ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅರವಿಂದ್ ಕೇಜ್ರಿವಾಲ್ ಮೇಲೆ ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ: ಬೈ ರೆಡ್ಡಿ

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ದೇಶಾ ದ್ಯಂತ ಪಕ್ಷದ ಪ್ರಭಾವ ಹೆಚ್ಚುತ್ತಿರುವುದನ್ನು ಸಹಿಸದೇ ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸುಳ್ಳು ಆರೋಪಗಳನ್ನು ಹೊರೆಸಿತು

ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ

ಸುದ್ದಿಗೋಷ್ಟಿಯಲ್ಲಿ ಬೈರೆಡ್ಡಿ ಮಾತನಾಡಿದರು -

Ashok Nayak
Ashok Nayak Mar 1, 2026 12:11 AM

ಚಿಕ್ಕಬಳ್ಳಾಪುರ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Former Chief Minister Arvind Kejriwal) ಹಾಗೂ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ( Former Deputy Chief Minister Manish Sisodia) ಅವರನ್ನು ದೆಹಲಿ ನ್ಯಾಯಾಲಯ( Delhi Court)ವು ಅಬಕಾರಿ ನೀತಿ ಪ್ರಕರಣ(Excise policy case)ದಲ್ಲಿ ಆರೋಪಮುಕ್ತ ಗೊಳಿಸಿರುವುದು ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ ಎಂದು ಆಮ್ ಆದ್ಮಿ ಪಕ್ಷ(Aam Aadmi Party)ದ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಬೈರೆಡ್ಡಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ದೇಶಾ ದ್ಯಂತ ಪಕ್ಷದ ಪ್ರಭಾವ ಹೆಚ್ಚುತ್ತಿರುವುದನ್ನು ಸಹಿಸದೇ ಬಿಜೆಪಿ ಕೇಂದ್ರ ತನಿಖಾ ಸಂಸ್ಥೆ ಗಳನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸುಳ್ಳು ಆರೋಪಗಳನ್ನು ಹೊರೆಸಿತು . ಅಬಕಾರಿ ನೀತಿ ಪ್ರಕರಣದ ಬೆಳವಣಿಗೆಗಳು ರಾಜಕೀಯ ಪ್ರೇರಿತವಾಗಿದ್ದವು ಎಂಬುದು ನ್ಯಾಯಾಲಯದ ಆದೇಶದಿಂದ ಸ್ಪಷ್ಟವಾಗಿದೆ ಎಂದರು.

ಇದನ್ನೂ ಓದಿ: Chikkaballapur News: 25 ಸಾವಿರ ಫಲಾನುಭವಿಗಳಿಗೆ ಕಂದಾಯ ಸವಲತ್ತುಗಳ ವಿತರಣೆ: ಜಿಲ್ಲಾಧಿಕಾರಿ ಜಿ.ಪ್ರಭು

ಪ್ರಧಾನಿ ಹಾಗೂ ಕೇಂದ್ರ ಸಚಿವ ಅವರು ಆಮ್ ಆದ್ಮಿ ಪಕ್ಷದ ಜನಪ್ರಿಯತೆ ಸಹಿಸದೇ ನಾಯಕರನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ .ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಮೇಲೆ ಒತ್ತಡ ಹೇರಿ,ಕೇಜ್ರಿವಾಲ್ ಅವರ ಹೆಸರಿಗೆ ಕಳಂಕ ತರುವ ಯತ್ನ ನಡೆದಿದೆ ಎಂದು ಹೇಳಿದರು.

ಪ್ರಕರಣದ ಸಂಬಂಧ ಬಂಧನ ಸೇರಿದಂತೆ ಮಾನಸಿಕ ಹಿಂಸೆ ನೀಡಲಾಗಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ಆರೋಗ್ಯ,ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಾದರಿ ಯೋಜನೆಗಳನ್ನು ಜಾರಿಗೆ ತಂದು ಜನಪ್ರಿಯತೆಗಳಿಸಿದೆ. ಇದನ್ನು ಸಹಿಸದ ಬಿಜೆಪಿ ಪಕ್ಷ ವನ್ನು ಕುಗ್ಗಿಸಲು ಯತ್ನಿಸಿತು. ಆದರೆ ನ್ಯಾಯಾಲಯದ ಆದೇಶದಿಂದ ನಮ್ಮ ನಾಯಕರಿಗೆ ನ್ಯಾಯ ದೊರೆತಿದ್ದು,ಜನಸೇವೆ ಮಾಡಲು ಮತ್ತಷ್ಟು ಶಕ್ತಿ ದೊರೆತಿದೆ.ಇನ್ನಾದರೂ ಬಿಜೆಪಿ ಇಲ್ಲಸಲ್ಲದ ಆರೋಪಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದೆಹಲಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ ಪಕ್ಷದ ಕಾರ್ಯ ಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ನಾಸಿರ್ ಆಲಿ, ಅಶೋಕ್, ಗೋಪಾಲ್, ಜ್ಯೋತಿ, ಮತ್ತಿತರರು ಇದ್ದರು.