ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ವಹಿಸುವುದು ಅತ್ಯಗತ್ಯ : ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಆರ್. ಪ್ರಕಾಶ್ ತಾಕೀತು

ಸರಕಾರಿ ಅಥವಾ ಖಾಸಗಿ ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆಗೆ ಸಂಬಂಧ ಪಟ್ಟಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವಹಿಸುವುದು ಅತ್ಯಗತ್ಯ ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಆರ್. ಪ್ರಕಾಶ್ ವಸತಿ ನಿಲಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಿಕ್ಕಬಳ್ಳಾಪುರ: ಸರಕಾರಿ ಅಥವಾ ಖಾಸಗಿ ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆಗೆ ಸಂಬಂಧ ಪಟ್ಟಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವಹಿಸುವುದು ಅತ್ಯಗತ್ಯ ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಆರ್. ಪ್ರಕಾಶ್ ವಸತಿ ನಿಲಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್‌ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಿಕ್ಕಬಳ್ಳಾಪುರ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಜೆ.ಜೆ. ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ನೀತಿ 2016 ಪರಿಷ್ಕರಣೆ 2023 ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.  

ಇದನ್ನೂ ಓದಿ: Chikkaballapur News: ಆರ್.ಬಿ.ತಿಮ್ಮಾಪುರ ಸೇರಿ ದಲಿತ ಸಚಿವರ ಮೇಲಿನ ಅಪಪ್ರಚಾರ ನಿಲ್ಲಿಸಿ: ಇಲ್ಲವೇ ಹೋರಾಟ ಎದುರಿಸಿ

ಇದೇ ಕಾರಣಕ್ಕಾಗಿಯೇ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಇಲ್ಲಿ ಪಡೆಯುವ ಮಾಹಿತಿ ಯಂತೆ ಮಕ್ಕಳ ಸುರಕ್ಷತೆಗೆ ಕ್ರಮವಹಿಸುವುದು “ವಸತಿ ನಿಲಯ ಅಧಿಕಾರಿಗಳ ಸಂಯುಕ್ತ ಬದ್ಧತೆಯಾಗಿದೆ. ತಪ್ಪಿದ್ದಲ್ಲಿ ನ್ಯಾಯಾಲಯದ ನಿರ್ದೇಶನದಂತೆ ಮುಲಾಜಿಲ್ಲದೆ ಕ್ರಮವಹಿಸ ಲಾಗುವುದು. ಜಿಲ್ಲಾಡಳಿತ ಇತ್ತ ಕಾಲಕಾಲಕ್ಕೆ ಗಮನ ಹರಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ಮಾತನಾಡಿ, ವಿಶೇಷ ಮಕ್ಕಳ ಪೊಲೀಸ್ ಘಟಕ, ಚಿಕ್ಕಬಳ್ಳಾಪುರ, ವಸತಿ ನಿಲಯದ ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳ ಕುರಿತು, ಬಾಲ್ಯ ವಿವಾಹ, ಪೋಕ್ಸೋಕಾಯ್ದೆ, ಮಕ್ಕಳ ಸಹಾಯವಾಣಿ-1098 ಕುರಿತು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್.ಬಿ, ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮುನಿರತ್ನಮ್ಮ, ಡಯಟ್ ಪ್ರಾಂಶುಪಾಲರಾದ ಮುನಿಕೆಂಪೇಗೌಡ, ಉಪಸ್ಥಿತರಿದ್ದರು.