ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SIR: ಎಸ್‌ಐಆರ್ ಚುನಾವಣಾ ಆಯೋಗದ ನಿಯಮಿತ ಪ್ರಕ್ರಿಯೆ; ಸಹಕಾರ ನೀಡಬೇಕು: ದತ್ತಾತ್ರಿ

ಮತದಾರರ ಪಟ್ಟಿಯನ್ನು ಶುದ್ಧೀ ಕರಿಸಿ, ಅನರ್ಹ ಹಾಗೂ ನಕಲಿ ಮತದಾರರ ಹೆಸರನ್ನು ತೆಗೆದುಹಾಕಿ ಅರ್ಹ ಮತದಾರರ ಹೆಸರನ್ನು ಖಚಿತಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕಾಲಕಾಲಕ್ಕೆ ಈ ಪ್ರಕ್ರಿಯೆಯನ್ನು ಕೈಗೊಳ್ಳುತ್ತದೆ. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಚುನಾವಣಾ ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡಬೇಕು

ಚಿಕ್ಕಬಳ್ಳಾಪುರ: ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು ಭಾರತದ ಚುನಾವಣಾ ಆಯೋಗ(Election Commisson of India)ವು ನಡೆಸುತ್ತಿರುವ ಕಾನೂನು ಬದ್ಧ ಮತ್ತು ನಿಯಮಿತ ಪ್ರಕ್ರಿಯೆ ಯಾಗಿದ್ದು, ಇದನ್ನು ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಸಂಚು ಎಂದು ಬಿಂಬಿಸುವುದು ಸಂಪೂರ್ಣ ನಿರಾಧಾರ ಎಂದು ಬಿಜೆಪಿ(BJP) ಎಸ್‌ಐಆರ್ ರಾಜ್ಯ ಸಂಯೋಜಕ ದತ್ತಾತ್ರಿ ಹೇಳಿದರು.

ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಶುದ್ಧೀ ಕರಿಸಿ, ಅನರ್ಹ ಹಾಗೂ ನಕಲಿ ಮತದಾರರ ಹೆಸರನ್ನು ತೆಗೆದುಹಾಕಿ ಅರ್ಹ ಮತದಾರರ ಹೆಸರನ್ನು ಖಚಿತಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕಾಲಕಾಲಕ್ಕೆ ಈ ಪ್ರಕ್ರಿಯೆಯನ್ನು ಕೈಗೊಳ್ಳುತ್ತದೆ. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಚುನಾವಣಾ ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister D K Shivkumar) ಅವರು ಎಸ್‌ಐಆರ್ ಕುರಿತು ಮಾಡುತ್ತಿರುವ ಆರೋಪಗಳು ವಾಸ್ತವಕ್ಕೆ ದೂರವಾಗಿವೆ. ಇದು ಬಿಜೆಪಿ ಅಥವಾ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಪ್ರಕ್ರಿಯೆಯಲ್ಲ. ಸಂಪೂರ್ಣ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗ ತನ್ನ ಸಾಂವಿಧಾನಿಕ ಅಧಿಕಾರದ ವ್ಯಾಪ್ತಿಯಲ್ಲಿ ಈ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Chinthamani News: ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ: ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಕಾರ್ಯಕ್ಕೆ ಅಡ್ಡಿಯಾಗುವ ಬದಲು ಸಂಪೂರ್ಣ ಸಹಕಾರ ನೀಡಬೇಕು. ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರು ಸೇರ್ಪಡೆಯಾಗದಂತೆ ಮತ್ತು ಅರ್ಹ ಮತದಾರರ ಹಕ್ಕು ಸಂರಕ್ಷಿತವಾಗುವಂತೆ ಕ್ರಮ ಕೈಗೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಶುದ್ಧ ಮತದಾರರ ಪಟ್ಟಿಯೇ ಪ್ರಜಾ ಪ್ರಭುತ್ವದ ಭದ್ರ ಬುನಾದಿಯಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಈ ಪ್ರಕ್ರಿಯೆಗೆ ಬೆಂಬಲ ನೀಡಬೇಕು ಎಂದು ಅವರು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆ ಕುರಿತು ಅನಗತ್ಯ ಗೊಂದಲ ಮತ್ತು ಅಪಪ್ರಚಾರ ಸೃಷ್ಟಿಸುವ ಬದಲು, ಮತದಾರರಲ್ಲಿ ಜಾಗೃತಿ ಮೂಡಿಸಿ ಚುನಾವಣಾ ಆಯೋಗದ ಕಾರ್ಯ ಯಶಸ್ವಿಗೊಳಿಸುವ ನಿಟ್ಟಿ ನಲ್ಲಿ ಎಲ್ಲರೂ ಸಹಕರಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಶುದ್ಧ ಮತ್ತು ಪಾರದರ್ಶಕ ಮತದಾರರ ಪಟ್ಟಿಯೇ ಅತ್ಯಗತ್ಯ ಎಂದು ದತ್ತಾತ್ರಿ ಅಭಿಪ್ರಾಯಪಟ್ಟರು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ಮಾತನಾಡಿ ಎಸ್‌ಐಆರ್ ಸಮೀಕ್ಷೆಯಲ್ಲಿ ಬಿಎಲ್‌ಎ-2ಗಳು ಸಕ್ರಿಯವಾಗಿ ಹೇಗೆ ಕೆಲಸ ಮಾಡಬೇಕು, ಮತದಾರರಿಗೆ ಜಾಗೃತಿ ಮೂಡಿಸುವ ಕುರಿತಂತೆ ದತ್ತಾತ್ರಿ ಮತ್ತು ಡಾ.ಅಲ್ಕಾಸಿಂಗ್ ಗುಜ್ಜಾರ್ ಬಂದು ತರಬೇತಿ ನೀಡಿದ್ದಾರೆ. ಅವರು ನೀಡಿರುವ ಸೂಚನೆಗಳನ್ನು ಪಾಲಿಸಿ ಜಿಲ್ಲೆಯಾದ್ಯಂತ ಎಸ್‌ಐಆರ್ ಪ್ರಕ್ರಿಯೆಯನ್ನು ಶೇ ೧೦೦ರಷ್ಟು ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ, ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್. ಮುರಳೀಧರ ಹಾಗೂ ಮಧು ಸೂರ್ಯನಾರಾಯಣ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಅಶೋಕ್, ಬಿಎಲ್‌ಎ1 ಮಂಚೇನಹಳ್ಳಿ ನಾರಾಯಣಸ್ವಾಮಿ, ಮಂಡಲ ಅಧ್ಯಕ್ಷರಾದ ಪ್ರಭಾಕರ್ ರೆಡ್ಡಿ ಮತ್ತು ತೇಜೇಂದ್ರ ಪಾಪು, ಜಿಲ್ಲಾ ಮಾಧ್ಯಮ ಸಂಚಾಲಕ ಮಧುಚಂದ್ರ, ಜಿಲ್ಲಾ ಸಹ ವಕ್ತಾರ ರಾಮಣ್ಣ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಮಿತ್ರ ಹಾಗೂ ಇತರೆ ಮಂಡಲ ಪದಾಧಿಕಾರಿಗಳು ಉಪಸ್ಥಿತ ರಿದ್ದರು.