ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bagepally News: ಕಸಾಪದಿಂದ ತಾಲ್ಲೂಕು ಮಟ್ಟದ ರಸಪ್ರಶ್ನೆ ಲಿಖಿತ ಪರೀಕ್ಷೆ ಕಾರ್ಯಕ್ರಮ

70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ್ ತಿಂಗಳಲ್ಲಿ ಕನ್ನಡ ನೆಲ, ಜಲ, ನಾಡು, ನುಡಿ, ಕಲೆ ,ಸಂಸ್ಕೃತಿ ಹಾಗೂ ಸಾಹಿತ್ಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಜಾಗೃತಿ ಮೂಡಿಸುವ ಸಲುವಾಗಿ ಬಾಗೇಪಲ್ಲಿ ತಾಲ್ಲೂಕು ಕಸಾಪ ವತಿಯಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ  ಲಿಖಿತ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ

ಕಸಾಪದಿಂದ ತಾಲ್ಲೂಕು ಮಟ್ಟದ ರಸಪ್ರಶ್ನೆ ಲಿಖಿತ ಪರೀಕ್ಷೆ ಕಾರ್ಯಕ್ರಮ

ಕನ್ನಡ ರಸಪ್ರಶ್ನೆ  ಲಿಖಿತ ಪರೀಕ್ಷೆ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಾ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. -

Ashok Nayak
Ashok Nayak Nov 30, 2025 12:55 AM

ಬಾಗೇಪಲ್ಲಿ: ತಾಲೂಕು ಕಸಾಪ ವತಿಯಿಂದ ಪಟ್ಟಣದ ಸಂಪನ್ಮೂಲ ಕೇಂದ್ರದಲ್ಲಿ ಕನ್ನಡ ರಸಪ್ರಶ್ನೆ ಲಿಖಿತ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಇಓ ವೆಂಕಟೇಶಪ್ಪ. ಎನ್. ಉದ್ಘಾಟನೆ ಮಾಡಿ ಮಾತನಾಡಿ, 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ್ ತಿಂಗಳಲ್ಲಿ ಕನ್ನಡ ನೆಲ, ಜಲ, ನಾಡು, ನುಡಿ, ಕಲೆ ,ಸಂಸ್ಕೃತಿ ಹಾಗೂ ಸಾಹಿತ್ಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಜಾಗೃತಿ ಮೂಡಿಸುವ ಸಲುವಾಗಿ ಬಾಗೇಪಲ್ಲಿ ತಾಲ್ಲೂಕು ಕಸಾಪ ವತಿಯಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ  ಲಿಖಿತ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Bagepally News: ಅಡುಗೆ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಗೆ ಆಗ್ರಹ

ತಾಲ್ಲೂಕಿನ ಶಾಲೆಗಳಲ್ಲಿ ಕನ್ನಡ ಸಾಹಿತ್ಯದ ಕನ್ನಡದ ಕಂಪು ಪಸರಿಸಲು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.

ತಾಲ್ಲೂಕಿನ ಪಟ್ಟಣದ ಹಾಗೂ ಕಸಭಾ ಹೋಬಳಿ ಮಟ್ಟದ ಎಲ್ಲಾ ಪ್ರೌಢಶಾಲೆಗಳ ಸುಮಾರು ೮೦ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದರು. ಕನ್ನಡ ರಸಪ್ರಶ್ನೆ ಲಿಖಿತ ಪರೀಕ್ಷೆ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಾ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.

ಕಾರ್ಯಕ್ರಮದಲ್ಲಿ  ಸಾಕ್ಷರತೆ ಶಿವಪ್ಪ, ಟಿಪಿಓ ರಂಗನಾಥ್ ಇಸಿಓ ಪದ್ಮಾವತಿ, ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತುನ ಮಹಿಳಾ ಪ್ರತಿನಿಧಿ ಜ್ಯೋತಿ, ಎಲ್ಲಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.