ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ: ಪುಟ್ಟು ಅಂಜಿನಪ್ಪ

ಡಿ.ಕೆ. ಶಿವಕುಮಾರ್(D K Shivakumar) ಅವರ ಪ್ರಮಾಣವಚನ ರಾಜ್ಯದ ರಾಜಕೀಯ ಇತಿಹಾಸ ದಲ್ಲಿ ಮಹತ್ವದ ಘಟ್ಟವಾಗಿದೆ ಎಂದು ಹೇಳಿದರು. ಸಾಮಾನ್ಯ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಅವರಿಗೆ ಕಾಂಗ್ರೆಸ್ ಮುಖಂಡ ಹಾಗೂ ಸಮಾಜಸೇವಕ ಪುಟ್ಟು ಅಂಜಿನಪ್ಪ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. -

Profile
Ashok Nayak Jun 2, 2026 8:06 PM

ಶಿಡ್ಲಘಟ್ಟ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರಿಗೆ ಕಾಂಗ್ರೆಸ್ ಮುಖಂಡ ಹಾಗೂ ಸಮಾಜಸೇವಕ ಪುಟ್ಟು ಅಂಜಿನಪ್ಪ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್(D K Shivakumar) ಅವರ ಪ್ರಮಾಣವಚನ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಘಟ್ಟವಾಗಿದೆ ಎಂದು ಹೇಳಿದರು. ಸಾಮಾನ್ಯ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Shidlaghatta News: ಶ್ರೀರಾಮ ಶೋಭಾಯಾತ್ರೆ ಧಾರ್ಮಿಕ ಜಾಗೃತಿ ಮತ್ತು ಸಾಂಸ್ಕೃತಿಕ ಮೌಲ್ಯಗಳ ಪ್ರತೀಕ: ವೆಂಕಟೇಶ್

ರಾಜ್ಯದ ಸಮಗ್ರ ಅಭಿವೃದ್ಧಿ, ರೈತರ ಕಲ್ಯಾಣ, ಯುವಜನರಿಗೆ ಉದ್ಯೋಗಾವಕಾಶ, ಮಹಿಳಾ ಸಬಲೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಹೆಚ್ಚಿನ ಒತ್ತು ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜನರ ಆಶೋತ್ತರಗಳಿಗೆ ಸ್ಪಂದಿಸುವ ಜನಪರ ಆಡಳಿತವನ್ನು ಅವರು ನೀಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಮಹತ್ತರವಾಗಿದ್ದು, ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸ ಲಿದ್ದಾರೆ ಎಂದು ಪುಟ್ಟು ಅಂಜಿನಪ್ಪ ಹೇಳಿದರು.

ಈ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿಗೆ ಶುಭ ಹಾರೈಸಿದ ಅವರು, ಕರ್ನಾಟಕವು ಅಭಿವೃದ್ಧಿ, ಸಮೃದ್ಧಿ ಮತ್ತು ಸುಶಾಸನದ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಲಿ ಎಂದು ಆಶಿಸಿದರು.