ಗೌರಿಬಿದನೂರು : ವಿದ್ಯಾರ್ಥಿಗಳು ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ವನ್ನು ಕಲಿಯುವ ಮೂಲಕ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕೆಂದು ಶಾಸಕ ಕೆ ಹೆಚ್ ಪುಟ್ಟಸ್ವಾಮಿಗೌಡರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಇದನ್ನೂ ಓದಿ: MLA K H Puttaswamy Gowda: ವಿಶ್ವಕರ್ಮ ಸಮಾಜದ ನಿವೇಶನಕ್ಕೆ ಇ-ಖಾತೆ ವಿತರಣೆ
ಅವರು ತಾಲೂಕಿನ ಗಂಗಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿ ಗಳಿಗೆ ಪುಸ್ತಕಗಳು,ಶಾಲಾ ಬ್ಯಾಗು,ಸ್ಪೆಟರ್ ವಿತರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನ ಅಮೂಲ್ಯವಾದುದ್ದು, ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಾಠವನ್ನು ಶ್ರದ್ಧೆಯಿಂದ ಕಲಿಯ ಬೇಕು, ಸಮಯವನ್ನು ವ್ಯಯ ಮಾಡದೆ, ಮೊಬೈಲ್ ಗೀಳಿಗೆ ಬೀಳದೆ, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯವನ್ನು ಕಳೆಯುವ ಬದಲು ವಿದ್ಯಾರ್ಜನೆಯಲ್ಲಿ ಬಳಸಿದಾಗ ಮಾತ್ರ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದ ಅವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪುಸ್ತಕ, ಬ್ಯಾಗು ಜೊತೆಗೆ ಸ್ಪೆಟರ್ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದೇನೆ ಎಂದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮೀನಾರಾಯಣ್ ಪಟೇಲ್,ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಅಂಜಿ ಮುಖಂಡರಾದ ನರಸಿಂಹರೆಡ್ಡಿ, ನಾಗಭೂಷಣ್ ರೆಡ್ಡಿ, ಸದಾಶಿವಪ್ಪ, ಅಶೋಕ್, ಜಭೀ, ಕಾಂಕ್ರೀಟ್ ನರಸಿಂಹಮೂರ್ತಿ, ರಾಮಕೃಷ್ಣಪ್ಪ,ರಮೇಶ, ಸಿದ್ದಪ್ಪ, ವೆಂಕಟಾಚಲ, ಹನುಮಂತ ರಾಯಪ್ಪ, ಉಮಾಶಂಕರ ಡ್ಡಿ, ನಾಗೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.