ಸಂಪತ್ತು, ಅಧಿಕಾರ ಸಮಾನ ಹಂಚಿಕೆಯಾದಾಗ ದೇಶದ ನೈಜ ಉದ್ಧಾರ: ಎಲ್.ಎನ್.ಮುಕುಂದರಾಜ್
ಸಂವಿಧಾನ ನೀಡಿರುವ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಅರಿತು ಪ್ರತಿಯೊ ಬ್ಬರೂ ನಡೆದುಕೊಳ್ಳಬೇಕು. ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರಂತಹ ಮಹನೀಯರು ರೂಪಿಸಿದ ಸಂವಿಧಾನದ ಶಕ್ತಿಯಿಂದಾಗಿ ಇಂದು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ದೊರೆತಿವೆ.
-
ಚಿಂತಾಮಣಿ: ಸಂಪತ್ತು ಮತ್ತು ಅಧಿಕಾರ ಕೆಲವೇ ಜನರ ಕೈಯಲ್ಲಿ ಕೇಂದ್ರೀಕೃತವಾಗದೆ, ಸಮಾಜದ ಎಲ್ಲ ವರ್ಗಗಳಿಗೂ ವಿದ್ಯೆ, ಉದ್ಯೋಗ ಹಾಗೂ ಸಂಪನ್ಮೂಲಗಳಲ್ಲಿ ಸಮಾನ ಅವಕಾಶ ದೊರೆತಾಗ ಮಾತ್ರ ದೇಶದ ನೈಜ ಉದ್ಧಾರ ಸಾಧ್ಯ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಹೇಳಿದರು.
ಚಿಂತಾಮಣಿ ನಗರದ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿ ಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭ ದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಇದನ್ನೂ ಓದಿ; Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ
ಸಂವಿಧಾನ ನೀಡಿರುವ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಅರಿತು ಪ್ರತಿ ಯೊಬ್ಬರೂ ನಡೆದುಕೊಳ್ಳಬೇಕು. ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರಂತಹ ಮಹನೀಯರು ರೂಪಿಸಿದ ಸಂವಿಧಾನದ ಶಕ್ತಿಯಿಂದಾಗಿ ಇಂದು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ದೊರೆತಿವೆ. ಮಹಿಳೆಯರು ದೇಶದ ಪ್ರಧಾನಮಂತ್ರಿ, ರಾಷ್ಟ್ರಪತಿ ಸೇರಿದಂತೆ ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಂವಿಧಾನವೇ ಮೂಲ ಕಾರಣ ಎಂದರು.
ದೇವರಾಜ ಅರಸು ಅವರು ತಮ್ಮ ಸಮುದಾಯದ ಸಂಖ್ಯಾಬಲ ಕಡಿಮೆಯಿದ್ದರೂ ರಾಜ್ಯದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿ ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದರು. ಸಂವಿಧಾನ ನೀಡಿದ ಅಧಿಕಾರವನ್ನು ಸಾಮಾಜಿಕ ಪರಿವರ್ತನೆಗೆ ಬಳಸಿಕೊಂಡು ನಾಡಿನಲ್ಲಿ ಮಹತ್ವದ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.
ಸಾಮಾಜಿಕ ನ್ಯಾಯದ ಜಾಗೃತಿ ಅಗತ್ಯ
ಸಾಮಾಜಿಕ ಹೋರಾಟಗಾರರಾದ ರೂತ್ ಮನೋರಮಾ ಹಾಗೂ ಡಾ.ಅಕ್ಕೈ ಪದ್ಮಶಾಲಿ ಮಾತನಾಡಿ, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಂವಿಧಾನದ ಮೌಲ್ಯಗಳ ಕುರಿತು ಯುವ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿ ಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಕಲ್ಯಾಣಾಧಿಕಾರಿ ಸಕ್ಪಾಲ್ ಆರ್., ತಾಲೂಕು ವಿಸ್ತರಣಾಧಿಕಾರಿ ಬೇಬಿರಾಣಿ ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.