ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 599 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸನ್ಮಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ತಿರುಮಣಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ.ಪಲ್ಲವಿ 599 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಹಾಗೂ ತಾಲೂಕಿಗೆ ತೃತೀಯ ಸ್ಥಾನ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಯನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.‌

ತಾಲೂಕಿನ ತಿರುಮಣಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ.ಪಲ್ಲವಿ 599 ಅಂಕಗಳನ್ನು ಗಳಿಸಿದ್ದು, ವಿದ್ಯಾರ್ಥಿನಿಯನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಗುಡಿಬಂಡೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ತಿರುಮಣಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ.ಪಲ್ಲವಿ 599 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಹಾಗೂ ತಾಲೂಕಿಗೆ ತೃತೀಯ ಸ್ಥಾನ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಯನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.‌

ಇದನ್ನೂ ಓದಿ: SSLC Achievers honoured: ಎಸ್.ಎಸ್.ಎಲ್.ಸಿ ಸಾಧಕರಿಗೆ ನೇತಾಜಿ ಫೌಂಡೇಶನ್‌ನಿಂದ ಸನ್ಮಾನ: ತಲಾ 5 ಸಾವಿರ ರೂ. ನಗದು ಪುರಸ್ಕಾರ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದಿ ಇಷ್ಟು ದೊಡ್ಡ ಮಟ್ಟದ ಅಂಕ ಗಳಿಸಿರುವ ವಿದ್ಯಾರ್ಥಿನಿಯ ಸಾಧನೆಯನ್ನು ಕೊಂಡಾಡಿದ ಅಧಿಕಾರಿಗಳು, ಆಕೆಯ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಈ ವೇಳೆ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಕುಮಾರಿ, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ, ಇ.ಸಿ.ಒ ಶ್ರೀನಿವಾಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹ ಗೌಡ, ಸಂಘದ ಖಜಾಂಚಿ  ರವಿ, ಮಾಚಹಳ್ಳಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮಂಜಾನಾಯಕ್ ಹಾಗೂ ತಿರುಮಣಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಆ‍ರ್.ಮಂಜುನಾಥ್ ಸೇರಿದಂತೆ ಹಲವರಿದ್ದರು.