ನು ತಡೆಯಬಹುದು. ಹೀಗಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಕಾರ್ಯ ನಿರ್ವಹಣಾ ಧಿಕಾರಿಗಳು ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿಬಿಜಿ ರಾಮ್ ಜಿ ಯೋಜನೆ ಯಡಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕೂ ಒತ್ತು ನೀಡಬೇಕು ಎಂದು ಸೂಚಿಸಿ ದರು.

ಸಭೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಡಾ. ಎಂ.ಸಿ. ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.