ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Engineers Day: ದೇಶದ ಅಭಿವೃದ್ಧಿಗೆ ಇಂಜಿನಿಯರ್‌ಗಳ ಕೊಡುಗೆ ಅಪಾರ : ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಟಿ. ನಾಗರಾಜು

ಆಧುನಿಕ ಮೈಸೂರಿನ ಪಿತಾಮಹ ಎಂದು ಕರೆಯಲ್ಪಡುವ ವಿಶ್ವೇಶ್ವರಯ್ಯನವರ ಸಾಧನೆಗಳು ಮತ್ತು ಕೃಷ್ಣರಾಜ ಸಾಗರ ಅಣೆಕಟ್ಟು ನಿರ್ಮಾಣ ಕುರಿತ ಮಾಹಿತಿಯನ್ನು ನೀಡಿ, ಇಂಜಿನಿಯರ್ ಗಳು ದೇಶದ ಮೂಲ ಸೌಕರ್ಯ ಮತ್ತು ಆರ್ಥಿಕ ಅಭಿವೃದ್ಧಿ ಯಲ್ಲಿ ಮಹತ್ವದ ಪಾತ್ರ ವಹಿಸಿರುವುದನ್ನು ಹಾಗೂ ಅವರ ಕೊಡುಗೆಯನ್ನು ಗೌರವಿಸಲು ಈ ದಿನ ಆಚರಿಸಬೇಕು

ಚಿಕ್ಕಬಳ್ಳಾಪುರ : ಸೆ.೧೫ ರಂದು ಸರ್. ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಅಂಗವಾಗಿ ಚಿಂತಾಮಣಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇಂಜಿನಿಯರಿಂಗ್ ಘಟಕ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ “ಇಂಜಿನಿಯರ್ ಗಳ ದಿನಾಚರಣೆ” ಕಾರ್ಯಕ್ರಮವನ್ನು ಚಿಂತಾಮಣಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಟಿ. ನಾಗರಾಜು ಉದ್ಘಾಟಿಸಿದರು.

ಈ ವೇಳೆ ಅವರು ಮಾತನಾಡಿ, ಆಧುನಿಕ ಮೈಸೂರಿನ ಪಿತಾಮಹ ಎಂದು ಕರೆಯಲ್ಪಡುವ ವಿಶ್ವೇಶ್ವರಯ್ಯನವರ ಸಾಧನೆಗಳು ಮತ್ತು ಕೃಷ್ಣರಾಜ ಸಾಗರ ಅಣೆಕಟ್ಟು ನಿರ್ಮಾಣ ಕುರಿತ ಮಾಹಿತಿಯನ್ನು ನೀಡಿ, ಇಂಜಿನಿಯರ್ ಗಳು ದೇಶದ ಮೂಲ ಸೌಕರ್ಯ ಮತ್ತು ಆರ್ಥಿಕ ಅಭಿವೃದ್ಧಿ ಯಲ್ಲಿ ಮಹತ್ವದ ಪಾತ್ರ ವಹಿಸಿರುವುದನ್ನು ಹಾಗೂ ಅವರ ಕೊಡುಗೆಯನ್ನು ಗೌರವಿಸಲು ಈ ದಿನ ಆಚರಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Engineers Day: ಎಸ್‌ಜೆಸಿಐಟಿ ಕ್ಯಾಂಪಸ್ಸಿನಲ್ಲಿ "ಇಂಜಿನಿರ‍್ಸ್ ಡೇ" ಹಾಗೂ ಶಿಕ್ಷಕರ ದಿನಾಚರಣೆಯ ಸಂಭ್ರಮ

ಸುದರ್ಶನ್ ಕಾರ್ಕಳ ಮಾತನಾಡಿ, ತಂತ್ರಜ್ಞಾನದ ಪ್ರಯೋಜನಗಳು, ಸೈಬರ್ ಭದ್ರತೆ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿ ಆದ ಅಭಿವೃದ್ದಿಗೆ ಸರ್. ಎಂ.ವಿಶ್ವೇಶ್ವರಯ್ಯನವರ ದೂರದೃಷ್ಠಿಯೇ ಕಾರಣ ಎಂದು ತಿಳಿಸಿದರು.

ಚಿಂತಾಮಣಿ ವಿಟಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಶಿವಮೂರ್ತಿ ರವರು ಮಾತನಾಡಿ, ದೇಶದ ಅಭಿವೃದ್ದಿಯಲ್ಲಿ, ತಾಂತ್ರಿಕ ಪ್ರಗತಿಯಲ್ಲಿ ಇಂಜಿನಿಯರ್‌ಗಳ ಪಾತ್ರ ಮಹತ್ವವಾಗಿದೆ. ಇಂಜಿನಿಯರ್ ಗಳನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಸೆಪ್ಟೆಂಬರ್-೧೫ ರಂದು ಭಾರತದಲ್ಲಿ ಇಂಜಿನಿಯರ್ಸ್ ದಿನ ಆಚರಿಸಲಾಗುತ್ತದೆ. ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಹಾಗೂ ಶ್ರೇಷ್ಠ ಇಂಜಿನಿಯರ್ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು ರಾಷ್ಟ್ರ ನಿರ್ಮಾಣದ ಅಭಿವೃದ್ಧಿ ಯಲ್ಲಿ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ ನೀರಾವರಿ, ಕೈಗಾರಿಕೆ, ದೇಶದ ಮೂಲಸೌಕರ್ಯ ಮತ್ತು ಆರ್ಥಿಕ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ದಿಗೆ ಇವರ ಅದ್ಬುತ ಕೊಡುಗೆಗಳನ್ನು ಸ್ಮರಿಸುತ್ತಾ ಅವರ ಸಮಯ ಪಾಲನೆ, ಶಿಸ್ತು ಮತ್ತು ಕಠಿಣ ಪರಿಶ್ರಮವನ್ನು ಅರಿತು ಎಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಲಿಸಬೇಕಾಗಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.