ಶಿಡ್ಲಘಟ್ಟ: ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯುವಂತೆ ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ತಹಶೀಲ್ದಾರ್ ಗಗನ ಸಿಂಧು(Tahsildar Gagan Sindhu) ತಿಳಿಸಿದರು.
ತಾಲೂಕಿನಲ್ಲಿ ಸೇರಿದಂತೆ ರಾಜ್ಯದಾದ್ಯಂತ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ(SSLC) (10ನೇ ತರಗತಿ) ವಾರ್ಷಿಕ ಸಾರ್ವಜನಿಕ ಪರೀಕ್ಷೆಗಳು ಮಾ.18ರಿಂದ ಆರಂಭವಾಗಲಿವೆ. ಪರೀಕ್ಷೆಗಳು ಏಪ್ರಿಲ್ 2ರವರೆಗೆ ನಡೆಯಲಿದ್ದು, ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗ ಲಿದ್ದಾರೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ ಎಂದರು.
ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ, ಗಡಿಯಾರ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿಯುತ ವಾತಾವರಣ ಕಾಪಾಡಲು ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: SSLC-2nd PUC Exam 2026: ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಪರೀಕ್ಷೆಯ ಮೊದಲ ದಿನ ಪ್ರಥಮ ಭಾಷೆಯ ಪ್ರಶ್ನೆಪತ್ರಿಕೆ ನಡೆಯಲಿದ್ದು, ನಂತರ ವಿಜ್ಞಾನ, ಗಣಿತ, ಭಾಷೆಗಳು ಹಾಗೂ ಸಮಾಜ ವಿಜ್ಞಾನ ಸೇರಿದಂತೆ ಇತರೆ ವಿಷಯಗಳ ಪರೀಕ್ಷೆಗಳು ಕ್ರಮವಾಗಿ ನಡೆಯಲಿವೆ. ಹೆಚ್ಚಿನ ಪರೀಕ್ಷೆಗಳು ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ನಡೆಯಲಿವೆ.
ತಾಲ್ಲೂಕಿನ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಎದುರಿಸಲು ಶಿಕ್ಷಕರು ವಿಶೇಷ ತರಗತಿ ಗಳು, ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಹಾಗೂ ಮಾರ್ಗದರ್ಶನ ನೀಡಿರುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ನಕಲು ಹಾಗೂ ಅನಿಯಮಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಮೊಬೈಲ್ ಫೋನ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ತರಲು ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಪೌರಾಯುಕ್ತೆ ಅಮೃತ ಜಿ ಹಾಗೂ ಡಾ.ವೆಂಕಟೇಶ್ ಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
![]()
“ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸುಗಮವಾಗಿ ನಡೆಯಲು ತಾಲೂಕಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿವೆ,” ಎಂದು ತಿಳಿಸಿ ದ್ದಾರೆ.
-ಗಗನಸಿಂಧು ತಹಶೀಲ್ದಾರ್