ಗುಡಿಬಂಡೆ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಸಮಾಜದ ಅಂಕು ಡೊಂಕುಗಳನ್ನು ತಿದ್ದುವುದರ ಜೊತೆಗೆ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಮಹತ್ತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಕಾಳೇಗೌಡ ಹೇಳಿದರು. ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಗುರುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಪತ್ರಿಕಾರಂಗದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸತ್ಯ, ನಿಷ್ಪಕ್ಷಪಾತತೆ ಮತ್ತು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸುವ ಮಾಧ್ಯಮಗಳು ಪ್ರಜಾ ಪ್ರಭುತ್ವದ ಬಲವರ್ಧನೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಅಮೀರ್ ಜಾನ್ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿದ್ದು, ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: Gudibande News: ಬೆಳೆ ವಿಮೆ ಕಡ್ಡಾಯ; ರೈತರು ನಿರ್ಲಕ್ಷ್ಯ ಮಾಡಬೇಡಿ: ಜಿಲ್ಲಾಧಿಕಾರಿ ಡಾ.ಪ್ರಭು
ಕಾರ್ಯಕ್ರಮದ ಅಂಗವಾಗಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕುಗಳ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸದಸ್ಯರಿಗೆ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ ಹೆಲ್ಮೆಟ್ ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕಾಸ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಲಕ್ಷ್ಮೀ ವೇಣುಗೋಪಾಲ್, ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಹುಸೇನ್ ಸಾಬ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ದ್ವಾರಕಾನಾಥ್ ನಾಯ್ಡು, ಕರುನಾಡು ಸಾಹಿತ್ಯ ಪರಿಷತ್ ಅಧ್ಯಕ್ಷ ಫಯಾಜ್ ಖಾನ್, ಶ್ರೀರಾಮಪ್ಪ, ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಮುದ್ದುಕೃಷ್ಣ, ಉಪಾಧ್ಯಕ್ಷ ಜಿ.ಎ. ಬಾಬಾಜಾನ್, ಪ್ರಧಾನ ಕಾರ್ಯದರ್ಶಿ ಪುಟ್ಟರಂಗಯ್ಯ, ನ್ಯೂ ವಿಷನ್ ಇಂಗ್ಲಿಷ್ ಶಾಲೆಯ ಮುಖ್ಯಸ್ಥೆ ಡಿ.ಎಲ್. ಪರಿಮಳ, ತಾಲೂಕು ಅಧ್ಯಕ್ಷ ಮೊಹಮ್ಮದ್ ನಾಸೀರ್, ಪದಾಧಿಕಾರಿಗಳಾದ ಅಂಜಿನಪ್ಪ, ಸತೀಶ್ ಬಾಬು, ಜೆ.ಕೆ. ಕೃಷ್ಣಾರೆಡ್ಡಿ, ವೆಂಕಟೇಶಪ್ಪ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ ಸಂಘಟನೆಯ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.