Chikkaballapur News: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು : ಕೃಷ್ಣಕುಮಾರಿ
ವಿದ್ಯಾರ್ಥಿಗಳು ತಮ್ಮ ದಿನಚರಿಯಲ್ಲಿ ಉತ್ತಮ ಆಹಾರ ಪದ್ಧತಿ, ವ್ಯಾಯಾಮ ಮತ್ತು ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಧರ್ಮ ಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಈ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸುವುದು ಹಾಗೂ ದುಶ್ಚಟಗಳಿಂದ ದೂರವಿರಲು ಪ್ರೇರೇಪಿಸುತ್ತದೆ ಎಂದರು.
ತಾಲೂಕಿನ ಜೆಪಿ ನಗರದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. -
ಗುಡಿಬಂಡೆ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ. ಶಾಲಾ ಹಂತದಲ್ಲಿಯೇ ಆರೋಗ್ಯ ಮತ್ತು ಉತ್ತಮ ಮೌಲ್ಯಗಳ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕಿ ಕೃಷ್ಣಕುಮಾರಿ ಸಲಹೆ ನೀಡಿದರು.
ತಾಲೂಕಿನ ಜೆಪಿ ನಗರದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ದಿನಚರಿಯಲ್ಲಿ ಉತ್ತಮ ಆಹಾರ ಪದ್ಧತಿ, ವ್ಯಾಯಾಮ ಮತ್ತು ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾ ಭಿವೃದ್ದಿ ಯೋಜನೆಯ ಈ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಮಹತ್ವ ತಿಳಿಸುವುದು ಹಾಗೂ ದುಶ್ಚಟಗಳಿಂದ ದೂರವಿರಲು ಪ್ರೇರೇಪಿಸುತ್ತದೆ ಎಂದರು.
ಇದನ್ನೂ ಓದಿ: Gudibande News: ಬಿಜೆಪಿ ಮುಖಂಡ ಸಿ.ಮುನಿರಾಜು ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ
ಬಳಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಿ.ಎಲ್.ಪರಿಮಳ ಮಾತನಾಡಿ, ಇಂದಿನ ಯುವ ಪೀಳಿಗೆ ದುಶ್ಚಟಗಳತ್ತ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಸ್ವಾಸ್ಥ್ಯ ಎಂದರೆ ಕೇವಲ ದೈಹಿಕ ಆರೋಗ್ಯವಲ್ಲ, ಮಾನಸಿಕ ಹಾಗೂ ಸಾಮಾಜಿಕ ನೆಮ್ಮದಿಯೂ ಆಗಿದೆ. ಮಕ್ಕಳು ಜಂಕ್ ಫುಡ್ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಗಳಿಂದ ದೂರವಿರಬೇಕು. ಉತ್ತಮ ಆಹಾರ, ಉತ್ತಮ ಅಭ್ಯಾಸ ಮತ್ತು ಶಿಸ್ತುಬದ್ಧ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಅಲ್ಲದೆ, ದುಶ್ಚಟಗಳಿಗೆ ಬಲಿಯಾದ ವ್ಯಕ್ತಿಯನ್ನು ಸಮಾಜ ಹೇಗೆ ಕಡೆಗಣಿಸುತ್ತದೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮದ್ದರೆಡ್ಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಶಿಕ್ಷಕರಾದ ದೇವೇಂದ್ರ, ಮೇಲ್ವಿಚಾರಕರಾದ ಮಂಜುಳಾ, ಸೇವಾಪ್ರತಿನಿಧಿಗಳಾದ ಉಷಾ ಹಾಗೂ ಅನ್ವರ್ ಭಾಷಾ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.