ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Shidlaghatta News: ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ ಮತ್ತು ಇಲಾಖೆಗಳ ಪ್ರಗತಿ ಪರಿಶೀಲನೆ

ಅಂಗನವಾಡಿ ಸಹಿತ ಯಾವುದೇ ಸಮಸ್ಯೆಗಳು ತಲೆದೋರ ದಂತೆ ಮುಂಜಾಗರೂಕತೆ ವಹಿಸಲು ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿ ಕೊಳ್ಳಬೇಕು. ಮಕ್ಕಳ ಸುರಕ್ಷತೆಯ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ರೀತಿಯಾಗಿ ಗಮನಹರಿಸಿ, ಡೆಂಗ್ಯೂ,ಮಲೇರಿಯಾ, ಚಿಕನ್ ಗುನ್ಯಾ ಅಂತಹ ಮಹಾಮಾರಿ ರೋಗಗಳ ಬಗ್ಗೆ ಅರಿವು ಮೂಡಿಸುವಂತೆ ಆಗಬೇಕು

ತಾ.ಪಂ ಸಾಮಾನ್ಯ ಸಭೆ ಮತ್ತು ಇಲಾಖೆಗಳ ಪ್ರಗತಿ ಪರಿಶೀಲನೆ

ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಸಾಮಾನ್ಯ ಸಭೆ ಮತ್ತು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. -

Ashok Nayak
Ashok Nayak Jan 17, 2026 10:01 PM

ಶಿಡ್ಲಘಟ್ಟ: ತಾಲ್ಲೂಕು ಮಟ್ಟದಲ್ಲಿ ಮುಂದಿನ ಮಳೆಗಾಲ ಸಂದರ್ಭ ಶಾಲೆ, ಅಂಗನವಾಡಿ ಸಹಿತ ಯಾವುದೇ ಸಮಸ್ಯೆಗಳು ತಲೆದೋರದಂತೆ ಮುಂಜಾಗರೂಕತೆ ವಹಿಸಲು ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿಕೊಳ್ಳಬೇಕು ತಾಲ್ಲೂಕು ಪಂಚಾಯಿತಿ ಜತೆ ಸಮನ್ವಯದಿಂದ ಕೆಲಸ ಮಾಡಲು ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಅಬಿದ ಸೈಯದ ಸಾಹೇಬಜಾನ್ ಸೂಚನೆ ನೀಡಿದರು.

17cbpm7k ok

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂಗನವಾಡಿ ಸಹಿತ ಯಾವುದೇ ಸಮಸ್ಯೆಗಳು ತಲೆದೋರ ದಂತೆ ಮುಂಜಾಗರೂಕತೆ ವಹಿಸಲು ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿ ಕೊಳ್ಳಬೇಕು. ಮಕ್ಕಳ ಸುರಕ್ಷತೆಯ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ರೀತಿಯಾಗಿ ಗಮನಹರಿಸಿ, ಡೆಂಗ್ಯೂ,ಮಲೇರಿಯಾ, ಚಿಕನ್ ಗುನ್ಯಾ ಅಂತಹ ಮಹಾಮಾರಿ ರೋಗಗಳ ಬಗ್ಗೆ ಅರಿವು ಮೂಡಿಸುವಂತೆ ಆಗಬೇಕು ಎಂದರು.

ಇದನ್ನೂ ಓದಿ: Shidlaghatta News: ಕ್ಷೇತ್ರಕ್ಕೆ ನಾವೇ ಅವರನ್ನ ಆಯ್ಕೆ ಮಾಡಿದ್ದೇವೆ: ಕ್ಷಮೆಯಾಚಿಸಿದ ಶಶಿಧರ್ ಮುನಿಯಪ್ಪ

ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟ ಪ್ರತಿಬಿಂಬಿಸುವ  ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು  ಧೈರ್ಯವಾಗಿ ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ವಿಶೇಷ ತರಗತಿಗಳನ್ನು ಮಾಡುವ ಮೂಲಕ ಬರುವ ಪರೀಕ್ಷೆಯಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕೆಂದು ಸೂಚಿಸಿದರು.

ತಾಲ್ಲೂಕಿನ ಅಭಿವೃದ್ಧಿ ಕಾರ್ಯಕ್ರಮಗಳ ಸಮನ್ವಯ, ಮೇಲ್ವಿಚಾರಣೆ ಮತ್ತು ಸಮಗ್ರ ಯೋಜನೆ ಗಳ ಅನುಷ್ಠಾನದ ಬಗ್ಗೆ ಚರ್ಚಿಸಲಾಯಿತು.ಕೃಷಿ,ಗ್ರಾಮೀಣ ವಸತಿ, ನೀರು ಸರಬರಾಜು, ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.