MLA K.H.PuttaswamyGowda: ಉದ್ಯಮಿಗಳಿಗೆ ಬೇಕಾದ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಸದಾ ಸಿದ್ಧ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ
ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿ ಸಲು ಮುಂದೆ ಬರುವ ಉದ್ಯಮದಾರರಿಗೆ ಎಲ್ಲಾ ರೀತಿಯ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೈಗಾ ರಿಕಾ ವಾತಾವರಣ ನಿರ್ಮಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಕೆಎಚ್.ಪುಟ್ಟಸ್ವಾಮಿ ಗೌಡರು(MLA K.H. Puttaswamy Gowda) ತಿಳಿಸಿದರು.
ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುವ ಉದ್ಯಮದಾರರಿಗೆ ಎಲ್ಲಾ ರೀತಿಯ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೈಗಾರಿಕಾ ವಾತಾವರಣ ನಿರ್ಮಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ತಿಳಿಸಿದರು. -
ಗೌರಿಬಿದನೂರು: ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿ ಸಲು ಮುಂದೆ ಬರುವ ಉದ್ಯಮದಾರರಿಗೆ ಎಲ್ಲಾ ರೀತಿಯ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೈಗಾರಿಕಾ ವಾತಾವರಣ ನಿರ್ಮಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು(MLA K.H. Puttaswamy Gowda) ತಿಳಿಸಿದರು.
ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ಪ್ರಾರಂಭ ವಾಗುತ್ತಿರುವ ಅಸ್ಟ್ರಾ ಹಾಗೂ ಚಂದ್ರೋದಯ ಗಾರ್ಮೆಂಟ್ ಕಾರ್ಖಾನೆಗಳನ್ನು ಉದ್ಘಾ ಟನೆ ನಡೆಸಿ ಮಾತನಾಡಿದರು.
ಇದನ್ನೂ ಓದಿ : MLA Puttaswamy Gowda: ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಅಮೂಲಾಗ್ರ ಬದಲಾವಣೆಗೆ ಬದ್ಧ: ಶಾಸಕ ಪುಟ್ಟಸ್ವಾಮಿಗೌಡ
ಕುಡುಮಲಕುಂಟೆಯ ಮೂರನೇ ಹಂತದ ಕೈಗಾರಿಕಾ ಪ್ರದೇಶಾಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ರಾಜಧಾನಿ ಬೆಂಗಳೂರಿಗೆ ಅತಿ ಸಮೀಪವಿರುವ ಕುಡುಮಲಕುಂಟೆ ಕೈಗಾ ರಿಕಾ ಪ್ರದೇಶಕ್ಕೆ ರಾಜ್ಯ ಹೆದ್ದಾರಿ ,ರಾಷ್ಟ್ರೀಯ ಹೆದ್ದಾರಿ ಸಂಪರ್ಕವನ್ನು ಪಡೆದಿದೆ, ಇದರ ಜೊತೆ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಸಮೀಪವಿರುವ ದೇವರಪಲ್ಲಿ ರೈಲ್ವೇ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ರೈಲ್ವೇ ಸಚಿವರ ಜೊತೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ ಅವರು ಮುಂದಿನ ದಿನಗಳಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ತೆರೆಯಲು ಉದ್ಯಮಿ ಗಳನ್ನು ಮನವೊಲಿಸಲು ಮಾತುಕತೆ ನಡೆಸಲಾಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಸಾವಿರಾರು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಮಾಲೀಕರು, ಸ್ಥಳೀಯ ಕೆಎಚ್ಪಿ ಬಣದ ಮುಖಂಡರು ಗಳು ಹಾಗೂ ಇನ್ನಿತರರು ಹಾಜರಿದ್ದರು.