ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ವಿಜೃಂಭಣೆಯಿಂದ ನಡೆದ ರಂಭಾಪುರಿ ಶ್ರೀಗಳ ಅದ್ಧೂರಿ ಅಡ್ಡ ಪಲ್ಲಕ್ಕಿ ಉತ್ಸವ

ಉತ್ಸವದ ಅಂಗವಾಗಿ ಜಗದ್ಗುರುಗಳನ್ನು ವಿಶೇಷವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳು ಪಾಲ್ಗೊಂಡು ಭಕ್ತರಲ್ಲಿ ಧಾರ್ಮಿಕ ಉತ್ಸಾಹ ಮೂಡಿಸಿದರು.

ವಿಜೃಂಭಣೆಯಿಂದ ನಡೆದ ರಂಭಾಪುರಿ ಶ್ರೀಗಳ ಅದ್ಧೂರಿ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಿತು.

ಗೌರಿಬಿದನೂರು: ನಗರದಲ್ಲಿ ವೀರಶೈವ ಲಿಂಗಾಯಿತ ಪಂಚಪೀಠಗಳ ಭಕ್ತರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಮದ್ ಜಗದ್ಗುರು ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೇರವೇರಿತು. ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆದರು.

ಉತ್ಸವದ ಅಂಗವಾಗಿ ಜಗದ್ಗುರುಗಳನ್ನು ವಿಶೇಷವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳು ಪಾಲ್ಗೊಂಡು ಭಕ್ತರಲ್ಲಿ ಧಾರ್ಮಿಕ ಉತ್ಸಾಹ ಮೂಡಿಸಿದರು.

ಇದನ್ನೂ ಓದಿ: Gauribidanur News: ಕುದುರೇ ಬ್ಯಾಲ್ಯ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಭಕ್ತರು ಮನೆ ಮುಂದೆ ರಂಗೋಲಿ ಹಾಕಿ, ಪೂಜೆ ಸಲ್ಲಿಸಿ ಪಲ್ಲಕ್ಕಿಯನ್ನು ಸ್ವಾಗತಿಸಿದರು. ಎಲ್ಲ ಧರ್ಮದ ಜನರು ಭಾಗವಹಿಸುವ ಮೂಲಕ ಸಾಮರಸ್ಯದ ಸಂದೇಶವನ್ನು ಸಾರಿದರು.

ಉತ್ಸವದ ಸಂದರ್ಭದಲ್ಲಿ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಧರ್ಮ ಜಾಗೃತಿ ಹಾಗೂ ಸೌಹಾ ರ್ದತೆಯ ಮಹತ್ವವನ್ನು ವಿವರಿಸಿ,ಈ ಅಡ್ಡ ಪಲ್ಲಕ್ಕಿ ಉತ್ಸವವು ಪ್ರಾಚೀನ ಪರಂಪರೆ ಪ್ರತಿಬಿಂಬಿ ಸುವ ಧಾರ್ಮಿಕ ಕಾರ್ಯಕ್ರಮವಾಗಿದೆ ಎಂದರು.

ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಯಡಿಯೂರು ಕ್ಷೇತ್ರದ ಬಾಳೆಹೊನ್ನೂರು ಮಠದ ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿ, ಶಿವಗಂಗೆಯ ಮೇಲನಗವಿ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಪಟ್ಟದ ಡಾ.ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿ, ನೊಣವಿನಕೆರೆ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿ, ಸಿದ್ದರಬೆಟ್ಟ ಶ್ರೀ ಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ,ಆನೇಕಲ್ಲು ತಾಲೂಕಿನ ರಾಜಾಪುರ ಸಂಸ್ಥಾನ ಮಠದ ಶ್ರೀ ರಾಜೇಶ್ವರ ಶಿವಾಚಾರ್ಯ ಸ್ವಾಮಿ,ಬೆಂಗಳೂರು ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ರೀ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿ,ಶಿವಗಂಗೆ ಹೊನ್ನಮ್ಮ ದೇವಿ ಮಠದ ಶ್ರೀ ರುದ್ರುಮಿನಿ ಶಿವಾಚಾರ್ಯ ಮಹಾಸ್ವಾಮಿ,ಹುಣಸಮಾರನಹಳ್ಳಿ ಸಂಸ್ಥಾನ ಮಠದ ಶ್ರೀ ಗುರು ನಂಜೇಶ್ವರ ಶಿವಾಚಾರ್ಯ ಸ್ವಾಮಿಗಳು ಭಾಗವಹಿಸಿದ್ದರು.