ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ರೈತ ಹುತಾತ್ಮರ ತ್ಯಾಗ ದೇಶದ ಕೃಷಿಗೆ ದಾರಿದೀಪ: ಯಣ್ಣೂರು ಬಿ.ಬಸವರಾಜು

ದೇಶದ ಅನ್ನದಾತನ ಬದುಕು ಇಂದಿಗೂ ಸಂಕಷ್ಟಗಳಿಂದ ಮುಕ್ತವಾಗಿಲ್ಲ. ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ, ಬೆಳೆಗಳಿಗೆ ಸಮರ್ಪಕ ಬೆಂಬಲ ಬೆಲೆ ಸಿಗುತ್ತಿಲ್ಲ. ನೀರಾವರಿ, ವಿದ್ಯುತ್, ರಸಗೊಬ್ಬರ, ಬೀಜ ಹಾಗೂ ಮಾರುಕಟ್ಟೆ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲೂ ರೈತರು ದೇಶದ ಆಹಾರ ಭದ್ರತೆಯನ್ನು ಕಾಪಾಡುವ ಮಹತ್ತರ ಹೊಣೆಗಾರಿಕೆ ಯನ್ನು ನಿರ್ವಹಿಸುತ್ತಿದ್ದಾರೆ

ಚಿಕ್ಕಬಳ್ಳಾಪುರ: ರೈತರ ಹಕ್ಕುಗಳ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ರೈತ ಹುತಾತ್ಮರ ಬಲಿದಾನ ದೇಶದ ಕೃಷಿ ಚಳವಳಿಗೆ ಸದಾ ಸ್ಫೂರ್ತಿದಾಯಕವಾಗಿದ್ದು, ಅವರ ತ್ಯಾಗ ಸ್ಮರಿಸುವ ಮೂಲಕ ರೈತರ ಹಕ್ಕುಗಳ ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಜಿಲ್ಲಾ ಗಡಿನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಯಣ್ಣೂರು ಬಿ ಬಸವರಾಜು ಹೇಳಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ, ಎಐಕೆಎಂಕೆಎಸ್ ಅನುಬಂಧ ಮತ್ತು ಜಿಲ್ಲಾ ಗಡಿನಾಡು ರೈತ ಸಂಘದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ 40ನೇ ರೈತ ಹುತಾತ್ಮರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಅನ್ನದಾತನ ಬದುಕು ಇಂದಿಗೂ ಸಂಕಷ್ಟಗಳಿಂದ ಮುಕ್ತವಾಗಿಲ್ಲ. ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ, ಬೆಳೆಗಳಿಗೆ ಸಮರ್ಪಕ ಬೆಂಬಲ ಬೆಲೆ ಸಿಗುತ್ತಿಲ್ಲ. ನೀರಾವರಿ, ವಿದ್ಯುತ್, ರಸಗೊಬ್ಬರ, ಬೀಜ ಹಾಗೂ ಮಾರುಕಟ್ಟೆ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲೂ ರೈತರು ದೇಶದ ಆಹಾರ ಭದ್ರತೆಯನ್ನು ಕಾಪಾಡುವ ಮಹತ್ತರ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಪತ್ರಿಕೋದ್ಯಮದ ಹಿರಿಯ ಸಾಧಕ ಭವಾನಿ ಲಕ್ಷ್ಮೀನಾರಾಯಣ್‌ಗೆ ಪಿ.ಆರ್.ರಾಮಯ್ಯ ಸ್ಮಾರಕ ದತ್ತಿ ಪ್ರಶಸ್ತಿ

ರೈತ ಹುತಾತ್ಮರು ತಮ್ಮ ವೈಯಕ್ತಿಕ ಹಿತಾಸಕ್ತಿಗಲ್ಲ, ರೈತ ಸಮುದಾಯದ ಹಕ್ಕುಗಳು ಮತ್ತು ನ್ಯಾಯ ಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಬಲಿದಾನವನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ರೈತಪರ ನೀತಿಗಳ ಜಾರಿಗೆ ಸರ್ಕಾರಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪರಿಣಾಮ ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕಿದೆ ಎಂದು ಆಗ್ರಹಿಸಿದರು.

ರೈತರು ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಸಂವಿಧಾನಬದ್ಧ ಹೋರಾಟ ನಡೆಸಿದಾಗ ಮಾತ್ರ ಶಾಶ್ವತ ಪರಿಹಾರ ಸಾಧ್ಯ. ಇಂದಿನ ಯುವಪೀಳಿಗೆ ರೈತ ಹುತಾತ್ಮರ ಹೋರಾಟದ ಇತಿಹಾಸವನ್ನು ಅರಿತು ಕೃಷಿಯ ಮಹತ್ವವನ್ನು ಮನಗಾಣಬೇಕು. ರೈತರ ಏಕತೆ ಮತ್ತು ಸಂಘಟಿತ ಹೋರಾಟವೇ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬಲ ನೀಡಲಿದೆ ಎಂದು ಯಣ್ಣೂರು ಬಸವರಾಜು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗಡಿನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಬಿ. ಬಸವರಾಜು, ಮಂಚನಬೆಲೆ ವೆಂಕಟೇಶ್, ರಾಮಕೃಷ್ಣಪ್ಪ, ಭಾಗ್ಯರೇಖಾ, ಎಂ.ಎನ್. ಭೈರಪ್ಪ, ಶಾಂತಮ್ಮ, ನೇತ್ರಾವತಿ, ಲಕ್ಷ್ಮೀ ಸೇರಿದಂತೆ ರೈತ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.