ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿ : ಜಿಲಾನ್‌ಬಾಷಾ

ಗಡಿನಾಡಿನಲ್ಲಿ ಕನ್ನಡ ಭಾಷೆಯ ಜೊತೆಗೆ ಉಳಿದೆಲ್ಲಾ ವಿಷಯಗಳಲ್ಲಿ ಚೆನ್ನಾಗಿ ಓದಿ ಮನನ ಮಾಡಿ ಕೊಂಡು ಯಶಸ್ವಿಯಾಗಿ ಪರೀಕ್ಷೆ ಬರೆದರೆ ಉತ್ತಮ ಫಲಿತಾಂಶ ಪಡೆಯುವವರಿದ್ದಾರೆ. ನಮ್ಮ ಶಾಸಕರು ಕೂಡ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವುದು ನಮ್ಮೆಲ್ಲರ ಸೌಭಾ ಗ್ಯ

ಕೂಲಿಯಿಂದ ಜೀವನ ನಡೆಸುವ ಜನರು ಹೆಚ್ಚಿದ್ದಾರೆ

ಚೇಳೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏರ್ಪಾಡಿಸಿದ್ದ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿಧ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಮುಖ್ಯ ಶಿಕ್ಷಕ ಜಿಲಾನ್‌ಬಾಷ

Profile Ashok Nayak Mar 15, 2025 12:35 PM

ಚೇಳೂರು : ಸರಕಾರದ ಸಾರ್ವಜನಿಕ ಶಿಕ್ಷಣಾ ಇಲಾಖೆಯಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದು ಉತ್ತಮ ಫಲಿತಾಂಶ ಪಡೆಯಬೇಕೆಂದು ಚೇಳೂರು ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕ ಜಿಲಾನ್‌ಬಾಷ ಹೇಳಿದರು. ಅವರು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಏರ್ಪಡಿಸಿದ್ದ 2024-25 ನೇ ಸಾಲಿನ ಶಾರದ ಪೂಜೆ ಹಾಗೂ ಪ್ರೇರಣಾ ಫಲಿತಾಂಶ ಕಾರ್ಯ ಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಅನ್ನಭಾಗ್ಯ 10 ಕೆ.ಜಿ ಅಕ್ಕಿ ವಿತರಣೆಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ

ಈ ಭಾಗದಲ್ಲಿ ಕೂಲಿಯಿಂದ ಜೀವನ ನಡೆಸುವ ಜನರು ಹೆಚ್ಚಿದ್ದಾರೆ. ಗಡಿನಾಡಿನಲ್ಲಿ ಕನ್ನಡ ಭಾಷೆಯ ಜೊತೆಗೆ ಉಳಿದೆಲ್ಲಾ ವಿಷಯಗಳಲ್ಲಿ ಚೆನ್ನಾಗಿ ಓದಿ ಮನನ ಮಾಡಿ ಕೊಂಡು ಯಶಸ್ವಿಯಾಗಿ ಪರೀಕ್ಷೆ ಬರೆದರೆ ಉತ್ತಮ ಫಲಿತಾಂಶ ಪಡೆಯುವವರಿದ್ದಾರೆ. ನಮ್ಮ ಶಾಸಕರು ಕೂಡ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವುದು ನಮ್ಮೆಲ್ಲರ ಸೌಭಾ ಗ್ಯ. ಈ ಭಾರೀ ಮಕ್ಕಳು ಹೆಚ್ಚಿನ ಫಲಿತಾಂಶ ಪಡೆಯುವ ಮೂಲಕ ತಾಲೂಕಿನ ಕೀರ್ತಿ ಬೆಳಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಶಿವಣ್ಣ. ರಾಮಾನಾಯ್ಕ. ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.