ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಅಪಾಯದ ಮನೆಗಳಲ್ಲಿ ವಾಸವಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತಹಶೀಲ್ದಾರ್ ಕರೆ

ಇತ್ತೀಚಿಗೆ ಸುರಿದ ಬಾರಿ ಮಳೆಯಿಂದಾಗಿ ತೀವ್ರ ಹನಿಗೊಳಗಾದ ತಾಲ್ಲೂಕಿನ ಕಸಬಾ ಹೋಬಳಿಯ ಹೂದುತಿ ಗ್ರಾಮದ ಗೋವಿಂದಪ್ಪ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು. ಮಳೆಯ ಆರ್ಭಟಕ್ಕೆ ಮನೆಯ ಮೇಲ್ಟಾವಣಿ ಕುಸಿದಿದ್ದು, ಕಾಂಪೌಂಡ್ ಗೋಡೆಗಳು ಬಿದ್ದು ಹೋಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆ ವಾಸಕ್ಕೆ ಅಸುರಕ್ಷಿತ ಸ್ಥಿತಿಯಲ್ಲಿದೆ

ಅಪಾಯದ ಮನೆಗಳಲ್ಲಿ ವಾಸವಿರುವವರನ್ನು ಸ್ಥಳಾಂತರಿಸಿ

ತಾಲೂಕಿನಲ್ಲಿ ಅಪಾಯದ ಅಂಚಿನಲ್ಲಿರುವ ಮನೆಗಳಲ್ಲಿ ವಾಸಿಸುವವರನ್ನು ಗುರ್ತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಎಂದು ತಹಶೀಲ್ದಾರ್ ಕೆ.ಎಂ.ಅರವಿAದ್ ಅಧಿಕಾರಿಗಳಿಗೆ ಸೂಚನೆ ನೀಡಿದರು. -

Profile
Ashok Nayak Jun 16, 2026 12:26 AM

ಗೌರಿಬಿದನೂರು: ತಾಲೂಕಿನಲ್ಲಿ ಅಪಾಯದ ಅಂಚಿನಲ್ಲಿರುವ ಮನೆಗಳಲ್ಲಿ ವಾಸಿಸುವವರನ್ನು ಗುರ್ತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಎಂದು ತಹಶೀಲ್ದಾರ್ ಕೆ.ಎಂ.ಅರವಿಂದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚಿಗೆ ಸುರಿದ ಬಾರಿ ಮಳೆಯಿಂದಾಗಿ ತೀವ್ರ ಹನಿಗೊಳಗಾದ ತಾಲ್ಲೂಕಿನ ಕಸಬಾ ಹೋಬಳಿಯ ಹೂದುತಿ ಗ್ರಾಮದ ಗೋವಿಂದಪ್ಪ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ದರು. ಮಳೆಯ ಆರ್ಭಟಕ್ಕೆ ಮನೆಯ ಮೇಲ್ಟಾವಣಿ ಕುಸಿದಿದ್ದು, ಕಾಂಪೌಂಡ್ ಗೋಡೆಗಳು ಬಿದ್ದು ಹೋಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆ ವಾಸಕ್ಕೆ ಅಸುರಕ್ಷಿತ ಸ್ಥಿತಿಯಲ್ಲಿದೆ.

ಇದನ್ನೂ ಓದಿ: Gauribidanur News: ದೇವಸ್ಥಾನದ ಬಗ್ಗೆ ನನಗೆ ಭಾವನಾತ್ಮಕ ಸಂಬಂಧವಿದೆ: ಪ್ರವಚನಕಾರ ಶ್ರೀ ಶ್ರೀ ಮಾಂಕಾಲ ಹರಿ ಶರ್ಮ

ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ, ತಹಶೀಲ್ದಾರ್ ಅರವಿಂದ್ ಕೆ.ಎಂ. ಅವರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿ ಹಾನಿಯ ತೀವ್ರತೆಯನ್ನು ಖುದ್ದಾಗಿ ವೀಕ್ಷಿಸಿದ್ದೇನೆ. ಸಂತ್ರಸ್ತ ಗೋವಿಂದಪ್ಪ ಅವರ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆಯ ಲಾಗಿದೆ ಎಂದರು.

ಈ ವೇಳೆ, ಮಾತನಾಡಿದ ತಹಶೀಲ್ದಾರ್ ಸರ್ಕಾರದ ನಿಯಮಾನುಸಾರ ಸಂತ್ರಸ್ತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಗ್ರಾಮದ ನಿವಾಸಿಗಳು ಮಳೆಯ ತೀವ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಶಿಥಿಲಾ ವಸ್ಥೆಯಲ್ಲಿರುವ ಹಳೆಯ ಮನೆಗಳಿಗೆ ಅಪಾಯ ಹೆಚ್ಚಾಗಿದೆ ಎಂದು ಎಚ್ಚರಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದಲ್ಲಿ ಸಮಗ್ರ ಸಮೀಕ್ಷೆ ನಡೆಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರಲ್ಲದೆ, ಅಪಾಯದ ಅಂಚಿನಲ್ಲಿರುವ ಮನೆಗಳಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಾರ್ವಜನಿಕರು ತಹಶೀಲ್ದಾರ್ ಅವರಿಗೆ ಮನವಿ ಮಾಡಿದರು.