ಶಿಡ್ಲಘಟ್ಟ: ತಾಲೂಕಿನ ಜಂಗಮಕೋಟೆಯಲ್ಲಿ ಶ್ರೀ ಪೂಜಮ್ಮ ದೇವಿಯ 58ನೇ ವರ್ಷದ ಕರಗ ಮಹೋತ್ಸವವು ಭಕ್ತಿಭಾವದಿಂದ ಅದ್ದೂರಿಯಾಗಿ ನೆರವೇರಿತು. ಶ್ರೀ ಪೂಜಮ್ಮ ದೇವಿ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಮಹೋತ್ಸವದಲ್ಲಿ ಧಾರ್ಮಿಕ ವಿಧಿ ವಿಧಾನಗಳು, ವಾದ್ಯಗೋಷ್ಠಿ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.
ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೇರ ಪ್ರಯೋಜನ ತಂದಿವೆ. ಪ್ರತಿ ಕುಟುಂಬದ ಯಜಮಾನಿಗೆ 2000 ನೆರವು, 10 ಕೆಜಿ ಅಕ್ಕಿ, ಉಚಿತ ಬಸ್ ಸೇವೆ ಹಾಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಮೂಲಕ ಜನಪರ ಆಡಳಿತ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Bengaluru Karaga: ಇಂದು ಐತಿಹಾಸಿಕ ಹೂವಿನ ಕರಗ ಮೆರವಣಿಗೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister Siddaramaiah and Deputy Chief Minister D.K. Shivakumar) ನೇತೃತ್ವದ ಸರ್ಕಾರ ಜನರ ವಿಶ್ವಾಸ ಗಳಿಸಿದೆ ಎಂದು ಅವರು ಹೇಳಿದರು. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ, ಕಾಂಗ್ರೆಸ್ ಮುಖಂಡರಾದ ವನಿತ್ ಕುಮಾರ್ ಜೆ.ಎಂ (ಜಾನಿ), ಮುನಿರಾಜು (ಕುಟ್ಟಿ), ಶಶಿಕುಮಾರ್ ರೇಣು, ದಿನಕರ್, ಅಮರ್, ಮನೋಜ್, ರಮೇಶ್, ಜಿಲ್ಲಾ ಮಟ್ಟದ ಮಾಧ್ಯಮ ವಕ್ತಾರ ಡಾ. ಬಿ.ಇ. ವಿಶ್ವನಾಥ್, ನಾಗ ಮತ್ತೂರು ವೆಂಕಟೇಶ್, ಹೆಣ್ಣೂರು ಮಂಜುನಾಥ್, ಸೇರಿದಂತೆ ಸ್ಥಳೀಯ ಮುಖಂಡರು, ಟ್ರಸ್ಟ್ ಸದಸ್ಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
![]()
"ಶಿಡ್ಲಘಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ರಾಜೀವ್ ಗೌಡ ಅವರ ನಾಯಕತ್ವದಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿಗೊಳಿಸುವುದು ಅಗತ್ಯ ಎಂದು ಹೇಳಿದರು."
ಕೆ.ಹೆಚ್. ಮುನಿಯಪ್ಪ ಸಚಿವ