Swamy Vivekanand: ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ನಗರದ ಸರ್ ಎಂ.ವಿ ಒಳಾಂಗಣ  ಕ್ರೀಡಾಂಗಣದಲ್ಲಿ ಸ್ವಾಮಿ ವಿವೇಕಾ ನಂದ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ರಾಷ್ಟ್ರೀಯ ಯುವ ಸಪ್ತಾಹ-2025” ರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು

Chikkaballapur_16-4
Profile Ashok Nayak Jan 16, 2025 10:07 PM

Source : Chikkaballapur Reporter

ಚಿಕ್ಕಬಳ್ಳಾಪುರ : ಸ್ವಾಮಿ ವಿವೇಕಾನಂದರು ಇಂದಿಗೂ ಎಂದೆಂದಿಗೂ ಯುವಕರಿಗೆ ಯುತ್ ಐಕಾನ್ ಆಗಿದ್ದು, ಯುವ ಜನತೆಯ ಶಕ್ತಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲೆಯ ಯುವ ಸಂಘಗಳು ಹಾಗೂ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ಇವರ ಸಂಯುಕ್ತಾಶ್ರದಲ್ಲಿ ನಗರದ ಸರ್ ಎಂ.ವಿ ಒಳಾಂಗಣ  ಕ್ರೀಡಾಂಗಣದಲ್ಲಿ ಸ್ವಾಮಿ ವಿವೇಕಾ ನಂದ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ರಾಷ್ಟ್ರೀಯ ಯುವ ಸಪ್ತಾಹ-2025” ರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ನಮ್ಮ ಆಲೋಚನೆಗಳು ನಮ್ಮನ್ನು ರೂಪಿಸುತ್ತವೆ, ಆದ್ದರಿಂದ ಏನನ್ನು ಯೋಚಿಸು ತ್ತೀರೋ ಅದರ ಬಗ್ಗೆ ಸಕಾರಾತ್ಮಕ ಆಲೋಚನೆ ಮಾಡಬೇಕು ಎಂದು ಹೇಳಿದ್ದ ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ  ಇತರೆ ದೇಶಗಳಿಗೂ ಸಹ ಅವರ ತತ್ವಗಳು, ವಿಚಾರಗಳು ಪ್ರಸ್ತುತ ಅವಶ್ಯಕವಾಗಿವೆ. ಭಾರತದ ಅಧ್ಯಾತ್ಮದ ಮೇರು ವ್ಯಕ್ತಿತ್ವವಾದ ವಿವೇಕಾನಂದರ ಕೊಡುಗೆಗಳಿಂದ ಯುವಕರ ಶಕ್ತಿಯಾಗಿದ್ದಾರೆ. ಅವರ ಸ್ಮರಣಾರ್ಥ, ಅವರ ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನ ವನ್ನು 'ರಾಷ್ಟ್ರೀಯ ಯುವ ದಿನ' ಎಂದು ಆಚರಣೆ ಮಾಡಲಾಗುತ್ತಿದೆ.

ವಿವೇಕಾನಂದರ ಅನೇಕ ವಿಚಾರ ದಾರೆಗಳನ್ನು ಒಳಗೊಂಡಿರುವ “ಬದಕಲು ಕಲಿಯಿರಿ” ಎಂಬ ಪುಸ್ತಕ ನನ್ನ ಜೀವನದ ಮೇಲೆ ತುಂಬ ಪ್ರಭಾವ ಬೀರಿದೆ. ಎಲ್ಲರ ಜೀವನದಲ್ಲಿ ಗುರು ಮತ್ತು ಗುರಿ ಬಹಳ ಮುಖ್ಯವಾಗಿದೆ ಇಂದಿನ ಯುವ ಜನತೆಯು ತಮ್ಮ ಜೀವನದ ಗುರಿ ಗಳನ್ನು ತಾವೇ ನಿರ್ಧರಿಸಿಕೊಳ್ಳಬೇಕು. ವಿವೇಕರು ವಿಶ್ವಕ್ಕೆ ಸಂದೇಶ ನೀಡಿದಂತೆ ಎಲ್ಲ ಯುವಜನತೆ ವಿಶಾಲ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ರಕ್ತದಾನ ಮಹಾದಾನ.  ಯುವಕರು ರಕ್ತದಾನ ಮಾಡುವ ಮೂಲಕ ಅನೇಕ ರೋಗಿಗಳಿಗೆ ಸಹಕಾರಿಯಾಗುತ್ತದೆ ಅನ್ನ ನೀಡುವ ರೈತ ವೆಂಕಟೇಶ್ ಅವರು ಸ್ವಯಂ ಪ್ರೇರಿತರಾಗಿ ಇಂದು ಕಾರ್ಯಕ್ರಮಕ್ಕೆ ಬಂದು ರಕ್ತದಾನ ಮಾಡಿರುವುದು ಶ್ಲಾಘನಿಯ ವಿಚಾರವಾಗಿದೆ ಎಂದು ತಿಳಿಸಿದರು.  

ಈ ವೇಳೆ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ಹಾಗೂ ರೆಡ್ ಕ್ರಾಸ್ ಸಂಸ್ಥೆಯಯಿಂದ ಹಮ್ಮಿ ಕೊಂಡಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳ ಸದಸ್ಯರು ರಕ್ತದಾನ ಮಾಡಿ ತಮ್ಮ ಸಾಮಾಜಿಕ ಜವಾಬ್ದಾರಿ ಮೆರೆದಿದ್ದಾರೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ರಕ್ತದಾನಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಅಭಿನಂದನೆಗಳನ್ನು ತಿಳಿಸಿದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಮಾತನಾಡಿ ಸ್ವಾಮಿ ವಿವೇಕಾ ನಂದ ಜನ್ಮ ದಿನಾಚರಣೆ ಅಂಗವಾಗಿ “ರಾಷ್ಟ್ರೀಯ ಯುವ ಸಪ್ತಾಹ-2025” ರ ಕಾರ್ಯ ಕ್ರಮದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಬಹಳ ಅರ್ಥಪೂರ್ಣವಾಗಿದೆ. ದೊಡ್ಡ ದೊಡ್ಡ ಬದಲಾವಣೆಗಳನ್ನು ಮಾಡಲು ದೊಡ್ಡ ದೊಡ್ಡ ಸಾಧನೆಗಳನ್ನೇ ಮಾಡ ಬೇಕಾಗಿಲ್ಲ. ರಕ್ತದಾನ, ಸಂಚಾರಿ ನಿಯಮಗಳ ಪಾಲನೆ, ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವಿಕೆಯಲ್ಲಿ ತಮ್ಮ ನಿತ್ಯದ ಬದುಕಲ್ಲಿ ಎಲ್ಲರೂ ಸಣ್ಣ ಸಣ್ಣ ಚಟುವಟಿಕೆಗಳ ಮೂಲಕ ಒಳ್ಳೆಯ ಕಾರ್ಯಗಳನ್ನು ಮಾಡಿದರೆ ದೊಡ್ಡ ಸುಧಾರಣೆ ಹಾಗೂ ಬದಲಾವಣೆ ಗಳನ್ನು ತರಬಹುದು.

ಈ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು. ನನ್ನ ವೈಕ್ತಿಕ ಜೀವನದಲ್ಲಿ ಸ್ವಾಮಿ ವಿವೇಕಾ ನಂದರು ಸ್ಪೂರ್ತಿದಾಯಕರಾಗಿದ್ದಾರೆ. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಭಾಷಣದ ಆರಂಭದಲ್ಲಿ ಸ್ವಾಮಿ ವಿವೇಕಾನಂದರು, 'ಅಮೆರಿಕದ ಸಹೋ ದರ ಸಹೋದರಿಯರೇ' ಎಂದು ಹೇಳಿದಾಗ ಸದನವು ಎರಡು ನಿಮಿಷಗಳ ಕಾಲ ಚಪ್ಪಾಳೆ ಯನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿತ್ತು, ಎಲ್ಲರೂ ಭಾರತೀಯ ಸಂಸ್ಕೃತಿಯ ಕಡೆಗೆ ತಿರುಗಿ ನೋಡುವಂತೆ ಮಾಡಿತು ಎಂದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ನಡೆಸಲಾಗುತ್ತಿದೆ. ಆದ್ದರಿಂದ ಎಲ್ಲ 18 ವರ್ಷ ತುಂಬಿದ ಯುವಕರು ವಾಹನ ಪರವಾನಗಿಯನ್ನು ಪಡೆಯಬೇಕು ಹಾಗೂ ರಸ್ತೆ ಸಂಚಾರಿ ನಿಯಮಗಳನ್ನು ಉಲ್ಲಘಂನೆ ಮಾಡದೇ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಚಿಕ್ಕಬಳ್ಳಾಪುರ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ಪ್ರಾಂಶುಪಾಲರಾದ ಸಿ,ಎಂ ಮುನಿಕೃಷ್ಣ ಮಾತನಾಡಿ ಸ್ವಾಮಿ ವಿವೇಕಾನಂದ ಅವರ ಜೀವನದ ಕುರಿತು ವಿಸ್ತಾರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾದ ಎನ್.ಎಂ ಜಗದೀಶ್, ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Chikkaballapur News: ಚಲೋ ಭೀಮ ಕೊರೆಂಗವ್ ಯಾತ್ರೆಗೆ ಚಾಲನೆ ನೀಡಿದ ವಕೀಲರ ಸಂಘದ ಅಧ್ಯಕ್ಷ: ಎ.ನಂಜುಂಡಪ್ಪ

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

urea
2:13 PM January 22, 2025

ಕೃಷಿ ಸಬ್ಸಿಡಿಗೆ ರೈತರು ಬಿಟ್ಟು ಉಳಿದವರೆಲ್ಲ ಫಲಾನುಭವಿಗಳು!

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು