MLA S.N. Subbareddy: ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೂಚನೆ
ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯ ಸಾಧಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ವಿನೂತನ ಚಟುವಟಿಕೆಗಳನ್ನು ನಡೆಸಲಾಗಿದೆ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯು ವಲ್ಲಿ ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು
೨೦೨೫-೨೬ ನೇ ಸಾಲಿನ ಮುಂಬರುವ ದಿನಗಳಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇ.೧೦೦ ರಷ್ಟು ಪ್ರಗತಿ ಸಾಧಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. -
ಬಾಗೇಪಲ್ಲಿ: 2025-26ನೇ ಸಾಲಿನ ಮುಂಬರುವ ದಿನಗಳಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶ(SSLC Annual Exam Result) ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ(MLA S.N. Subba reddy) ಅಧಿಕಾರಿಗಳಿಗೆ ಸೂಚಿಸಿದರು.
ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣಾ ಕ್ರಮಗಳ ಕುರಿತು ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯ ಸಾಧಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ವಿನೂತನ ಚಟುವಟಿಕೆಗಳನ್ನು ನಡೆಸಲಾಗಿದೆ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯು ವಲ್ಲಿ ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಇಲಾಖೆಗೆ ಹಿಂದಿನ ವರ್ಷಗಳ ಮಾದರಿ ಪ್ರಶ್ನೆ ಪತ್ರಿಕೆ ವಿತರಿಸಲಾಗಿದೆ. ಈ ಪ್ರಶ್ನೆ ಪತ್ರಿಕೆ ಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಬೇಕು. ನಿಮ್ಮ ಕಡೆಯಿಂದ ಶೇ.100ರಷ್ಟು ಪ್ರಯತ್ನ ಮಾಡಬೇಕು. ಇದರಲ್ಲಿ ಮುಖ್ಯ ಶಿಕ್ಷಕರು ಹೆಚ್ಚು ಪ್ರಯತ್ನ ಮಾಡಬೇಕು ಎಂದರು.
ನಮ್ಮ ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಶೇ.100ರಷ್ಟು ಫಲಿತಾಂಶ ಸಾಧಿಸಲು ನಿಮ್ಮ ಪ್ರಯತ್ನ ಅತೀ ಮುಖ್ಯವಾದದ್ದು. ವಾರ್ಷಿಕ ಪರೀಕ್ಷೆಗೆ ಇನ್ನೂ 10 ದಿನಗಳ ಸಮಯ ವಿದೆ. ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೇಲೆ ಅತೀ ಹೆಚ್ಚು ನಿಗಾವಹಿಸಿ ಕಡಿಮೆ ಅಂಕ ಪಡೆದ ವಿಷಯದ ಮೇಲೆ ಹೆಚ್ಚು ಅಭ್ಯಾಸ ಮಾಡಿಸ ಬೇಕು ಎಂದರು.
ವಿದ್ಯಾರ್ಥಿಗಳು ಕಡಿಮೆ ಅಂಕಗಳನ್ನು ಪಡೆಯಲು ಕಾರಣಗಳೇನು ಎಂಬುದನ್ನು ವಿಶ್ಲೇಷಣೆಗೊಳಿಸಬೇಕು. ಸಮಸ್ಯೆಗಳನ್ನು ಪರಿಹರಿಸಿ ವಿದ್ಯಾರ್ಥಿಗಳ ಗೊಂದಲಗಳನ್ನು ಹೋಗಲಾಡಿಸಿ, ಉತ್ತಮ ಅಂಕ ಪಡೆಯಲು ಪ್ರೇರಣೆ ನೀಡಬೇಕು. ಏಕೆಂದರೆ ವಿದ್ಯಾರ್ಥಿ ಜೀವನದಲ್ಲಿ ಎಸ್.ಎಸ್.ಎಲ್.ಸಿ. ಯು ಬಹಳ ಪ್ರಮುಖ ಘಟ್ಟವಾಗಿದ್ದು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದಲ್ಲಿ ಮಾತ್ರ ಅವರು ಉನ್ನತ ಶಿಕ್ಷಣ ಪಡೆಯಲು ಸಹಾಯಕವಾಗುತ್ತದೆ ಮತ್ತು ಉತ್ತಮ ಭವಿಷ್ಯಕ್ಕೆ ನಾಂದಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿಇಓ ಎನ್. ವೆಂಕಟೇಶಪ್ಪ, ಶಿಕ್ಷಣ ಸಮನ್ವಯಾಧಿಕಾರಿ ಆರ್.ವೆಂಕಟ ರಾಮ್, ಆರ್.ಹನುಮಂತ ರೆಡ್ಡಿ,ಬಯ್ಯರೆಡ್ಡಿ, ಮುಖ್ಯ ಶಿಕ್ಷಕರಾದ ಜಿ.ರಾಮಸುಬ್ಬಮ್ಮ, ಲಲಿತಮ್ಮ,ವೇಣುಗೋಪಾಲ ರಾವ್, ವೆಂಕಟೇಶ್, ಕೆ.ವಿ. ಆದಿನಾರಾಯಣ, ಪದ್ಮಾವತಿ, ಮಂಜುನಾಥ್, ಶಿವಪ್ಪ, ಶ್ರೀನಿವಾಸ ರೆಡ್ಡಿ, ಡಿ.ಶಿವಣ್ಣ, ಡಿ.ಎನ್.ರಘುನಾಥ್, ಕಿಶೋರ್, ಪಿ.ಮಂಜುನಾಥ್ ರೆಡ್ಡಿ, ನರೇಂದ್ರ ಹಾಗೂ ಶಿಕ್ಷಕರು ಹಾಜರಿದ್ದರು.