ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಶ್ರದ್ಧಾಭಕ್ತಿಯಿಂದ ನಡೆದ ಶ್ರೀಭೋಗನಂದೀಶ್ವರ, ಗಿರಿಜಾಂಬ ಸಹಿತ ಗಣಪತಿ ದೇವರ ಐತಿಹಾಸಿಕ ಜೋಡಿ ಬ್ರಹ್ಮರಥೋತ್ಸವ

ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಸರ್ವಾ ಲಂಕೃತ ಜೋಡಿ ರಥಗಳಲ್ಲಿ ವಿರಾಜಮಾನವಾಗಿದ್ದ ಶ್ರೀಭೋಗನಂದೀಶ್ವರಸ್ವಾಮಿ, ಗಿರಿಜಾಂಬ ಸಹಿತ ಗಣಪತಿ ಮೂರ್ತಿಗಳಿದ್ದ ಬ್ರಹ್ಮರಥೋತ್ಸವಕ್ಕೆ ಸೋಮವಾರ ಮಧ್ಯಾಹ್ನ 12.30ರ ಶುಭ ಮಹೂರ್ತದಲ್ಲಿ ಪೂಜೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ನೂತನ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು.

ಚಿಕ್ಕಬಳ್ಳಾಪುರ: ಮಾಘ ಮಾಸದಲ್ಲಿ ಬರುವ ಮಹಾಶಿವರಾತ್ರಿಯ ಮಾರನೇ ದಿನ ನಡೆಯುವ ಐತಿಹಾಸಿಕ ಶ್ರೀಭೋಗನಂದೀಶ್ವರ, ಗಿರಿಜಾಂಬ ಸಹಿತ ಗಣಪತಿ ದೇವರ ಬ್ರಹ್ಮರಥೋತ್ಸವವು ಸಾವಿರಾರು ಭಕ್ತಗಣದ ಸಾಕ್ಷಿಯಲ್ಲಿ ಹರನಾಮಸ್ಮರಣೆಯ ಜಯ ಘೋಷದ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಶುಭಲಗ್ನದಲ್ಲಿ ಚಾಲನೆ
ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಸರ್ವಾ ಲಂಕೃತ ಜೋಡಿ ರಥಗಳಲ್ಲಿ ವಿರಾಜಮಾನವಾಗಿದ್ದ ಶ್ರೀಭೋಗನಂದೀಶ್ವರಸ್ವಾಮಿ, ಗಿರಿಜಾಂಬ ಸಹಿತ ಗಣಪತಿ ಮೂರ್ತಿಗಳಿದ್ದ ಬ್ರಹ್ಮರಥೋತ್ಸವಕ್ಕೆ ಸೋಮವಾರ ಮಧ್ಯಾ ಹ್ನ 12.30ರ ಶುಭಮಹೂರ್ತದಲ್ಲಿ ಪೂಜೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ನೂತನ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು.

ಇದನ್ನೂ ಓದಿ: Chikkaballapur News: ಫೆ.18 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ

ತೇರುಗಳಲ್ಲಿ ವಿರಾಜಮಾನ
ದೊಡ್ಡ ರಥದಲ್ಲಿ ಶ್ರೀಭೋಗನಂದೀಶ್ವರಸ್ವಾಮಿ ಮತ್ತು ಗಿರಿಜಾಂಬ ಹಾಗೂ ಚಿಕ್ಕರಥದಲ್ಲಿ ಅಂಬಿಕಾ ಮತ್ತು ಗಣಪತಿಯ ಉತ್ಸವಮೂರ್ತಿ ಪ್ರತಿಷ್ಠಾಪಿಸಲಾಗಿದ್ದು ಬಣ್ಣಬಣ್ಣದ ಧ್ವಜಗಳು,ಪುರಾಣಪ್ರಸಿದ್ಧ ಮೂರ್ತಿಗಳ ಚಿತ್ರಪಟ ಪತಾಕೆ, ಹೂವುಗಳಿಂದ ಶೃಂಗಾರ ಗೊಂಡಿದ್ದ ಜೋಡಿ ಬ್ರಹ್ಮ ರಥಗಳನ್ನು ಭಕ್ತರು ದೇವಸ್ಥಾನದ ಸುತ್ತ ಎಳೆಯುತ್ತಾ ಪ್ರದಕ್ಷಿಣೆ ಹಾಕಿಸಿ ಪುನೀತರಾದರು.. ಈ ವೇಳೆ ಜಾತ್ರೆಗೆ ಬಂದಿದ್ದ ಸಾವಿರಾರು ಭಕ್ತರು ರಥಗಳ ಮೇಲೆ ಬಾಳೆ ಹಣ್ಣು ಹೂ ಧವನ ಹರಕೆ ತೀರಿಸುವ ಮೂಲಕ ಧನ್ಯತಾ ಭಾವ ತಾಳಿದರು.

ಉಸ್ತುವಾರಿ ಸಚಿವರ ಸಂದೇಶ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಎಂಸಿ.ಸುಧಾಕರ್ ಕಳೆದ ವರ್ಷ ವೂ ಸಹ ರಥೋತ್ಸವದಲ್ಲಿ ಭಾಗಿಯಾಗಿ ಭಗವಂತನ ಕೃಪೆಗೆ ಪಾತ್ರವಾಗಿದ್ದೆ.ಈ ವರ್ಷವೂ ಎರಡನೇ ಬಾರಿ ಸಚಿವನಾಗಿ ಭಾಗಿಯಾಗಿದ್ದು ಜಿಲ್ಲೆ ಸೇರಿದಂತೆ ರಾಜ್ಯದ ಸಮಸ್ಥ ಜನರ ಯೋಗಕ್ಷೇಮ ಕೋರಿ ಶ್ರೀ ಭೋಗನಂದೀಶ್ವರಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ.
ಭಗವಂತನ ಆಶೀರ್ವಾದ ಎಂಬAತೆ ಜಿಲ್ಲೆಯಲ್ಲಿ ಕಳೆದ ಬಾರಿ ಉತ್ತಮ ಮಳೆ ಬೆಳೆಯಾಗಿತ್ತು. ಈ ಬಾರಿ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಉತ್ತಮ ಮಳೆ ಮತ್ತು ಬೆಳೆಯಾಗಲಿ, ಅನ್ನದಾತರಿಗೆ ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯಲಿ. ಸರ್ವರೂ ಸಣತೋಷದಿಂದ ಇರಲಿ ಎಂದು ಬೇಡಿ ಕೊಂಡಿದ್ದೇನೆ ಎಂದರು.

6cbpm6bga

ಜಾರಣೆ ಪೂಜೆ

ಮಹಾಶಿವರಾತ್ರಿ ಪ್ರಯುಕ್ತ ಶನಿವಾರದಿಂದಲೇ ದೇವಸ್ಥಾನದಲ್ಲಿ ದಿನವೀಡಿ ವಿಶೇಷ ಅಭಿಷೇಕ ಮತ್ತು ಹವನ ಹೋಮ, ಹಂಸ ವಾಹನೋತ್ಸವ, ಮಹಾನ್ಯಾಸ ಪೂರ್ವಕ ಏಕದಶವಾರ ರುದ್ರಾಭಿಷೇಕ, ಕಾಶಿಯಾತ್ರೆ, ಹರಿಕಥೆ, ಭಜನೆ, ಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು.

ವಿಶೇಷ ಪೂಜೆ

ಬ್ರಹ್ಮರಥೋತ್ಸವದ ದಿನವಾದ ಸೋಮವಾರ ಅರುಣಾಚಲೇಶ್ವರ, ಭೋಗನಂದೀಶ್ವರ ಗಿರಿಜಾಂಭ, ಗಣಪತಿ ದೇವರಿಗೆ ಬೆಳಗಿನ ಜಾವ ಮೂರು ಮತ್ತು ನಾಲ್ಕನೇ ಯಾಮದ ಮಹಾನ್ಯಾಸ ಪೂರ್ವಕ ಏಕದಶವಾರ ರುದ್ರಾಭಿಷೇಕಗಳನ್ನು ನೇರವೇರಿಸಲಾಯಿತು. ಶಿವರಾತ್ರಿ ಜಾಗರಣೆ ಮುಗಿಸಿ ಸೋಮವಾರ ಬೆಳಿಗ್ಗೆ ಉಪವಾಸ ನಿರತ ಭಕ್ತರು ಬೆಳಿಗ್ಗೆ ಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು.

cbpm7

ಸೇವಾಕೈಂಕರ್ಯ :

ಜೋಡಿ ಬ್ರಹ್ಮರಥೋತ್ಸವ ಕಣ್ತುಂಬಿಕೊಳ್ಳಲು ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ನೆರೆಯ ಆಂಧ್ರಪ್ರದೇಶ, ತೆಲಾಂಗಣ ಮತ್ತು ತಮಿಳುನಾಡಿನಿಂದ ಕೂಡ ಭಕ್ತರ ದಂಡೇ ಹರಿದು ಬಂದಿತ್ತು. ಹರಕೆ ಹೊತ್ತ ಭಕ್ತರು ದೇವರಿಗೆ ಮುಡಿ ಕೊಟ್ಟು, ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಜಾತ್ರೆಗೆ ಬಂದವರ ಹಸಿವು, ದಣಿವು ದೂರ ಮಾಡಲು ಅನೇಕ ಕಡೆಗಳಲ್ಲಿ ಭಕ್ತರು ವಾಹನಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ಮತ್ತು ಉಪಾಹಾರ ವಿತರಣೆ ಮಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

ಯಲುವಳ್ಳಿ ಗ್ರಾಮದ ಸೇವೆ
ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಎಲುವಹಳ್ಳಿ ರಮೇಶ್ ಮತ್ತು ಕುಟುಂಬ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ನಂದಿ ಜಾತ್ರೆ ಮತ್ತು ರಥೋತ್ಸವ ಕಣ್ತುಂಬಿಕೊಳ್ಳಲು ಹೊರಟ ಭಕ್ತಾಧಿಗಳು ಮತ್ತು ದಾರಿಹೋಕರಿಗೆ ಪಾನಕ ಮಜ್ಜಿಗೆ, ಪುಳಿಯೋಗರೆ, ಮೊಸರನ್ನ,ಸಿಹಿ ವಿತರಣೆ ಮಾಡುವ ಮೂಲಕ ಸೇವಾ ಕಾರ್ಯಕ್ಕೆ ಹೊಸ ಭಾಷ್ಯ ಬರೆದರು.ಈ ವೇಳೆ ಮಾತನಾಡಿದ ಅವರು ಬಾಲ್ಯದಲ್ಲಿ ಬಡತನದಿಂದ ಬೆಳೆದ ನಾವು ಆದಿನಗಳ ನೆನಪಿನಲ್ಲಿ ಹಸಿದವರ ಹೊಟ್ಟೆತುಂಬಿಸುವ ಕೆಲಸ ಮಾಡುತ್ತಿದ್ದೇನೆ. ನಮ್ಮ ಸರಕಾರದ ಆಶಯವೂ ಇದೇ ಆಗಿದೆ ಎಂದರು.

ಭರ್ಜರಿ ವ್ಯಾಪಾರ: ದೇಗುಲದ ಸುತ್ತಲು ತಲೆ ಎತ್ತಿದ್ದ ಪೂಜಾ ಸಾಮಗ್ರಿ, ತಿಂಡಿ ತಿನಿಸು, ಆಟಿಕೆ ವಸ್ತುಗಳ ಮಾರಾಟ, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ವಸ್ತುಗಳು, ಹಣ್ಣು, ತಂಪುಪಾನೀಯ ಸೇರಿದಂತೆ ವಿವಿಧ ಬಗೆಯ ಮಳಿಗೆಗಳಲ್ಲಿ ವ್ಯಾಪಾರ ಜೋರಾಗಿ ಕಂಡುಬAತು. ಬುರಗು, ಬತಾಸು, ಸಿಹಿ ಮತ್ತು ಕುರುಕಲು ತಿಂಡಿ ತಿನಿಸುಗಳ ವ್ಯಾಪಾರ ಜೋರಾಗಿ ಕಂಡುಬAತು. ಬಿಸಿಲ ಧಗೆಯಿಂದ ಹೊಟ್ಟೆ ತಣ್ಣನೆ ಮಾಡಲು ಭಕ್ತರು ಐಸ್‌ ಕ್ರೀಂ, ಜ್ಯೂಸ್, ಕಲ್ಲಂಗಡಿ ಹಣ್ಣು ಮತ್ತು ಕಬ್ಬಿನ ಹಾಲಿನ ಮೊರೆ ಹೋಗುತ್ತಿದ್ದರು.

ಭರಪೂರ ಮನರಂಜನೆ:

ಜಾತ್ರೆಯ ಪರಿಸರದಲ್ಲಿಯೇ ತಲೆ ಎತ್ತಿದ್ದ ಮನರಂಜನಾ ತಾಣ ಬಹುತೇಕರ ಆಕರ್ಷಣೆಯ ಕೇಂದ್ರಬಿAದುವಾಗಿತ್ತು. ಜಾತ್ರೆಗೆ ಬಂದವರು ಜಾಯಿಂಟ್ ವ್ಹೀಲ್, ರೈಲು ಸವಾರಿ, ತೊಟ್ಟಿಲು, ಜಾರುಬಂಡೆ ಸೇರಿದಂತೆ ವಿವಿಧ ಮನರಂಜನಾ ಆಟಗಳಲ್ಲಿ ಮೈಮರೆತು, ಕೇಕೆ ಹಾಕುತ್ತಿದ್ದ ದೃಶ್ಯಗಳು ಗೋಚರಿಸಿದವು.

ಬ್ರಹ್ಮರಥೋತ್ಸವು ಪ್ರಕೃತಿ ಸೌಂದರ್ಯದ ಮಧ್ಯೆ ಆಕಾಶ ಭೂಮಿ ಒಂದಾದ ರೀತಿ ಕಾಣೋ ಹಾಗಿತ್ತು. ಪ್ರಕೃತಿ ಸೊಬಗಿನ ಮಧ್ಯೆ ಇರೊ ನಂದಿ ಗ್ರಾಮ. ನಂದಿ ಗ್ರಾಮದಲ್ಲಿ ಇರೊ ಶ್ರೀ ಭೋಗನಂದೀಶ್ವರ, ಅರುಣಾಚಲೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನಗಳು ಜನ ಜನಜಂಗುಳಿಯಿಂದ ತುಂಬಿ ಕಂಗೊಳಿಸುತ್ತಿತ್ತು.

ರಥೋತ್ಸವ ಚಾಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಸೀಲ್ದಾರ್ ರಶ್ಮಿ ಹಾಗೂ ಸಾವಿರಾರು ಭಕ್ತರು ಆಗಮಿಸಿದ್ದರು.