Chikkaballapur News: ವೈದ್ಯಕೀಯ ವೃತ್ತಿ ಉದಾತ್ತ ವೃತ್ತಿ, ನಿಸ್ವಾರ್ಥ ವೃತ್ತಿ ಪರತೆ ಬೆಳೆಸಿಕೊಳ್ಳಿ: ಡೀನ್ ಡಾ.ಎಂ.ಎಲ್.ಮಂಜುನಾಥ್
ವೈದ್ಯಕೀಯ ವೃತ್ತಿ ಉದಾತ್ತವೃತ್ತಿಯಾಗಿದ್ದು, ವೈದ್ಯರಾದ ನಂತರ ನಿಸ್ವಾರ್ಥ ವೃತ್ತಿ ಪರತೆ ಬೆಳೆಸಿ ಕೊಳ್ಳಿ, ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿ ಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾ ಲಿಸಿಕೊಂಡು ಬರುತ್ತದೆ ಎಂದರು

ತಾಲ್ಲೂಕಿನ ಅರೂರು ಬಳಿಯ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ವರ್ಷದ ವೈದ್ಯ ವಿದ್ಯಾರ್ಥಿಗಳಿಗೆ ಎರ್ಪಡಿಸಿದ್ದ ಪ್ರಷರ್ಸ್ ಡೇ ಅಪ್ರತಿಮನ್ಸ್ 2025ಅನ್ನು ಡೀನ್ ಡಾ.ಎಂ.ಎಲ್.ಮಂಜುನಾಥ್ ಉಧ್ಘಾಟಿಸಿದರು

ಚಿಕ್ಕಬಳ್ಳಾಪುರ: ವೈದ್ಯಕೀಯ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಸಮಾಜದಲ್ಲಿ ವೈದ್ಯರನ್ನು ಗೌರವ ದಿಂದ ಕಾಣುವ ಹಾಗೂ ದೊಡ್ಡ ಸ್ಥಾನದಲ್ಲಿ ಗುರುತಿಸುವ ವೃತ್ತಿಯಾಗಿದೆ ಎಂದು ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಡೀನ್ ಹಾಗೂ ನಿರ್ದೇಶಕ ಡಾ.ಎಂ.ಎಲ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಅರೂರು ಬಳಿಯ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ವರ್ಷದ ವೈದ್ಯ ವಿದ್ಯಾರ್ಥಿಗಳಿಗೆ ಎರ್ಪಡಿಸಿದ್ದ ಪ್ರಷರ್ಸ್ ಡೇ ಅಪ್ರತಿಮನ್ಸ್ 2025ಅನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯಕೀಯ ವೃತ್ತಿ ಉದಾತ್ತವೃತ್ತಿಯಾಗಿದ್ದು, ವೈದ್ಯರಾದ ನಂತರ ನಿಸ್ವಾರ್ಥ ವೃತ್ತಿ ಪರತೆ ಬೆಳೆಸಿ ಕೊಳ್ಳಿ, ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾಲಿಸಿಕೊಂಡು ಬರುತ್ತದೆ ಎಂದರು.
ಇದನ್ನೂ ಓದಿ: Chikkaballapur News: ಜಾತಿ ಗಣತಿ ಮಾಡುವಾಗ ಮೂಲ ಜಾತಿ ಹೊಲೆಯ ಎಂದು ನಮೂದಿಸಲು ಮನವಿ
ವೈದ್ಯಕೀಯ ವಿದ್ಯಾರ್ಥಿಗಳು ದೊಡ್ಡ ಕನಸು ಹೊಂದಿರಬೇಕು. ಸಾಧನೆಗೆ ಯಾವುದೇ ಶಾರ್ಟ್ ಕಟ್‌ಗಳು ಇರುವುದಿಲ್ಲ, ಪರಿಶ್ರಮ, ಸಮಯ ಪಾಲನೆ, ಬದ್ದತೆಯಿಂದ ತಮ್ಮ ಗುರಿ ತಲುಪಲು ಸಾಧ್ಯ. ವೈದ್ಯ ವೃತ್ತಿಯಲ್ಲಿ ಜೂನಿಯರ್ ಮತ್ತು ಸೀನಿಯರ್ ಎಂಬ ಬೇಧವಿಲ್ಲ. ವಿದ್ಯಾರ್ಥಿಗಳು ತಾಯಿ, ಮಾತೃಭೂಮಿಯನ್ನು ಪ್ರೀತಿಸುವಷ್ಟೇ ಗುರುಗಳನ್ನು ಪ್ರೀತಿಸಬೇಕು. ಕೇವಲ ಅಂಕ ಗಳಿಕೆಯಿಂದ ಯಶಸ್ಸು ಸಾಧ್ಯ, ಅವನಿಗಿಂತ ಹೆಚ್ಚಿನ ಅಂಕ ಪಡೆಯಬೇಕೆಂಬ ಹೋಲಿಕೆ ಮನೋಭಾವ ಬೇಡ ಎಂದ ಅವರು, ಉತ್ತಮ ವೈದ್ಯರಾಗಲು ಮೊದಲು ತನ್ನ ವೃತ್ತಿಯ ಮಹತ್ವ ಮತ್ತು ಧ್ಯೇಯವನ್ನು ತಿಳಿದು ಸೇವೆಯಲ್ಲಿ ತೊಡಗುವಂತೆ ತಿಳಿಸಿದರು.
ವೈದ್ಯ ವಿದ್ಯಾರ್ಥಿಗಳು ವೃತ್ತಿಯ ಬಗ್ಗೆ ಗೌರವ, ವೃತ್ತಿ ಕೌಶಲ್ಯ ಮತ್ತು ಜವಾಬ್ದಾರಿಯನ್ನು ಅರಿಯ ಬೇಕು. ಮೊಬೈಲ್, ಇಂಟರ್‌ನೆಟ್‌ಗಳನ್ನು ಅವಶ್ಯಕತೆಗೆ ಮಾತ್ರ ಬಳಸಿ, ಹಾಗೆಯೇ ದುಶ್ಚಟಗಳಿಗೆ ಬಲಿಯಾಗದೆ ಸಮಯ ಹಾಳು ಮಾಡದೆ ಪರಿಶ್ರಮದಿಂದ ವಿದ್ಯಾವಂತರಾಗುವಂತೆ ಸಲಹೆ ನೀಡಿದರು.
ಆರೋಗ್ಯ ಮತ್ತು ಶಿಕ್ಷಣ ದೇಶದ ಬೆಳವಣಿಗೆಯನ್ನು ನಿರ್ಣಯಿಸುವ ಪ್ರಮುಖ ಕ್ಷೇತ್ರಗಳು, ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಿ ವೃತ್ತಿಯಲ್ಲಿ ಯಶಸ್ವಿಯಾಗಬೇಕು. ರೋಗ ಬೇಗ ಗುಣಪಡಿಸುವ ಪ್ರಕ್ರಿಯೆಯಲ್ಲಿ ವೈದ್ಯರು ರೋಗಿಯೊಂದಿಗಿನ ಉತ್ತಮ ಒಡನಾಟವು ಪ್ರಮುಖ ವಾದುದು. ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು. ಕಲಿಕೆ ನಿರಂತರ, ಬದುಕಿನ ಕೊನೆವರೆಗೂ ಕಲಿಯುತ್ತಿರಬೇಕು. ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಗಳು ಒಳ್ಳೆಯ ವೈದ್ಯರಾಗಿ ರೂಪುಗೊಂಡು ನಾಡಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪ್ರತಿಮನ್ಸ್ 2025 ಪ್ರಯುಕ್ತ ವೈದ್ಯ ವಿದ್ಯಾರ್ಥಿಗಳು ಕನ್ನಡ ಸೇರಿ ವಿವಿಧ ಭಾಷೆಯ ಹಾಡುಗಖಳಿಗೆ ನೃತ್ಯ ಮಾಡಿದರಲ್ಲದೇ, ಡಿ ಜೆ ಗೂ ನೃತ್ಯ ಮಾಡಿ ನೆರೆದವರ ಮನೆ ಸೊರೆಗೊಂಡರು.
ಈ ವೇಳೆ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ವಿಭಾಗ ಮುಖ್ಯಸ್ಥ ರಾದ ಡಾ.ಎಂ.ಆರ್.ಅನಿತ, ಡಾ.ಸುರೇಶ್ ನಾಯಕ್, ಡಾ.ಎಸ್.ಹೆಚ್.ಗೀತಾ, ಡಾ.ಸಿ.ಎಸ್.ನಾಗಲಕ್ಷ್ಮಿ, ಡಾ.ರವೀಂದ್ರ,ಡಾ.ಅರ್ಜುನ್ ಬಹದ್ದೂರ್, ಡಾ.ಶಂಕರಪ್ಪ,ಡಾ.ಪುಷ್ಪ, ಡಾ.ಮಂಜುಳ, ಚೈತ್ರರಾವ್, ಡಾ.ಅನಿತಾಲಕ್ಷ್ಮಿ, ಡಾ.ಭಾರ್ಗವಿ, ಡಾ.ಜ್ಯೋತಿ, ಡಾ.ನರಸಿಂಹ, ಡಾ.ಹೇಮಂತ್, ಡಾ.ಸಂದೀಪ್, ಕಾಲೇಜಿನ ಭೋಧಕ ಮತ್ತು ಬೋಧಕೇತರ ಸಿಬ್ಬಂಧಿ ಹಾಗೂ ಮೆಡಿಕಲ್ ವಿದ್ಯಾರ್ಥಿಗಳು ಇದ್ದರು.