ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿದ್ದ ವಿದ್ಯಾರ್ಥಿನಿ ಉತ್ತಮ ಸಾಧನೆ

ಕೊರೋನ ವೇಳೆಯಲ್ಲಿ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ 12 ವಯಸ್ಸಿನ ವಿದ್ಯಾರ್ಥಿನಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದ್ದಳು. ಇಲ್ಲಿಂದಲೇ ವಿಶ್ವವಿವೇಕ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.90ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ.

ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿದ್ದ ವಿದ್ಯಾರ್ಥಿನಿ ಉತ್ತಮ ಸಾಧನೆ

ಲಾವಣ್ಯ -

Profile
Ashok Nayak Apr 10, 2026 11:42 PM

ಚಿಕ್ಕಬಳ್ಳಾಪುರ: ಕೊರೋನ ವೇಳೆಯಲ್ಲಿ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ 12 ವಯಸ್ಸಿನ ವಿದ್ಯಾರ್ಥಿನಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದ್ದಳು. ಇಲ್ಲಿಂದಲೇ ವಿಶ್ವವಿವೇಕ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.90ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ.

2021ರಲ್ಲಿ ಚಿಂತಾಮಣಿ ತಾಲೂಕಿನ ಕುರಟಹಳ್ಳಿಯಲ್ಲಿ ಲಾವಣ್ಯ ಅವರ ತಾಯಿ ಚಂದ್ರಕಲಾ ಮೃತ ಪಟ್ಟ ವೇಳೆ ಜೆಸಿಬಿ ಬಕೆಟ್ ಮುಖಾಂತರ ಆಸ್ವತ್ರೆಗೆ ಸಾಗಿಸಲಾಗಿತ್ತು.

ಇದನ್ನೂ ಓದಿ: 2nd PUC Exam-3 result: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

ಆಗ ಆನಾಥವಾಗಿದ್ದ 12 ವರ್ಷದ ಲಾವಣ್ಯಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ನೀಡಿದ ಮಾರ್ಗದರ್ಶನ ಮತ್ತು ಆಕೆಯ ಛಲದಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.90 ಅಂದರೆ 600 ಅಂಕಗಳಿಗೆ 541 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾಳೆ.

ಬಾಲ್ಯದಲ್ಲಿ ತಾಯಿಯ ದಾರುಣ ಸಾವನ್ನು ಕಂಡ ಲಾವಣ್ಯ ಜೀವನದಲ್ಲಿ ಏನಾದರೂ ಮಾಡ ಬೇಕೆಂಬ ಸಾಧನೆಯೊಂದಿಗೆ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಇತರೆ ವಿದ್ಯಾರ್ಥಿ ಮಾದರಿಯಾಗಿದ್ದಾಳೆ.

ಬಡತನದ ಬೇಗೆಯಲ್ಲಿ ಬೆಳೆದು ಅತ್ಯುತ್ತಮ ಸಾಧನೆ ಮಾಡಿರುವ ಲಾವಣ್ಯರಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್ ಹಾಗೂ ಅಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.