Teacher Award: ನೇತಾಜಿ ಯುವಕ ಸಂಘದಿಂದ ಶಿಕ್ಷಕ ಪ್ರಶಸ್ತಿ ಪ್ರದಾನ
ಈ ಬಾರಿ ಅಲಕಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗೋಪಾಲ ಆರ್.ಬಿ. ಅವರಿಗೆ ‘ನೇತಾಜಿ ಶಿಕ್ಷಕ ಪ್ರಶಸ್ತಿ’ ಹಾಗೂ ಗೌರಿಬಿದನೂರು ಕೋಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶಬ್ರೀನ್ ತಾಜ್ ಅವರಿಗೆ ‘ನೇತಾಜಿ ಶಿಕ್ಷಕಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
-
ಗೌರಿಬಿದನೂರು: ನೇತಾಜಿ ಯುವಕ ಸಂಘದ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸು ತ್ತಿರುವ ಶಿಕ್ಷಕರಿಗೆ ‘ನೇತಾಜಿ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಈ ಬಾರಿ ಅಲಕಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗೋಪಾಲ ಆರ್.ಬಿ. ಅವರಿಗೆ ‘ನೇತಾಜಿ ಶಿಕ್ಷಕ ಪ್ರಶಸ್ತಿ’ ಹಾಗೂ ಗೌರಿಬಿದನೂರು ಕೋಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶಬ್ರೀನ್ ತಾಜ್ ಅವರಿಗೆ ‘ನೇತಾಜಿ ಶಿಕ್ಷಕಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: Gauribidanur News: ಸ್ವಯಂ ತೆರವುಗೊಳಿಸದಿದ್ದರೆ ಮುನ್ಸೂಚನೆ ಇಲ್ಲದೆ ನಗರಸಭೆಯಿಂದ ಕಾರ್ಯಾಚರಣೆ: ಪೌರಾಯುಕ್ತ ರಮೇಶ್
ಸಂಘದ ಅಧ್ಯಕ್ಷ, ವಕೀಲ ಅಶೋಕ ಎ. ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸಮಾಜ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.
ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕರು, ಯುವ ಸಂಘಟನೆಗಳು ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸು ವುದು ಮತ್ತಷ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಪ್ರೇರಣೆ ನೀಡುತ್ತದೆ ಎಂದು ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಿಕ್ಕಣ್ಣ, ಸದಸ್ಯರಾದ ಗೌರೀಶ್, ನಂಜುಂಡಪ್ಪ, ಕೆ.ವಿ. ಪ್ರಕಾಶ್, ಜಯಕುಮಾರ್, ಅಂಬರೀಷ್, ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.