ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೈಸೂರು ದಸರಾ ಚುಟುಕು ಕವಿಗೋಷ್ಠಿಗೆ ಶಿಕ್ಷಕ ಆರ್.ವಿ.ವಿನೋದ್ ಕುಮಾರ್ ಆಯ್ಕೆ

ರಾಜ್ಯದ ಕವಿಗಳಿಂದ ಆಹ್ವಾನಿಸಲಾಗಿದ್ದ ಕವಿತೆಗಳನ್ನು ಅವುಗಳ ಪ್ರಬುದ್ಧತೆಯ ಆಧಾರದಲ್ಲಿ ಪರಿಶೀಲಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ವಿನೋದ್ ಕುಮಾರ್ ಅವರ ಚುಟುಕು ಹಾಗೂ ಹಾಸ್ಯ ಕವಿತೆಗಳು ಗೋಷ್ಠಿಗೆ ಆಯ್ಕೆಯಾಗಿವೆ. ಅ.13ರಂದು ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಅವರು ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿಯು ಆಯೋಜಿಸುವ ಚುಟುಕು ಕವಿಗೋಷ್ಠಿಗೆ ಚಿಕ್ಕಬಳ್ಳಾಪುರದ ಶಿಕ್ಷಕ ಆರ್.ವಿ. ವಿನೋದ್ ಕುಮಾರ್(R V Vinod Kumar) ಆಯ್ಕೆಯಾಗಿದ್ದಾರೆ.

ರಾಜ್ಯದ ಕವಿಗಳಿಂದ ಆಹ್ವಾನಿಸಲಾಗಿದ್ದ ಕವಿತೆಗಳನ್ನು ಅವುಗಳ ಪ್ರಬುದ್ಧತೆಯ ಆಧಾರದಲ್ಲಿ ಪರಿಶೀಲಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ವಿನೋದ್ ಕುಮಾರ್ ಅವರ ಚುಟುಕು ಹಾಗೂ ಹಾಸ್ಯ ಕವಿತೆಗಳು ಗೋಷ್ಠಿಗೆ ಆಯ್ಕೆಯಾಗಿವೆ. ಅ.13ರಂದು ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ; Chikkaballapur News: ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಕಾನೂನು ಪಾಲನೆಗೆ ಅಧಿಕಾರಿಗಳಿಗೆ ತರಬೇತಿ

ಚಿಕ್ಕಬಳ್ಳಾಪುರದ ನಿವಾಸಿಯಾದ ವಿನೋದ್ ಕುಮಾರ್ ಅವರು ಪ್ರಸ್ತುತ ಗೌರಿಬಿದನೂರು ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಕೋಟೆ ಶಾಲೆಯಲ್ಲಿ ಸಹಶಿಕ್ಷಕರಾಗಿ ಕಾರ್ಯ ನಿರ್ವಹಿಸು ತ್ತಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಅವರು ಈಗಾಗಲೇ ಎರಡು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ.