ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪೋಶೆಟ್ಟಿಹಳ್ಳಿ ತ್ಯಾಜ್ಯ ನಿರ್ವಹಣಾ ಘಟಕಗಳ ಅಧ್ಯಯನ: ಚಿಂತಾಮಣಿ ತಾಲೂಕಿನ ಗ್ರಾಮ ಪಂಚಾಯಿತಿ ಪಿಡಿಒಗಳಿಂದ ಕ್ಷೇತ್ರ ಭೇಟಿ

ಘಟಕಗಳ ಕಾರ್ಯನಿರ್ವಹಣೆ, ನಿರ್ವಹಣಾ ವಿಧಾನ, ತ್ಯಾಜ್ಯ ವಿಂಗಡಣೆ, ಮರುಬಳಕೆ ಹಾಗೂ ಸಾವಯವ ಗೊಬ್ಬರ ತಯಾರಿಕೆ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಸಂಗ್ರಹಿಸಿ, ವೈಜ್ಞಾನಿಕವಾಗಿ ಸಂಸ್ಕರಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟುವ ಮಹತ್ವವನ್ನು ತಿಳಿಸಲಾಯಿತು.

ಚಿಂತಾಮಣಿ ತಾಲೂಕಿನ ಗ್ರಾಮ ಪಂಚಾಯಿತಿ ಪಿಡಿಒಗಳಿಂದ ಕ್ಷೇತ್ರ ಭೇಟಿ

-

Profile
Ashok Nayak Oct 29, 2026 11:47 PM

ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ಜತೆಗೆ ಘನ ಮತ್ತು ಮಲ ತ್ಯಾಜ್ಯ ವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿ ಹಳ್ಳಿ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಇಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ (ಎಸ್‌ಎಲ್‌ಡಬ್ಲ್ಯುಎಂ) ಹಾಗೂ ಮಲ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ (ಎಫ್‌ಎಸ್‌ಟಿಪಿ) ಚಿಂತಾಮಣಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಅಧ್ಯಯನ ನಡೆಸಿದರು.

ಭೇಟಿಯ ಸಂದರ್ಭದಲ್ಲಿ ಘಟಕಗಳ ಕಾರ್ಯನಿರ್ವಹಣೆ, ನಿರ್ವಹಣಾ ವಿಧಾನ, ತ್ಯಾಜ್ಯ ವಿಂಗಡಣೆ, ಮರುಬಳಕೆ ಹಾಗೂ ಸಾವಯವ ಗೊಬ್ಬರ ತಯಾರಿಕೆ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಸಂಗ್ರಹಿಸಿ, ವೈಜ್ಞಾನಿಕವಾಗಿ ಸಂಸ್ಕರಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟುವ ಮಹತ್ವವನ್ನು ತಿಳಿಸಲಾಯಿತು.

ಇದನ್ನೂ ಓದಿ: Chikkaballapur News: ಸಮುದಾಯದ ಏಳಿಗೆಯ ಗುರಿಯೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಅಭಿವೃದ್ಧಿ ಟ್ರಸ್ಟ್ ಸ್ಥಾಪನೆ: ಉಪಾಧ್ಯಕ್ಷ ಶಿವಕುಮಾರ್

ಘಟಕದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛ ಗ್ರಾಮ ನಿರ್ಮಾಣದ ಸಂದೇಶ ಸಾರುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು.

ಪೋಶೆಟ್ಟಿಹಳ್ಳಿಯಲ್ಲಿ ಅನುಸರಿಸುತ್ತಿರುವ ತ್ಯಾಜ್ಯ ನಿರ್ವಹಣಾ ಮಾದರಿಯನ್ನು ಇತರ ಗ್ರಾಮ ಪಂಚಾಯಿತಿಗಳಲ್ಲಿಯೂ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ತಿಳಿಸಲಾಯಿತು.

ಈ ಕ್ಷೇತ್ರ ಅಧ್ಯಯನದಲ್ಲಿ ಚಿಂತಾಮಣಿ ತಾಲೂಕು ಪಂಚಾಯಿತಿ ಸಿಬ್ಬಂದಿ, ಜಿಲ್ಲಾ ಸಮಾಲೋಚಕರು ಹಾಗೂ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.