Shidlaghatta News: ಶಿಡ್ಲಘಟ್ಟ ನಗರದಲ್ಲಿ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ
ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಶಿಡ್ಲಘಟ್ಟ ನಗರ ಠಾಣೆ ಪೊಲೀಸರು, ನಗರದ ವಿವಿಧೆಡೆ ವಾಹನಗಳನ್ನು ತಡೆದು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದರು. ನಗರ ಠಾಣೆ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಸಿಬ್ಬಂದಿ ಪ್ರಮುಖ ರಸ್ತೆಗಳು ಹಾಗೂ ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವಾಹನ ಚಾಲಕರನ್ನು ಪರಿಶೀಲಿಸಿದರು.
-
Ashok Nayak
Sep 11, 2026 9:42 PM
ಶಿಡ್ಲಘಟ್ಟ: ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವು ದಾಗಿ ಎಚ್ಚರಿಸಿರುವ ಶಿಡ್ಲಘಟ್ಟ ನಗರ ಠಾಣೆ ಪೊಲೀಸರು, ನಗರದ ವಿವಿಧೆಡೆ ವಾಹನಗಳನ್ನು ತಡೆದು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದರು.
ನಗರ ಠಾಣೆ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಸಿಬ್ಬಂದಿ ಪ್ರಮುಖ ರಸ್ತೆಗಳು ಹಾಗೂ ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವಾಹನ ಚಾಲಕರನ್ನು ಪರಿಶೀಲಿಸಿದರು.
ಇದನ್ನೂ ಓದಿ: Shidlaghatta News: ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿ ವಾಸ್ತವಾಂಶ ಜನರಿಗೆ ತಲುಪಿಸಿ: ಡಾ.ವೈ.ಜಿ.ಪದ್ಮನಾಗರಾಜು
ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಅಪಘಾತದ ಅಪಾಯ ಹೆಚ್ಚಾಗುವುದಲ್ಲದೆ, ಇತರ ವಾಹನ ಸವಾರರು ಹಾಗೂ ಪಾದಚಾರಿಗಳ ಸುರಕ್ಷತೆಗೂ ಧಕ್ಕೆಯಾಗುತ್ತದೆ ಎಂದು ಪೊಲೀಸರು ತಿಳಿಸಿದರು.
ವಾಹನ ಸವಾರರು ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಸುನಿಲ್ ಎಚ್ಚರಿಕೆ ನೀಡಿದರು.