Chikkaballapur news: ಶಿಸ್ತು ಸಂಯಮದಿಂದ ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿರುವುದು ಅವರ ಕಾರ್ಯಕ್ಷಮತೆ ಮತ್ತು ದಕ್ಷತೆಗೆ ಹಿಡಿದ ಕನ್ನಡಿ
ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಭಾರತೀಯ ಸಂವಿಧಾನದಲ್ಲಿ ಸಮಾನ ಅವಕಾಶಗಳು ದೊರೆತ ಫಲವಾಗಿ ಶಿಕ್ಷಣ ಪಡೆದ ಮಹಿಳೆಯರು ಇಂದು ಎಲ್ಲಾ ರಂಗಗಳಲ್ಲಿಯೂ ಸ್ವಾವಲಂಬಿ ಗಳಾಗಿ, ಸಮಾಜ ವನ್ನು ಮುನ್ನಡೆಸುವಂತಾಗಿದೆ. ಆರೋಗ್ಯ ಇಲಾಖೆಯಲ್ಲಿಯೂ ಕೂಡ ಮಹಿಳೆಯರು ಪುರಷರಷ್ಟೇ ಸಮರ್ಥವಾಗಿ ತಮ್ಮ ಪಾಲಿನ ಕರ್ತವ್ಯವನ್ನು ಪಾಲಿಸುತ್ತಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ತ್ರೀ ಸಂಕುಲದಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಭಿ ಬದುಕು ನಡೆಸಲು ಅವಕಾಶ ಮಾಡಿಕೊಟ್ಟಿದ್ದು ಇದೊಂದ ಸ್ವಾಭಿಮಾನದ ಹಬ್ಬವಾಗಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್‌ಕುಮಾರ್ ತಿಳಿಸಿದರು.

ಚಿಕ್ಕಬಳ್ಳಾಪುರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ತಿçà ಸಂಕುಲದಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಭಿ ಬದುಕು ನಡೆಸಲು ಅವಕಾಶ ಮಾಡಿಕೊಟ್ಟಿದ್ದು ಇದೊಂದ ಸ್ವಾಭಿಮಾನದ ಹಬ್ಬವಾಗಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್ ಕುಮಾರ್ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎರಡರ ಲ್ಲೂ ಶಿಸ್ತು ಸಂಯಮದಿಂದ ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿರುವುದು ಅವರ ಕಾರ್ಯಕ್ಷಮತೆ ಮತ್ತು ದಕ್ಷತೆಗೆ ಹಿಡಿದ ಕನ್ನಡಿಯಾಗಿದೆ. ಮುಂದೆಯೂ ಮಹಿಳೆಯರು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಹೆಚ್ಚಿನ ಮುತುವರ್ಜಿವಹಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: Chief Minister's medal: 219 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ
ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಭಾರತೀಯ ಸಂವಿಧಾನದಲ್ಲಿ ಸಮಾನ ಅವಕಾಶಗಳು ದೊರೆತ ಫಲವಾಗಿ ಶಿಕ್ಷಣ ಪಡೆದ ಮಹಿಳೆಯರು ಇಂದು ಎಲ್ಲಾ ರಂಗಗಳಲ್ಲಿಯೂ ಸ್ವಾವಲಂಬಿ ಗಳಾಗಿ, ಸಮಾಜವನ್ನು ಮುನ್ನಡೆಸುವಂತಾಗಿದೆ. ಆರೋಗ್ಯ ಇಲಾಖೆಯಲ್ಲಿಯೂ ಕೂಡ ಮಹಿಳೆ ಯರು ಪುರಷರಷ್ಟೇ ಸಮರ್ಥವಾಗಿ ತಮ್ಮ ಪಾಲಿನ ಕರ್ತವ್ಯವನ್ನು ಪಾಲಿಸುತ್ತಿದ್ದಾರೆ. ಅಂತರಾ ಷ್ಟ್ರೀಯ ಮಹಿಳಾ ದಿನಾಚರಣೆಯ ನೆಪದಲ್ಲಿಯಾದರೂ ಎಲ್ಲಾ ವಿಭಾಗಗಳ ಮಹಿಳೆಯರು ಒಂದೆಡೆ ಸೇರಿ ಸಂತೋಷದಿಂದ ನಲಿಯುವುದನ್ನು ನೋಡಲು ಸಂತೋಷವಾಗುತ್ತಿದೆ ಎಂದರು.
ತಹಶೀಲ್ದಾರ್ ಅನಿಲ್ ಮಾತನಾಡಿ ಸಾಮಾಜಿಕ ಹೊಣೆಗಾರಿಕೆ ಮತ್ತು ಕುಟುಂಬದ ಜವಾಬ್ದಾರಿ ಯನ್ನು ನಿರ್ವಹಿಸುವಲ್ಲಿ ಮಹಿಳೆಯರು ಸಬಲತೆ ಸಾಧಿಸಿರುವುದೇ ಎಲ್ಲರಿಗೂ ಹೆಮ್ಮೆಯ ವಿಚಾರ ವಾಗಿದೆ. ಮಹಿಳೆಯರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಂಘಟಿತರಾಗಿರುವ ಕಾರಣ ಆರ್ಥಿಕ ವಾಗಿಯೂ ಸಬಲತೆ ಕಂಡಿದ್ದಾರೆ.ಹೀಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸು ತ್ತಿರುವ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಶುಭಾಶಯಗಳನ್ನು ಕೋರುತ್ತೇನೆ ಎಂದರು.
ತಹಸೀಲ್ದಾರ್ ಅನಿಲ್, ತಾಲ್ಲೂಕು ಆರೋಗ್ಯಧಿಕಾರಿ ಡಾ. ಮಂಜುಳಾ, ಕುಟುಂಬ ಅಧಿಕಾರಿ ಡಾ. ಚಂದ್ರಶೇಖರ್, ಆರ್ ಸಿ ಎಚ್ ಅಧಿಕಾರಿ ಡಾ ಸಂತೋಷ್ ಬಾಬು ಪ್ರಸೂತಿ ತಜ್ಞರ ಜಿಲ್ಲಾ ಪ್ರಸೂತಿ ತಜ್ಞರ ಒಕ್ಕೂಟದ ಅಧ್ಯಕ್ಷರಾದ ಡಾ. ಅನಿತಾ ಡಿ ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಶಿವಕುಮಾರ್, ಜಿಲ್ಲಾ ಸುರಕ್ಷತಾ ಅಧಿಕಾರಿ ಸರಸ್ವತಮ್ಮ, ತಾಲೂಕು ಸುರಕ್ಷತಾ ಅಧಿಕಾರಿ ಶಿವಮ್ಮ, ಆರ್. ಬಿ ಎಸ್ ಕೆ ಸಿಬ್ಬಂದಿ, ನಿರೀಕ್ಷಣಾಧಿಕಾರಿ ನಾರಾಯಣಸ್ವಾಮಿ, ನಾಯನಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರೇಶ್, ಮಹೇಶ್, ನವೀನ್, ಬಾಲು, ಮನೋಹರ್ ಸೇರಿದಂತೆ ಚಿಕ್ಕಬಳ್ಳಾ ಪುರ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಸಿಎ, ಇನ್ನಿತರ ಸುರಕ್ಷಕ ಅಧಿಕಾರಿಗಳು ಆಶಾ ಕಾರ್ಯಕರ್ತರು.