ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಮೀಕ್ಷೆಯಿಂದ ಪಡಿತರ ಚೀಟಿ ರದ್ದಾಗಲ್ಲ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ

ಸಮೀಕ್ಷೆಗೆ ಮಾಹಿತಿ ನೀಡಿದರೆ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಲಿವೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹ ಮಾತುಗಳಿಗೆ ಕಿವಿಕೊಡಬೇಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರಗತಿ ಹರ್ಷದಾಯಕವಾಗಿದೆ. ಬೆಂಗಳೂರು ನಗರ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯ ಬಹಳ ಚುರುಕಿನಿಂದ ಹಾಗೂ ಗುಣಾತ್ಮಕವಾಗಿ ಸಾಗುತ್ತಿದೆ.

ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಚುರುಕಿನಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಬಿಪಿಎಲ್ ಕಾರ್ಡ್ ಸೇರಿದಂತೆ ಯಾವುದೇ ರೀತಿಯ ಪಡಿತರ ಚೀಟಿ ರದ್ದಾಗುವು ದಿಲ್ಲ. ಸಾರ್ಜನಿಕರು ಹೆಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ (State Backward Commission member J N Srikanthaiah) ಅವರು ಸ್ಪಷ್ಟನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮೀಕ್ಷೆಗೆ ಮಾಹಿತಿ ನೀಡಿದರೆ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಲಿವೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹ ಮಾತುಗಳಿಗೆ ಕಿವಿಕೊಡಬೇಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರಗತಿ ಹರ್ಷದಾಯಕವಾಗಿದೆ. ಬೆಂಗಳೂರು ನಗರ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯ ಬಹಳ ಚುರುಕಿನಿಂದ ಹಾಗೂ ಗುಣಾತ್ಮಕವಾಗಿ ಸಾಗುತ್ತಿದೆ. ಸೆಪ್ಟೆಂಬರ್ ೨೨ ರಂದು ಆರಂಭವಾದ ಸಮೀಕ್ಷಾ ಕಾರ್ಯವು ಆರಂಭದ ೩ ದಿನಗಳಲ್ಲಿ ಕೆಲವು ಅನಿವಾರ್ಯ ಕಾರಣಗಳಿಂದ ಆಶಾದಾಯಕ ಪ್ರಗತಿ ಕಾಣಲಿಲ್ಲ. ಪ್ರಸ್ತುತ ಎಲ್ಲ ಕಡೆ ಸಮೀಕ್ಷೆ ಬಹಳ ಸಮರ್ಪಕ ವಾಗಿ ಹಾಗೂ ಶರವೇಗದಲ್ಲಿ ನಡೆಯುತ್ತಿದೆ. ನಿಗದಿತ ಅಕ್ಟೋಬರ್ ೭ ರಂದು ಸಮೀಕ್ಷಾ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಎಂದರು.

ಇದನ್ನೂ ಓದಿ: Chikkaballapur News: ಉದಾಸೀನವೇ ವಿದ್ಯಾರ್ಥಿ ಜೀವನಕ್ಕೆ ಮಹಾ ಶತ್ರು : ಕೋಡಿರಂಗಪ್ಪ ಅಭಿಮತ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೩,೨೦,೭೮೫ ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲು ೨,೯೧೩ ಬ್ಲಾಕ್ ಗಳನ್ನು ಮಾಡಿ ೨,೮೭೯ ಗಣತಿದಾರರು, 157 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಸಮೀಕ್ಷಾ ಕಾರ್ಯದ ಜಾಗೃತಿ ಮೂಡಿಸಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎನ್.ಆರ್.ಎಲ್.ಎಂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಸಿಬ್ಬಂದಿ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಈ ಎಲ್ಲ ಗಣತಿದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಇತರೆ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಡಳಿತದಿಂದ ಉತ್ತಮ ಸ್ಪಂದನೆ ಇದೆ. ಇದೇ ರೀತಿಯ ಸಮನ್ವಯತೆಯಿಂದ ತಂಡದ ರೀತಿ ಕೆಲಸ ಮಾಡಿ ನಿಗದಿತ ವೇಳೆಗೆ ಸಮೀಕ್ಷೆ ಕಾರ್ಯ ಮುಗಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೆಪ್ಟೆಂಬರ್ ೩೦ ಪೂರ್ವಾಹ್ನದ ವರೆಗೆ 109111 ಕುಟುಂಬಗಳ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ.

ಈ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ದಿನದಿಂದ ದಿನಕ್ಕೆ ಸಮೀಕ್ಷಾ ಕಾರ್ಯ ವೇಗವನ್ನು ಹೆಚ್ಚಿಸಿಕೊಳ್ಳುತ್ತಿದೆ. ಕಳೆದ ಶನಿವಾರ ೨೫,೦೦೦, ಭಾನುವಾರ ೩೨,೦೭೧ ಮನೆಗಳ ಸಮೀಕ್ಷೆಯನ್ನು ಮಾಡಲಾಗಿದೆ. ಇಂದು ೩೫ ಸಾವಿರಕ್ಕೂ ಹೆಚ್ಚು ಮನೆಗಳ ಸಮೀಕ್ಷೆ ಕಾರ್ಯ ಆಗಲಿದೆ ಎಂದು ಜಿಲ್ಲೆಯ ಅಂಕಿ ಅಂಶಗಳ ವಿವರವನ್ನು ನೀಡಿದರು.

ಸಿರ್ಬಿ ಜಾತಿ ನಮೂದಿಲ್ಲ

ಪ್ರಸ್ತುತ ನಡೆಯುತ್ತಿರುವ ಸಮೀಕ್ಷೆಯಲ್ಲಿ ಜಾತಿಗಳ ಪಟ್ಟಿಯಲ್ಲಿ ಸಿರ್ಬಿ ಜಾತಿ ನಮೂದಾಗಿಲ್ಲ. ಸಿರ್ಬಿ ಜಾತಿಯ ಒಂದು ಕುಟುಂಬ ಜಿಲ್ಲೆಯಲ್ಲಿ ಕಂಡು ಬಂದಿದ್ದು, ಸದರಿ ಕುಟುಂಬದವರನ್ನು ಸೇರ್ಪಡೆ ಮಾಡಲು ಆಯೋಗದಿಂದ ಕ್ರಮ ತೆಗೆದುಕಿಕೊಳ್ಳಲಾಗುವುದು. ಈ ಕುರಿತು ಜಿಲ್ಲಾಡಳಿತವು ಗಮನಕ್ಕೆ ತಂದಿದ್ದು, ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಗುಣಾತ್ಮಕವಾಗಿರಲಿ

ಸಮೀಕ್ಷಾ ಕಾರ್ಯವನ್ನು ಕರಾರುವಕ್ಕಾಗಿ ಮಾಡಲು ಅಗತ್ಯ ತರಬೇತಿ, ಸಿದ್ದತೆಯನ್ನು ಆಯೋಗ ಮಾಡಿಕೊಂಡು ಕಾಲೋಚಿತವಾಗಿ ನಿರ್ದೆಶನವನ್ನು ನೀಡುತ್ತಿದೆ. ಮೇಲ್ವಿಚಾರಕರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ಕ್ಷೇತ್ರ ಮಟ್ಟದಲ್ಲಿ ಪರಿಶೀಲಿಸಬೇಕು. ಯಾದೃಚ್ಚಿಕವಾಗಿ ಖಚಿಟಿಜom ಆಗಿ ತಪಾಸಣೆ ಮಾಡಬೇಕು. ನಾನು ಸಹ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಪರಿಶೀಲಿಸಿದ್ದೇನೆ. ಸಮೀಕ್ಷಾ ಕಾರ್ಯ ಸಮರ್ಪಕವಾಗಿ ಹಾಗೂ ಗುಣಾತ್ಮಕವಾಗಿ ಆಗುತ್ತಿದೆ. ಈ ಕಾರ್ಯವು ಸಮೀಕ್ಷೆ ಪೂರ್ಣ ಆಗುವವ ರೆಗೂ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಡಾ. ವೈ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮುನಿರತ್ನಮ್ಮ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.