ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ: ಊಟ, ಸ್ವಚ್ಛತೆ ಪರಿಶೀಲಿಸಿದ ತಹಸೀಲ್ದಾರ್

ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಅವರು, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರತಿನಿತ್ಯ ನಿಗದಿತ ಸಮಯವನ್ನು ಅಧ್ಯಯನಕ್ಕೆ ಮೀಸಲಿಡಬೇಕು. ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾ ತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಿದ್ಧತೆ ನಡೆಸಿ, ಸ್ಪಷ್ಟ ಗುರಿ ಹಾಗೂ ಶ್ರದ್ಧೆಯಿಂದ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು

ಗೌರಿಬಿದನೂರು: ನಗರದ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ತಹಸೀಲ್ದಾರ್ ಕೆ.ಎಂ. ಅರವಿಂದ್ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ವಸತಿ ನಿಲಯದ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ವಸತಿ ನಿಲಯದ ವೇಳಾಪಟ್ಟಿಯಂತೆ ಪ್ರತಿದಿನವೂ ಗುಣಮಟ್ಟದ ತಿಂಡಿ ಹಾಗೂ ಊಟ ನೀಡಲಾಗು ತ್ತಿದೆಯೇ, ಆಹಾರದ ರುಚಿ ಮತ್ತು ಸ್ವಚ್ಛತೆ ಹೇಗಿದೆ ಎಂಬುದನ್ನು ವಿದ್ಯಾರ್ಥಿನಿಯರಿಂದಲೇ ವಿಚಾರಿಸಿದರು. ಬಳಿಕ ಕೊಠಡಿಗಳು, ಅಡುಗೆ ಮನೆ, ಊಟದ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗ ದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ಇದನ್ನೂ ಓದಿ: Gauribidanur News: ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಿ

ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಅವರು, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರತಿನಿತ್ಯ ನಿಗದಿತ ಸಮಯವನ್ನು ಅಧ್ಯಯನಕ್ಕೆ ಮೀಸಲಿಡಬೇಕು. ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾ ತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಿದ್ಧತೆ ನಡೆಸಿ, ಸ್ಪಷ್ಟ ಗುರಿ ಹಾಗೂ ಶ್ರದ್ಧೆಯಿಂದ ಮುನ್ನಡೆಯ ಬೇಕು ಎಂದು ಕಿವಿಮಾತು ಹೇಳಿದರು.

ಪೌರಾಯುಕ್ತ ಕೆ.ಜಿ. ರಮೇಶ್ ಮಾತನಾಡಿ, ವಿದ್ಯಾರ್ಥಿ ಜೀವನವೇ ಭವಿಷ್ಯದ ಗುರಿ ರೂಪಿಸಿಕೊಳ್ಳುವ ಪ್ರಮುಖ ಹಂತವಾಗಿದ್ದು, ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು ಎಂದರು.

ವಿದ್ಯಾರ್ಥಿಗಳೊಂದಿಗೆ ಉಪಾಹಾರ: ತಹಸೀಲ್ದಾರ್ ಅರವಿಂದ್, ಪೌರಾಯುಕ್ತ ರಮೇಶ್ ಹಾಗೂ ಸಿಬ್ಬಂದಿ ವಿದ್ಯಾರ್ಥಿನಿಯರೊಂದಿಗೆ ಕುಳಿತು ಉಪಾಹಾರ ಸೇವಿಸಿದ್ದು ವಿಶೇಷವಾಗಿತ್ತು. ಇದರಿಂದ ವಿದ್ಯಾರ್ಥಿನಿಯರು ಸಂತಸ ವ್ಯಕ್ತಪಡಿಸಿದರು.

ನಂತರ ಹಾಜರಾತಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದ ತಹಸೀಲ್ದಾರ್, ವಸತಿ ನಿಲಯದ ನಿರ್ವಹಣೆಗೆ ಸಂಬಂಧಿಸಿದಂತೆ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಸ್ಟೆಲ್ ಮೇಲ್ವಿಚಾರಕಿ ಸುಕನ್ಯ, ಆರ್‌ಐ ಖಾದರ್, ವಸಂತಕುಮಾರಿ, ಸಂಜೀವಕುಮಾರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.