ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA K.H. Puttaswamygowda: ಸರಕಾರಿ ಆಸ್ಪತ್ರೆ ವೈದ್ಯರಲ್ಲಿ ಸೇವಾ ಮನೋಭಾವ ಬತ್ತದಿರಲಿ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ವೈದ್ಯರ ಮೇಲೆ ರೋಗಿಗಳು ಅಪಾರ ನಂಬಿಕೆ ಇಟ್ಟು ಕೊಂಡಿರುತ್ತಾರೆ. ವೈದ್ಯರು ಬದ್ಧತೆಯಿಂದ ಸೇವೆ ಸಲ್ಲಿಸಬೇಕು, ಹಣದ ಆಸೆಗೆ ಕರ್ತವ್ಯ ನಿರ್ವಹಿಸು ವುದನ್ನು ಸಹಿಸುವುದಿಲ್ಲ. ಅಂತಹ ದೂರುಗಳು ಕೇಳಿ ಬಂದಲ್ಲಿ ಮುಲಾ ಜಿಲ್ಲದೆ ಕ್ರಮ ಜರುಗಿಸಲಾಗುವುದು. ಸಂಬಂಧಪಟ್ಟ ವೈದ್ಯಾಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದರು.

ಗೌರಿಬಿದನೂರು: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಹೆರಿಗೆಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ವೈದ್ಯರು ಹಣದ ಆಮಿಷಕ್ಕೆ ಒಳಗಾಗಿದ್ದು ತಿಳಿದುಬಂದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ (MLA K.H. Puttaswamygowda) ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದರು.

ನಗರದ ತಾಪಂನ ಸಾಮರ್ಥ್ಯಸೌಧದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈದ್ಯರ ಮೇಲೆ ರೋಗಿಗಳು ಅಪಾರ ನಂಬಿಕೆ ಇಟ್ಟು ಕೊಂಡಿರುತ್ತಾರೆ. ವೈದ್ಯರು ಬದ್ಧತೆಯಿಂದ ಸೇವೆ ಸಲ್ಲಿಸಬೇಕು, ಹಣದ ಆಸೆಗೆ ಕರ್ತವ್ಯ ನಿರ್ವಹಿಸು ವುದನ್ನು ಸಹಿಸುವುದಿಲ್ಲ. ಅಂತಹ ದೂರುಗಳು ಕೇಳಿ ಬಂದಲ್ಲಿ ಮುಲಾ ಜಿಲ್ಲದೆ ಕ್ರಮ ಜರುಗಿಸ ಲಾಗುವುದು. ಸಂಬಂಧಪಟ್ಟ ವೈದ್ಯಾಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದರು.

ಇದನ್ನೂ ಓದಿ: K.H. Puttaswamy Gowda: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ

75% ಸಹಜ ಹೆರಿಗೆ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವಂತಹವರಿಗೆ ಶೇ.75ರಷ್ಟು ಸಹಜ ಹೆರಿಗೆ ಮಾಡುವಂತಾಗಬೇಕು. ಅವಶ್ಯ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆಗೆ ಮುಂದಾಗ ಬೇಕು, ವಿನಾಕಾರಣ ಶಸ್ತ್ರಚಿಕಿತ್ಸೆ ಮಾಡಿದಲ್ಲಿ ಮಹಿಳೆಯ ಆರೋಗ್ಯಕ್ಕೂ ತೊಂದರೆಯಾಗಲಿದೆ ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾ ಮತ್ತು ಸಾರ್ವಜನಿಕ ವೈದ್ಯಾಧಿ ಕಾರಿ ಡಾ. ಲಕ್ಷ್ಮೀಕಾಂತ್ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಶೇ.57ರಷ್ಟು ಮಾತ್ರ ಸಹಜ ಹೆರಿಗೆ ಯಾಗುತ್ತಿವೆ. ಇನ್ನುಳಿದವರು ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿ ಕೊಳ್ಳುತ್ತಿದ್ದಾರೆ. ಅತ್ಯವಶ್ಯಕ ಪರಿಸ್ಥಿತಿಯಲ್ಲಿ ಮಾತ್ರ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಶಾಸಕರಿಗೆ ತಿಳಿಸಿದರು.

ಸರಕಾರದ ಪ್ರತಿಯೊಂದು ಯೋಜನೆಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪು ವಂತಾಗಬೇಕು. ಆ ನಿಟ್ಟಿನಲ್ಲಿ ತಾಲೂಕು ಆಡಳಿತ ಕೆಲಸ ಮಾಡಬೇಕೆಂದು ತಾಕೀತು ಮಾಡಿದರು.

ಆದರ್ಶ ಶಾಲೆ ಅವ್ಯವಸ್ಥೆ: ತಾಲೂಕಿನ ಇಡಗೂರು ಬಳಿಯ ಆದರ್ಶ ವಸತಿ ಶಾಲೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದ್ದು, ಸಂಬಂಧಪಟ್ಟವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೂಡಲೇ ಆದರ್ಶ ಶಾಲೆಯಲ್ಲಿ ಮೂಲಸೌಕಯ್ಯಗಳ ಜತೆಗೆ ಶೈಕ್ಷಣಿಕ ವಾತಾವರಣ ಸೃಷ್ಟಿಯಾಗಬೇಕು ಎಂದು ತಾಕೀತು ಮಾಡಿದರು.

ಬಿಇಒ ಗಂಗರೆಡ್ಡಿ ಮಾತನಾಡಿ, ಆದರ್ಶ ವಸತಿ ಶಾಲೆಯ ಅಭಿವೃದ್ಧಿಗೆ ಅನುದಾನದ ಕೊರತೆ ಎದುರಾಗಿದ್ದು, ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಸರಕಾರದ ಗಮನಕ್ಕೆ ತರಲಾಗಿದೆ. ತಾಲೂಕಿನಲ್ಲಿ 192 ಶಿಕ್ಷಕರ ಕೊರತೆ ಇದ್ದು, ಒಂಬತ್ತು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರೇ ಇಲ್ಲ, ಆದರ್ಶ ಶಾಲೆಯ ಪ್ರಿನ್ಸಿಪಾಲರಿಗೆ ಸ್ವಚ್ಛತೆ ಹಾಗೂ ವ್ಯವಸ್ಥೆಯ ಬಗ್ಗೆ ಸರಿಪಡಿಸಿಕೊಳ್ಳುವಂತೆ ಈಗಾಗಲೇ ನೋಟಿಸ್ ಜಾರಿ ಮಾಡಿ ತಿಳಿಸ ಲಾಗಿದೆ ಎಂದರು.

ತಾಲೂಕಿನ ವಿವಿಧ ಕಡೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ೮೦ ಕೋಟಿ ರೂಪಾಯಿಗಳ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿ ದರು. ಕೆಡಿಎ ಸಭೆಯಲ್ಲಿ ನಾನಾ ಇಲಾಖೆಗಳ ಪ್ರಗತಿ ಬಗ್ಗೆ ವರದಿ ಪಡೆದುಕೊಳ್ಳಲಾಯಿತು.

ಸಭೆಯಲ್ಲಿ ತಹಶಿಲ್ದಾರ್ ಕೆ.ಎಂ.ಅರವಿಂದ್. ತಾಪಂ ಇಒ ಜಿ.ಕೆ.ಹೊನ್ನಯ್ಯ, ಪೌರಾಯುಕ್ತ ಕೆ.ಜಿ. ರಮೇಶ್ ಸೇರಿದಂತೆ ಬಹುತೇಕ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.