ಚಿಕ್ಕಬಳ್ಳಾಪುರ: ಸ್ಟಿಂಗ್ ಆಪರೇಷನ್(Sting Operation) ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(H D Kumaraswamy) ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಯುತ್ತಿದ್ದು, ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್(JDS) ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಆರೋಪಿಸಿದರು.
ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ನಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ತನಿಖೆ ನಡೆಸುವ ಬದಲು, ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಗೌಪ್ಯ ಮಾಹಿತಿ ಯನ್ನು ಬಹಿರಂಗಪಡಿಸುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ದೂರಿದರು.
ಇದನ್ನೂ ಓದಿ: Chikkaballapur News: ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ಸದಾಶಿವ ಆರಾಧ್ಯ
ಸ್ಟಿಂಗ್ ಆಪರೇಷನ್ನ ಹಿಂದಿರುವ ವ್ಯಕ್ತಿಗಳು ಹಾಗೂ ಅದರ ಉದ್ದೇಶವನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
2028ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾವು ಈಗಾಗಲೇ ಟಿಕೆಟ್ ಪ್ರಯತ್ನ ನಡೆಸುತ್ತಿದ್ದು, ಪಕ್ಷದ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ತಿಳಿಸಿದರು.
ಗೋಷ್ಠಿಯಲ್ಲಿ ಕೆ.ಆರ್. ರೆಡ್ಡಿ,ಯಲುವಳ್ಳಿ ಸೊಣ್ಣೇಗೌಡ ಶಾಂತಮೂರ್ತಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.