ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ಸದಾಶಿವ ಆರಾಧ್ಯ

ದೀಪಾವಳಿ, ಯುಗಾದಿ, ಸಂಕ್ರಾಂತಿ, ನಾಗರ ಪಂಚಮಿ, ದಸರಾ ಹಾಗೂ ಗಣೇಶ ಚತುರ್ಥಿ ಸೇರಿದಂತೆ ವಿವಿಧ ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ಅಂಶಗಳನ್ನು ವಿವರಿಸಿದರು. ನಂಬಿಕೆ ಇರಬೇಕೇ ಹೊರತು ಮೂಢನಂಬಿಕೆ ಬೆಳೆಸಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಚಿಕ್ಕಬಳ್ಳಾಪುರ: ಭಾರತೀಯ ಹಬ್ಬಗಳ ಆಚರಣೆಯಲ್ಲಿ ಸಂಸ್ಕೃತಿ, ಪರಂಪರೆ, ಇತಿಹಾಸ ಹಾಗೂ ವೈಜ್ಞಾನಿಕ ಹಿನ್ನೆಲೆ ಅಡಗಿದೆ. ವಿದ್ಯಾರ್ಥಿಗಳು ಪ್ರತಿಯೊಂದು ಆಚರಣೆಯ ಹಿಂದಿರುವ ವಿಚಾರ ಗಳನ್ನು ತಿಳಿದುಕೊಳ್ಳಲು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಉಪನ್ಯಾಸಕ ಸದಾಶಿವ ಆರಾಧ್ಯ ತಿಳಿಸಿದರು.

ತಾಲೂಕಿನ ರೇಣುಮಾಕಲಹಳ್ಳಿ ಶ್ರೀ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ವಿದ್ಯಾರ್ಥಿಗಳಲ್ಲಿ ಸಂಸದೀಯ ಮೌಲ್ಯ, ನಾಯಕತ್ವ ಗುಣ ಬೆಳೆಸಲು ಅಣಕು ಯುವ ಸಂಸತ್ ಸಹಕಾರಿ: ನ್ಯಾ. ರಾಮಲಿಂಗೇಗೌಡ

ದೀಪಾವಳಿ, ಯುಗಾದಿ, ಸಂಕ್ರಾಂತಿ, ನಾಗರ ಪಂಚಮಿ, ದಸರಾ ಹಾಗೂ ಗಣೇಶ ಚತುರ್ಥಿ ಸೇರಿದಂತೆ ವಿವಿಧ ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ಅಂಶಗಳನ್ನು ವಿವರಿಸಿದರು. ನಂಬಿಕೆ ಇರಬೇಕೇ ಹೊರತು ಮೂಢನಂಬಿಕೆ ಬೆಳೆಸಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಚಕೋರ ವೇದಿಕೆಯ ಜಿಲ್ಲಾ ಸಂಚಾಲಕ ಚಲಪತಿಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಚಿಂತನೆ ಬೆಳೆಸುವುದು ವೇದಿಕೆಯ ಉದ್ದೇಶ ಎಂದರು.

ಕರ್ನಾಟಕ ಪುಲಿಕೇಶಿ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕನ್ನಡ ಭಾಷೆ, ನಾಡು, ನುಡಿ, ನೆಲ-ಜಲದ ರಕ್ಷಣೆಗೆ ಪ್ರತಿಯೊಬ್ಬರೂ ಬದ್ಧರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಗಂಗರಾಜು, ತಿಪ್ಪೇನಹಳ್ಳಿ ನಾರಾಯಣಸ್ವಾಮಿ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.