Chikkaballapur News: ಬುದ್ಧ, ಬಸವ ಅಂಬೇಡ್ಕರ್ ಅವರ ಬದುಕು ಬರಹವೇ ನಮ್ಮ ಜೀವನಕ್ಕೆ ಸ್ಪೂರ್ತಿ: ಎಸ್‌ಎಸ್‌ಡಿ ರಾಜ್ಯಾಧ್ಯಕ್ಷ ಜಿ.ಸಿ.ವೆಂಕಟರವಣಪ್ಪ
ತಾವು ಕಳೆದ 20 ವರ್ಷಗಳಿಂದ ಶೋಷಿತರ ಪರವಾಗಿ ಹೋರಾಟ ನಡೆಸುತ್ತಾ ಬಂದಿದ್ದು, ಅದರ ಫಲ ವಾಗಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಸ್ಥಾನ ಲಭಿಸಿದೆ. ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಶೋಷಿ ತರ ಸಂಕಷ್ಟಗಳಿಗೆ ನೆರವಾಗುವ, ನೊಂದವರಿಗೆ ನ್ಯಾಯಕೊಡಿಸುವ ಕೆಲಸ ಮಾಡಲಾಗು ವುದು. ನಡೆಯುವವರು ಎಡಹುವರಲ್ಲದ ಕುಳಿತವರು ಎಡಹುವರೇ ಎಂಬ ಅಣ್ಣ ಬಸವಣ್ಣ ಅವರ ಮಾರ್ಗ ದಲ್ಲಿ ನಡೆಯುವ ಸಂಕಲ್ಪ ತೊಟ್ಟಿದ್ದೇನೆ
ಬುದ್ಧ, ಬಸವ ಅಂಬೇಡ್ಕರ್ ಅವರ ಬದುಕು ಬರಹವೇ ನಮ್ಮ ಜೀವನಕ್ಕೆ ಸ್ಪೂರ್ತಿ ಎಂದು ಎಸ್‌ಎಸ್‌ಡಿ ರಾಜ್ಯಾಧ್ಯಕ್ಷ ಜಿ.ಸಿ.ವೆಂಕಟರವಣಪ್ಪ ತಿಳಿಸಿದರು. -
ಚಿಕ್ಕಬಳ್ಳಾಪುರ: ನಗರದ ಅಂಬೇಡ್ಕರ್ ಭವನದಲ್ಲಿ ಸಮತಾ ಸೈನಿಕ ದಳದ ವತಿಯಿಂದ ೧೩೫ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಸಂಘಟನೆಯ ರಾಜ್ಯಾಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ ಅವರ 46ನೇ ಹುಟ್ಟುಹಬ್ಬವನ್ನು ಆರ್ಥಪೂರ್ಣವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸೇವೆ ಹಾಗೂ ಸಮಾಜ ಪರವಾದ ಚಿಂತನೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಆದರ್ಶಗಳು ಮತ್ತು ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ತಾವು ಕಳೆದ 20 ವರ್ಷಗಳಿಂದ ಶೋಷಿತರ ಪರವಾಗಿ ಹೋರಾಟ ನಡೆಸುತ್ತಾ ಬಂದಿದ್ದು,ಅದರ ಫಲವಾಗಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಸ್ಥಾನ ಲಭಿಸಿದೆ. ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಶೋಷಿತರ ಸಂಕಷ್ಟಗಳಿಗೆ ನೆರವಾಗುವ, ನೊಂದವರಿಗೆ ನ್ಯಾಯಕೊಡಿಸುವ ಕೆಲಸ ಮಾಡಲಾಗು ವುದು. ನಡೆಯುವವರು ಎಡಹುವರಲ್ಲದ ಕುಳಿತವರು ಎಡಹುವರೇ ಎಂಬ ಅಣ್ಣ ಬಸವಣ್ಣ ಅವರ ಮಾರ್ಗದಲ್ಲಿ ನಡೆಯುವ ಸಂಕಲ್ಪ ತೊಟ್ಟಿದ್ದೇನೆ ಎಂದರು.
ಇದನ್ನೂ ಓದಿ: Chikkaballapur News: ಗುರುತಿನ ಚೀಟಿಯಿರುವ ಶಾಲಾ ಮಕ್ಕಳಿಗೆ 10 ದಿನಗಳ ವಿಶೇಷ ರಿಯಾಯಿತಿ ಘೋಷಣೆ
ಬುದ್ಧ, ಬಸವ ಅಂಬೇಡ್ಕರ್ ಅವರ ಬದುಕು ಬರಹವೇ ನಮ್ಮ ಜೀವನಕ್ಕೆ ಸ್ಪೂರ್ತಿಯಾಗಿದೆ.ಈ ೨೦ ವರ್ಷಗಳಲ್ಲಿ ಅಂಬೇಡ್ಕರ್ ಅನುಯಾಯಿಯಾಗಿ ನಿರ್ವಂಚನೆಯಿಂದ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ.ನನ್ನನ್ನು ಮುನ್ನಡೆಸಿದ ನಾಯಕರು ಕಾಲಲ್ಲಿ ತೋರಿಸಿದ್ದನ್ನು ಕಣ್ಣಿಗೆ ಒತ್ತಿಕೊಂಡು ಮಹಾಪ್ರಸಾದ ಎಂಬಂತೆ ನಡೆದುಕೊಂಡಿದ್ದೇನೆ. ಪರಿಣಾಮ ರಾಜ್ಯಾದ್ಯಂತ ನನ್ನ ಪ್ರೀತಿಸುವ ಹೃದಯಗಳು ನಾಯಕತ್ವದ ಭಾರವನ್ನು ನನ್ನ ಹಗಲಿಗೆ ಹಾಕಿವೆ.ಇದನ್ನು ಹುದ್ದೆ ಎಂದು ಭಾವಿಸದೆ ಜವಾಬ್ದಾರಿ ಎಂದು ಅರಿತು ಎಚ್ಚರಿಕೆಯಿಂದ ಸಂಘಟನೆ ಕಟ್ಟುವ ಕೆಲಸ ಮಾಡುತ್ತೇನೆ. ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳೇ ಶಾಶ್ವತವಾಗಿ ಉಳಿಯಲಿ ಎಂಬ ಮಾತಿಗೆ ಜೀವತುಂಬುತ್ತೇನೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನವು ದೊಡ್ಡ ಜವಾಬ್ದಾರಿಯಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸಿ,ಎಲ್ಲರ ವಿಶ್ವಾಸ ಉಳಿಸಿಕೊಂಡು ಮುನ್ನಡೆಯೋಣ ಎಂಬ ಮಹದಾಸೆಯಲ್ಲಿ ನನ್ನ ಹುಟ್ಟುಹಬ್ಬವನ್ನು ಬಹಿರಂಗವಾಗಿ ಆಚರಿಸಿಕೊಳ್ಳಲು ತೀರ್ಮಾನಿಸಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಸಮತಾ ಸೈನಿಕ ದಳದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನಾಯಕರು ಭಾಗವಹಿಸಿ ತಮ್ಮ ನೆಚ್ಚಿನ ನಾಯಕ ವೆಂಕಟರಮಣಪ್ಪ ಅವರಿಗೆ ಹಾರ ತುರಾಯಿ ಹಾಕಿ ಬೃಹತ್ ಕೇಕ್ ಕತ್ತರಿಸಿ, ಸ್ಮರಣಿಕೆ ನೀಡಿ ಗೌರವಿಸುವ ಮೂಲಕ ತಮ್ಮ ಅಭಿಮಾನವನ್ನು ಮೆರೆದರು.
ನೂರಾರು ಮುಖಂಡರು ಭಾಗವಹಿಸಿ ಶುಭಾಶಯ ಕೋರಿದರು. ಕಾರ್ಯಕರ್ತರು ಹಾರ ಹಾಕಿ ಅಭಿನಂದನೆ ಸಲ್ಲಿಸಿ, ಹತ್ತಾರು ಕೇಕ್‌ಗಳನ್ನು ಕತ್ತರಿಸುವ ಮೂಲಕ ತಮ್ಮದೇ ಹುಟ್ಟುಹಬ್ಬ ಆಚರಿಸಿ ದಂತೆ ಸಂಭ್ರಮಿಸಿದ್ದು ವಿಶೇಷ ವಾಗಿತ್ತು.