ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಹಿಳಾ ಪ್ರಾತಿನಿಧ್ಯಕ್ಕೆ ಆದ ಸೋಲು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ : ರಾಜ್ಯ ಓಬಿಸಿ ಉಪಾಧ್ಯಕ್ಷೆ ಅಶ್ವಿನಿ ಶಂಕರ್

ಇದು ಕೇವಲ ಬಿಜೆಪಿ ಮತ್ತು ಮಿತ್ರಪಕ್ಷಗಳ ಪ್ರಯತ್ನವಲ್ಲ, ಎಲ್ಲ ಪಕ್ಷಗಳ ಪ್ರಯತ್ನ ಇದರ ಹಿಂದಿದೆ. ಆದರೆ, ನಿನ್ನೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಮಹಿಳಾ ವಿರೋಧಿ ಧೋರಣೆ ಅನಾವರಣ ಗೊಂಡಿದೆ. ಕಾಂಗ್ರೆಸ್‌ನ ರಾಹುಲ್‌ಗಾಂಧಿ ಮತ್ತು ಅವರ ಮಿತ್ರ ಪಕ್ಷಗಳದ್ದು ಮಹಿಳೆಯರ ವಿಚಾರ ದಲ್ಲಿ ಕೇವಲ ಮೊಸಳೆಕಣ್ಣೀರು ಮಾತ್ರ. ಅಭಿವೃದ್ಧಿಶೀಲ ರಾಷ್ಟ್ರದ ಪ್ರಯತ್ನದಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಯ ಚಿಂತನೆಗೆ ಧಕ್ಕೆ ತಂದಿದ್ದಾರೆ

ಮಹಿಳಾ ಪ್ರಾತಿನಿಧ್ಯಕ್ಕೆ ಆದ ಸೋಲು ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ

-

Profile
Ashok Nayak Apr 18, 2026 8:49 PM

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಜೀ(Prime Minister Narendra Modi) ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಮಾಡಿದ ಯಶಸ್ವಿ ಪ್ರಯತ್ನಕ್ಕೆ ನಿನ್ನೆ ಲೋಕಸಭೆ(Loksabha) ಯಲ್ಲಿ ಸೋಲಾಗಿದೆ. ಇಂಡಿಯಾ ಕೂಟ ಮತ್ತು ಕಾಂಗ್ರೆಸ್ ಪಕ್ಷವು ಮಹಿಳಾ ಸಮೂಹಕ್ಕೆ ಮಾಡಿದ ಘೋರ ಅಪಮಾನವಾಗಿದೆ ಎಂದು ಬಿಜೆಪಿ ರಾಜ್ಯ ಓಬಿಸಿ(BJP State OBC) ಉಪಾಧ್ಯಕ್ಷೆ ಹಾಗೂ ರಾಜ್ಯ ವಕ್ತಾರೆ ಅಶ್ವಿನಿ ಶಂಕರ್ ಕಿಡಿಕಾರಿದರು.    

ನಗರದ ಉತ್ತರ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. 'ನಾರಿ ಶಕ್ತಿ ವಂದನಾ' ಕಾಯ್ದೆಗೆ ಸೋಲುಂಟಾಗಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಯ ಕರಾಳ ದಿನವಾಗಿದೆ. ಸಂವಿಧಾನದ ಆಶಯಗಳನ್ನು ಮೆಟ್ಟಿ ನಿಲ್ಲುವುದು, ಸರ್ವಾಧಿಕಾರ ಮೆರೆಯುವುದು, ಜನರ ಅಭಿವ್ಯಕ್ತಿ ಸ್ವಾತಂತ್ರ‍್ಯ ಹತ್ತಿಕ್ಕುವುದು ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ದೂರಿದರು.

ಸದ್ಯ ದೇಶದ ರಾಜಕೀಯ ಭೂಪಟದಲ್ಲಿ ಅಸ್ತಿತ್ವಕ್ಕಾಗಿ ತಿಣುಕಾಡುತ್ತಿರುವ ಕಾಂಗ್ರೆಸ್ ಪಕ್ಷವು ತನ್ನದೇ ಮನಸ್ಥಿತಿಯ ಇತರ ಪಕ್ಷಗಳನ್ನು ಕಟ್ಟಿಕೊಂಡು 'ಇಂಡಿ' ಕೂಟದ ಹೆಸರಿನಲ್ಲಿ ಸ್ತ್ರೀ ಕುಲದ ಹಕ್ಕನ್ನು ಲೋಕಸಭೆಯಲ್ಲಿ ಹಿಂಡಿದೆ. ದುರ್ಯೋಧನ, ದುಶ್ಯಾಸನ, ರಾವಣರ ಸಂಸ್ಕೃತಿ ನೆನಪಿ ಸುವ ರೀತಿಯಲ್ಲಿ ಸಂಸತ್‌ನಲ್ಲಿ ನಡೆದುಕೊಂಡು ಡಾ. ಅಂಬೇಡ್ಕರ್ ಅವರ ಮಹದಾಶಯ, ಅಣ್ಣ ಬಸವಣ್ಣ ಅವರು ಪ್ರತಿಪಾದಿಸಿದ ಲಿಂಗ ಸಮಾನತೆಯನ್ನು ಹತ್ತಿಕ್ಕಲು ಯತ್ನಿಸಿವೆ. ಮಹಿಳಾ ರಾಜಕೀಯ ಪ್ರಾತಿನಿಧ್ಯಕ್ಕೆ ಅವಕಾಶ ನೀಡಿದ್ದರೆ ಅದನ್ನು ಸುವರ್ಣಾಕ್ಷರದಲ್ಲಿ ಬರೆದಿಡಬಹುದಿತ್ತು ಎಂದರು.

ಇದನ್ನೂ ಓದಿ: Chikkaballapuara news: ಮಂತ್ರಾಲಯ ಬಳಿ ಭೀಕರ ಅಪಘಾತ, ಚಿಕ್ಕಮಗಳೂರಿನ 8 ಮಂದಿ ಭಕ್ತರು ದುರ್ಮರಣ

ಇದು ಕೇವಲ ಬಿಜೆಪಿ ಮತ್ತು ಮಿತ್ರಪಕ್ಷಗಳ ಪ್ರಯತ್ನವಲ್ಲ, ಎಲ್ಲ ಪಕ್ಷಗಳ ಪ್ರಯತ್ನ ಇದರ ಹಿಂದಿದೆ. ಆದರೆ, ನಿನ್ನೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಮಹಿಳಾ ವಿರೋಧಿ ಧೋರಣೆ ಅನಾವರಣ ಗೊಂಡಿದೆ. ಕಾಂಗ್ರೆಸ್‌ನ ರಾಹುಲ್‌ಗಾಂಧಿ ಮತ್ತು ಅವರ ಮಿತ್ರ ಪಕ್ಷಗಳದ್ದು ಮಹಿಳೆಯರ ವಿಚಾರ ದಲ್ಲಿ ಕೇವಲ ಮೊಸಳೆಕಣ್ಣೀರು ಮಾತ್ರ. ಅಭಿವೃದ್ಧಿಶೀಲ ರಾಷ್ಟ್ರದ ಪ್ರಯತ್ನದಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯ ಚಿಂತನೆಗೆ ಧಕ್ಕೆ ತಂದಿದ್ದಾರೆ ಎಂದು ಹೇಳಿದರು.

ವಿಪಕ್ಷಗಳು ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿವೆ. ಪ್ರತಿಪಕ್ಷಗಳ ವಿರೋಧವು ಈ ಮಸೂದೆ ಯ ಅನುಷ್ಠಾನದ ವಿರುದ್ಧವಲ್ಲ, ಬದಲಾಗಿ ಮಹಿಳಾ ಮೀಸಲಾತಿಯ ವಿರುದ್ಧವಾಗಿದೆ. ಮೂರು ಮಸೂದೆಗಳ ಉದ್ದೇಶ ಮಹಿಳಾ ಸಬಲೀಕರಣ. ಒಬ್ಬ ಸಂಸದರು ಒಂದೇ ಕ್ಷೇತ್ರದಲ್ಲಿ ಸುಮಾರು 49 ಲಕ್ಷ ಮತದಾರರನ್ನು ಹೇಗೆ ಪ್ರತಿನಿಧಿಸಬಹುದು. ಪ್ರತಿಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯ ಕಾರ್ಯವಿಧಾನಕ್ಕಿಂತ ಹೆಚ್ಚಾಗಿ ಅದರ ವಿಷಯವನ್ನು ವಿರೋಧಿಸಿವೆ.ಮಹಿಳಾ ಮೀಸಲಾತಿ ಪರ ಇದ್ದೇವೆ ಎನ್ನುತ್ತಿದ್ದ ವಿಪಕ್ಷಗಳು ಸಂಸತ್ತಿನಲ್ಲಿ ತಮ್ಮ ಅಸಲಿ ಚಿಂತನೆ ಏನೆಂಬುದನ್ನು ತೋರಿಸಿ ಕೊಟ್ಟಿವೆ ಎಂದರು.

women OBC BJP

ನರೇಂದ್ರ ಮೋದಿಜೀ ಅವರು ಮಹಿಳಾ ಸಶಕ್ತಿಕರಣ ಜಾರಿ ಮಾಡಿ 2029ರಲ್ಲಿ ಚುನಾವಣೆ ನಡೆಸು ವುದು. ಒಬ್ಬ ವ್ಯಕ್ತಿ ಒಂದು ಮತ ಎಂಬ ಸಿದ್ಧಾಂತವನ್ನು ದೃಢಗೊಳಿಸುವ ಚಿಂತನೆ ಹೊಂದಿದ್ದರು. ನಾರಿ ಶಕ್ತಿಗೆ 2029ಕ್ಕಿಂತ ಮೊದಲು ಅವಕಾಶ ಕೊಡಲು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸಿದ್ಧವಿಲ್ಲ ಎಂಬುದು ಸಾಬೀತಾಗಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ  ಮಾತನಾಡಿ, ಮಹಿಳಾ ಸಶಕ್ತೀಕರಣ- ನಳದ ಮೂಲಕ 15 ಕೋಟಿ ಮನೆಗಳಿಗೆ ನೀರು, 10 ಕೋಟಿ ಮನೆಗಳಿಗೆ ಉಜ್ವಲ ಯೋಜನೆಯಡಿ ಸಿಲಿಂಡರ್ ನೀಡಿಕೆ, 12 ಕೋಟಿ ಶೌಚಾಲಯ ನಿರ್ಮಾಣ, 4 ಕೋಟಿಗೂ ಹೆಚ್ಚು ಮಹಿಳೆಯರ ಹೆಸರಿನಲ್ಲಿ ಮನೆ ನಿರ್ಮಿಸಿ ಕೊಡಲಾಗಿದೆ. ಹಿಂದುಳಿದ ವರ್ಗದ ನಾಯಕ ಮೋದಿಜೀ ಅವರಿಗೆ ವಂಶ ಪರಂಪರೆದಿಂದ ಪ್ರಧಾನಿ ಹುದ್ದೆ ಬಂದಿಲ್ಲ. ಅದನ್ನು ಮೂರನೇ ಬಾರಿ ಮತದಾರರು ನೀಡಿದ್ದಾರೆ ಎಂದರು.

ಮೋದಿ ಸರಕಾರ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿತ್ತು. ಒಬಿಸಿ ಗುರುತಿಸುವಿಕೆಯ ಅಧಿಕಾರವನ್ನು ರಾಜ್ಯಗಳಿಗೆ ನೀಡಿ ಅಧಿಕಾರ ಸಶಕ್ತಿಕರಣ ಮಾಡಿತ್ತು. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳಿಗೆ ಚುನಾವಣೆ ಗೆಲ್ಲುವುದೊಂದೇ ಏಕಮಾತ್ರ ಉದ್ದೇಶ. ಬಿಜೆಪಿಗೆ ರಾಷ್ಟ್ರ ನಿರ್ಮಾಣದ ಚಿಂತನೆ ಇದೆ.ಕಾಂಗ್ರೆಸ್ ಪಕ್ಷವು ಸುಮಾರು ಆರೂವರೆ ದಶಕಗಳ ಕಾಲ ದೇಶದ ಆಡಳಿತದಲ್ಲಿ ಇದ್ದಾಗ ಒಬಿಸಿ ಸಮುದಾಯಕ್ಕೆ ಅನ್ಯಾಯ ಮಾಡಿತ್ತು ಎಂದರು.

ಮಂಡಲ್ ವರದಿ ಜಾರಿ ಮಾಡಲು ಹಿಂಜರಿಕೆ ತೋರಿದ ಇವರದು ತೋರಿಕೆಯ ಒಬಿಸಿ ಪ್ರೀತಿ ಎಂಬುದು ಜನರಿಗೆ ಗೊತ್ತಿದೆ. ಇನ್ನು ಮುಂದೆ ಮಹಿಳೆಯರ ಕುರಿತ ಇವರ ಮಾತುಗಳು ಕೇವಲ ತೋರಿಕೆಯದೆಂದು ಹಾಗೂ ತಮ್ಮ ಅವಕಾಶವನ್ನು ಕಾಂಗ್ರೆಸ್ ಪಕ್ಷ ಕಿತ್ತುಕೊಂಡಿದೆ ಎಂದು ಮಹಿಳೆಯರೂ ಅರ್ಥ ಮಾಡಿಕೊಳ್ಳಲಿದ್ದಾರೆ ಹಾಗೂ ಇವರಿಗೆ ಸೂಕ್ತ ಪಾಠ ಕಲಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲಮ್ಮ, ಜಿಲ್ಲಾ ಉಪಾಧ್ಯಕ್ಷ  ಮರಳಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್. ಮುರುಳಿಧರ್, ಮಧು ಸೂರ್ಯನಾರಾಯಣ ರೆಡ್ಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್,  ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಮಾಜಿ ಶಾಸಕ ಎಂ.ರಾಜಣ್ಣ, ಟಿ.ಎ.ಪಿ.ಸಿ.ಎಂ.ಎಸ್ .ಅಧ್ಯಕ್ಷ ಆವಲಕೊಂಡರಾಯಪ್ಪ, ಬಾಲಕುಂಟಹಳ್ಳಿ ಗಂಗಾಧರಪ್ಪ , ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮೀನಾರಾಯಣ ಗುಪ್ತಾ , ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಗಂಗರೇ ಕಾಲುವೆ ಪ್ರಸಾದ್, ಮಾಜಿ ಅಧ್ಯಕ್ಷ  ಕಾಳೇಗೌಡ, ಜಿಲ್ಲಾ ಮಾಧ್ಯಮ ಸಂಚಾಲಕ ವಿ ಮಧುಚಂದ್ರ,ಅನು ಆನಂದ್,  ಜಿಲ್ಲೆಯ ಎಲ್ಲಾ ಮಂಡಲದ ಮಹಿಳಾ ಮೋರ್ಚ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು ಇದ್ದರು.