MLA PuttaswamyGowda: ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ನನ್ನನ್ನು ಬೆಂಬಲಿಸುವವರ ಸಂಖ್ಯೆ ಹೆಚ್ಚಿದೆ : ಶಾಸಕ ಪುಟ್ಟಸ್ವಾಮಿಗೌಡ
ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ದೇವಗಾನ ಹಳ್ಳಿ ಗ್ರಾಮದ ಬಿಜೆಪಿ ಹಾಗೂ ಇನ್ನಿತರೆ ಪಕ್ಷಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಯಾವುದೇ ರೀತಿಯ ಪೂರ್ವ ಷರತ್ತುಗಳಿಲ್ಲದೆ ನಮ್ಮ ಬಣಕ್ಕೆ ಸೇರ್ಪಡೆಯಾಗುತ್ತಿರುವುದು ನನಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರು ತಿಳಿಸಿದರು

ಬಿಜೆಪಿ ಹಾಗೂ ಇನ್ನಿತರೆ ಪಕ್ಷಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಯಾವುದೇ ರೀತಿಯ ಪೂರ್ವ ಷರತ್ತುಗಳಿಲ್ಲದೆ ನಮ್ಮ ಬಣಕ್ಕೆ ಸೇರ್ಪಡೆಯಾಗುತ್ತಿರುವುದು ನನಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರು ತಿಳಿಸಿದರು.

ಗೌರಿಬಿದನೂರು: ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ದೇವಗಾನ ಹಳ್ಳಿ ಗ್ರಾಮದ ಬಿಜೆಪಿ ಹಾಗೂ ಇನ್ನಿತರೆ ಪಕ್ಷಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಯಾವುದೇ ರೀತಿಯ ಪೂರ್ವ ಷರತ್ತುಗಳಿಲ್ಲದೆ ನಮ್ಮ ಬಣಕ್ಕೆ ಸೇರ್ಪಡೆಯಾಗುತ್ತಿರುವುದು ನನಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರು ತಿಳಿಸಿದರು. ನಗರದ ತಮ್ಮ ಗೃಹ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸೇರ್ಪಡೆ ಕಾರ್ಯಕ್ರಮದಲ್ಲಿ ದೇವಗಾನ ಹಳ್ಳಿ ಗ್ರಾಮದ ಮುಖಂಡರನ್ನು ತಮ್ಮ ಬಣಕ್ಕೆ ಸ್ವಾಗತಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ಸಚಿವ ಡಾ.ಎಂ.ಸಿ.ಸುಧಾಕರ್ ಅವರೇ ಹಸಿರು ಶಾಲುಗಳ ಬಗ್ಗೆ ಹಗುರವಾಗಿ ಮಾತನಾಡಬೇಡಿ
ಕಳೆದ ವಿಧಾನಸಭೆ ಚುನಾವಣೆಯ ಸಂಧರ್ಭದಲ್ಲಿ ಕೇತ್ರದ ಮತದಾರರಿಗೆ ನೀಡಿದ ಭರವಸೆಯಂತೆ ತಾಲೂಕಿನ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದೇನೆ ಎಂದ ಅವರು ಜನರಿಗೆ ಅಗತ್ಯ ವಾಗಿ ಬೇಕಾಗಿರುವ ಮೂಲಸೌಲಭ್ಯಗಳಾದ ರಸ್ತೆ, ಕುಡಿಯುವ ನೀರು, ವಸತಿ, ನಿವೇಶನಗಳನ್ನು ಒದಗಿಸಲು ಮೊದಲ ಆದ್ಯತೆಯನ್ನು ನೀಡುತ್ತಿರುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ವೆಂಕಟರಾಮರೆಡ್ಡಿ, ನಾಗೇಂದ್ರ,ಆರ್ ಆರ್ ರೆಡ್ಡಿ ಸಾಗಾನಹಳ್ಳಿ ಶಿವಕುಮಾರ್, ಪವನ್ ರೆಡ್ಡಿ, ಗಂಗಾಧರಪ್ಪ,ವಿಷ್ಣು,ಅಶ್ವಥಪ್ಪ ಹಾಗೂ ಇನ್ನಿತರರು ಉಪಸ್ಥಿತ ರಿದ್ದರು.