ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ; ಚಿಕ್ಕಬಳ್ಳಾಪುರ ಬಂದ್‌ಗೆ ಕೈ ಕಾರ್ಯಕರ್ತರ ಕರೆ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ ಅಧೀಕಾರ ಸ್ವೀಕರಿಸಿದ ಬಳಿಕ ಬರೋಬ್ಬರಿ 2 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಆತಂಕರಿಕವಾಗಿ ಅಸಮಾಧಾನ ಬುಗಿಲೆದಿದ್ದು, 20 ಶಾಸಕರು ಈಗಾಗಲೇ ಸಚಿವ ಸ್ಥಾನ ಮಿಸ್ ಆಗಿರುವ ಹಿನ್ನಲೆ ನೇರವಾಗಿ ಪಕ್ಷದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ ಅಧೀಕಾರ ಸ್ವೀಕರಿಸಿದ ಬಳಿಕ ಬರೋಬ್ಬರಿ 2 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಆತಂಕರಿಕವಾಗಿ ಅಸಮಾಧಾನ ಬುಗಿಲೆದಿದ್ದು, 20 ಶಾಸಕರು ಈಗಾಗಲೇ ಸಚಿವ ಸ್ಥಾನ ಮಿಸ್ ಆಗಿರುವ ಹಿನ್ನಲೆ ನೇರವಾಗಿ ಪಕ್ಷದ ವಿರುದ್ಧ ಬೇಸರ ಹೊರಹಾಕಿದ್ದಾರೆ. ಇದರ ನಡುವೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ (SN Subbareddy) ಸಚಿವ ಸ್ಥಾನ ಸಿಗದ ಹಿನ್ನೆಲೆ ಸುಬ್ಬಾರೆಡ್ಡಿ ಬೆಂಬಲಿಗರು ಇಂದು ಬಂದ್ ಕರೆ ನೀಡಿದ್ದಾರೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಿದ್ದಾರೆ. ಇದರ ಭಾಗವಾಗಿ ಇಂದು ಬೆಳ್ಳಂ ಬೆಳಗ್ಗೆಯಿಂದಲೇ ಸುಬ್ಬಾರೆಡ್ಡಿ ಬೆಂಬಲಿಗರು ಬಾಗೇಪಲ್ಲಿ ಪಟ್ಟಣದಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಪ್ರತಿಭಟನಾಕಾರರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಿ ಮುಖ್ಯರಸ್ತೆ ತಡೆದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು, ಬಸ್, ಕಾರು, ಬೈಕ್‌ಗಳನ್ನು ಅಡ್ಡಗಟ್ಟಿ ನಿಲ್ಲಿಸಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡುತ್ತಿದ್ದಾರೆ.
ರಾಜೀನಾಮೆ ನೀಡಿದ್ರೆ ಕ್ಷಣದಲ್ಲಿ ಅಂಗೀಕಾರ; ಡಿಕೆ ಶಿವಕುಮಾರ್
"ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.
ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಲ್ಲ ಎಂದು ಕೇಳಿದಾಗ, "ನನಗೆ ಹಾಗೂ ಪರಮೇಶ್ವರ್ ಅವರಿಗೆ ಧರಂಸಿಂಗ್, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ ಸ್ಥಾನ ತಪ್ಪಿಸಿದರು. ಆಗ ನಾನೂ ರಾಜೀನಾಮೆ ಕೊಡಬಹುದಿತ್ತಲ್ಲವೇ? ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ ಅವರಿಗೇ ಮಂತ್ರಿಸ್ಥಾನ ನೀಡಿರಲಿಲ್ಲ. ನಂತರ ಬಂಗಾರಪ್ಪ ಅವರು, ಧರಂಸಿಂಗ್ ಅವರು ಮುಖ್ಯಮಂತ್ರಿಗಳಾಗಲಿಲ್ಲವೇ? ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸ್ಥಾನ ನೀಡಿರಲಿಲ್ಲ" ಎಂದು ಹೇಳಿದರು.
ಸಚಿವ ಸಂಪುಟದಲ್ಲಿ ಮಹಿಳೆಯರಿಗೇಕಿಲ್ಲ ಸ್ಥಾನ? ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಇಂತಹ ಸಂದರ್ಭದಲ್ಲಿ ತಾಳ್ಮೆಯಿಂದ ಇರಬೇಕು. ಎಲ್ಲದಕ್ಕಿಂತ ಪಕ್ಷ ಮುಖ್ಯ. ಎಲ್ಲಾ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಸೇರಿದಂತೆ ಇತರೇ ಹುದ್ದೆಗಳಿಗೆ ರಾಜೀನಾಮೆ ನೀಡಿ ಎಂದು ಸೂಚಿಸುತ್ತೇನೆ. ಎಲ್ಲರಿಗೂ ಮುಂಚಿತವಾಗಿ ಎರಡೂವರೆ ವರ್ಷ ಎಂದು ಸೂಚನೆ ನೀಡಿದ್ದೆವು. ಶಾಸಕರು, ಮಂತ್ರಿಗಳಿಗೂ ಇದನ್ನು ತಿಳಿಸಿದ್ದೆವು ಎಂದು ಅವರು ಹೇಳಿದ್ದಾರೆ.