ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಅರ್ಹತೆಯ ಆಧಾರದಲ್ಲಿ ನೇಮಕಾತಿ ಹೊಂದುವ ಸಿಬ್ಬಂದಿ ಸರಕಾರದ ಆಶಯಕ್ಕನು ಗುಣವಾಗಿ ಕಾರ್ಯ ನಿರ್ವಹಿಸಲಿ : ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಅಂಗನವಾಡಿ ಸಿಬ್ಬಂದಿ ನೇಮಕದ ಬಗ್ಗೆ ಈ ಹಿಂದೆ ಬಹಳ ತತ್ಸಾರ ಇತ್ತು, ಆ ಕೆಲಸವನ್ನು ನಾವೇಕೆ ಮಾಡಬೇಕು ಎಂಬ ಭಾವನೆ ಇತ್ತು. ಪ್ರಸ್ತುತ ಆ ಭಾವನೆ ಬದಲಾಗಿದೆ. ಅಂಗನ ವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಬಹಳ ಬೇಡಿಕೆ ಇದೆ, ಅದೇ ರೀತಿ ಸ್ಪರ್ಧೆಯು ಇದೆ

31 ಅಂಗನವಾಡಿ ಕಾರ್ಯಕರ್ತೆಯರು, 163 ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಿರುವುದು ಅಭಿನಂದನಾರ್ಹವಾದ ವಿಚಾರವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ: ಯಾವುದೇ ಶಿಪಾರಸ್ಸು, ರಾಜಕೀಯ ಒತ್ತಡ ಇಲ್ಲದೆ ಅವರು ಪಡೆದ ಅಂಕಗಳು ಹಾಗೂ ಅರ್ಹತೆಗಳನ್ವಯ ಜಿಲ್ಲೆಯಲ್ಲಿ ಇಂದು 31 ಅಂಗನವಾಡಿ ಕಾರ್ಯ ಕರ್ತೆಯರು, 163 ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಿರು ವುದು ಅಭಿನಂದನಾರ್ಹವಾದ ವಿಚಾರವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್(Dr.M.C.Sudhakar) ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕನ್ನಡ ಭವನದಲ್ಲಿ ಆಯೋಜಿಸಿದ್ದ “ಹೊಸ ದಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ ಹಾಗೂ ವಿವಿಧ ಇಲಾಖಾ ಸವಲತ್ತುಗಳ ವಿತರಣಾ ಕಾರ್ಯಕ್ರಮ”ಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಂಗನವಾಡಿ ಸಿಬ್ಬಂದಿ ನೇಮಕದ ಬಗ್ಗೆ ಈ ಹಿಂದೆ ಬಹಳ ತತ್ಸಾರ ಇತ್ತು, ಆ ಕೆಲಸವನ್ನು ನಾವೇಕೆ ಮಾಡಬೇಕು ಎಂಬ ಭಾವನೆ ಇತ್ತು. ಪ್ರಸ್ತುತ ಆ ಭಾವನೆ ಬದಲಾಗಿದೆ. ಅಂಗನ ವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಬಹಳ ಬೇಡಿಕೆ ಇದೆ, ಅದೇ ರೀತಿ ಸ್ಪರ್ಧೆಯು ಇದೆ ಎಂದರು.

ಅಂಗನವಾಡಿ ಸಿಬ್ಬಂದಿ ನೇಮಕದ ಆಯ್ಕೆ ಬಯಸುವ ಅಭ್ಯರ್ಥಿಗಳು ಗಳಿಸಿದ ವಿದ್ಯಾ ರ್ಹತೆಯ ಅಂಕಗಳು ಹಾಗೂ ಸ್ಥಳೀಯ ವಾಸದ ಅರ್ಹತೆಯ ಆಧಾರದ ಮೇಲೆ ಜಿಲ್ಲಾಡಳಿತ ಒಟ್ಟು 194 ಅಂಗನವಾಡಿ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೆ ಆಯ್ಕೆ ಮಾಡಿದೆ. ಗುರುವಾರದ ಕಾರ್ಯಕ್ರಮದಲ್ಲಿಯೇ ಎಲ್ಲರ ಸಮ್ಮುಖ ನೇಮಕಾತಿ ಪತ್ರವನ್ನು ಬಹಳ ಪಾರದರ್ಶಕವಾಗಿ ಹಾಗೂ ಸಮರ್ಪಕವಾಗಿ ವಿತರಣೆ ಮಾಡಿರುವುದು ಹೆಮ್ಮೆ ತಂದಿದೆ ಎಂದರು.

ನೇಮಕಾತಿ ಆಗಿರುವ ತಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸರ್ಕಾರದ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅಂಗನವಾಡಿಗಳಿಗೆ ಬರುವ ಕಾರ್ಮಿಕರ ಮಕ್ಕಳು, ಬಡವರ ಮಕ್ಕಳ ಬೆಳವಣಿಗೆಗೆ ಶಕ್ತಿ ತುಂಬಬೇಕು. ಮಕ್ಕಳಿಗೆ ತಾಯಿ ನಂತರದ ಪಾಠಶಾಲೆ ಯ ಅನುಭವವನ್ನು ಕೊಡುವವರೇ ಅಂಗನವಾಡಿ ಕಾರ್ಯಕರ್ತೆಯರು. ಆದ್ದರಿಂದ ತಮಗೆ ನಿಯೋಜಿತವಾಗಿರುವ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿ ಸಮಾಜದ ಅಭಿವೃದ್ಧಿಗೆ ತಾವೆಲ್ಲರೂ ಪಾತ್ರರಾಗಬೇಕು ಎಂದು ತಿಳಿಸಿ ನೂತನವಾಗಿ ಆಯ್ಕೆಗೊಂಡ ಸಿಬ್ಬಂದಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿ ಶುಭ ಕೋರಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ 3ನೇ ವರ್ಷದಿಂದಲೆ ನರ್ಸರಿ ಮಾದರಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂಬ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ಭಾಗವಾಗಿ “ಕಲ್ಯಾಣ ಕರ್ನಾಟಕ” ಭಾಗದಲ್ಲಿ ಪ್ರಯೋಗಿಕವಾಗಿ ಅಂಗನವಾಡಿಗಳನ್ನು ಉನ್ನತೀಕರಿಸಿ ಮಾಂಟೆ ಸೆರಿ ಹಾಗೂ ನರ್ಸರಿ ಮಾದರಿಯಲ್ಲಿ ಶಿಕ್ಷಣ ನೀಡುವ ಪ್ರಯತ್ನ ನಡೆಯುತ್ತಿದೆ. ಇದರ ಸಾಧಕ ಬಾಧಕಗಳ ಬಗ್ಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಪರಿಶೀಲಿಸುವ ಅಗತ್ಯವಿದೆ. ಈ ರೀತಿಯ ಶಿಕ್ಷಣ ಪದ್ದತಿ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಅಂಗನವಾಡಿಗಳ ಸ್ವರೂಪವೇ ಬದಲಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ತಂತ್ರಜ್ಞಾನವನ್ನು ಬಳಸಿಕೊಂಡು ಮಕ್ಕಳಿಗೆ ಉನ್ನತ ಜ್ಞಾನವನ್ನು ನೀಡಲು ಇಂದು ಸಾಕಷ್ಟು ಅವಕಾಶಗಳಿವೆ, ಆ ದಿಸೆಯಲ್ಲಿ ಜಿಲ್ಲೆಯಲ್ಲಿ ಇಂದು 730 ಸಕ್ಷಮ ಅಂಗನವಾಡಿ ಗಳಿಗೆ ಎಲ್.ಇ.ಡಿ ಸ್ಮಾರ್ಟ್ ಟಿ.ವಿ. ಗಳನ್ನು ವಿತರಣೆ ಮಾಡಲಾಗುತ್ತಿದೆ. ಜೊತೆಗೆ 750 ನೀರು ಶುದ್ದೀಕರಣದ ಖಔ ಘಟಕಗಳನ್ನು ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ೩೨೦ ಅಂಗನವಾಡಿಗಳಿಗೆ ಸ್ವಂತ ನಿವೇಶನ ನೀಡಲು ಜಿಲ್ಲಾಡಳಿತ ತುರ್ತು ಕ್ರಮ ತೆಗೆದುಕೊಂಡು ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.
*

ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಮಾತನಾಡಿ, ಉನ್ನತ ಜಾತಿಯವರು, ಕೆಳಜಾತಿಯವರ ಮನೆಗಳಿಗೆ ಪರಸ್ಪರ ಪ್ರವೇಶ ಮಾಡದಿರುವಂತಹ ಪರಿಸ್ಥಿತಿ ಇನ್ನೂ ಜೀವಂತವಾಗಿದೆ. ಇಂತಹ ಅನಿಷ್ಟ ಜಾತಿ ಪದ್ಧತಿಯನ್ನು ತೊಡೆದು ಹಾಕಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಕಂಕಣ ಬದ್ದರಾಗಿ ಕೆಲಸ ಮಾಡಬೇಕಿದೆ. ಆಮೂಲಕ ಜಾತಿ ಪದ್ಧತಿಯನ್ನು ಕಿತ್ತೆಸೆಯುವಂತಹ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಜೊತೆಗೆ ಅಂಗನವಾಡಿಯ ಸೌಲಭ್ಯಗಳನ್ನು ಮಕ್ಕಳಿಗೆ ಗರ್ಭಿಣಿ ಬಾಣಂತಿಯರಿಗೆ ಯಾವು ದೇ ಅಸಮಾನತೆ, ತಾರತಮ್ಯಕ್ಕೆ ಆಸ್ಪದವಿಲ್ಲದಂತೆ ಮಾಡದಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಂತರ್ಜಾತಿ ವಿವಾಹವಾದ 54 ಜೋಡಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ವಿತರಣೆ ಮಾಡಲಾಯಿತು. ನೂತನ ಫಲಾನು ಭವಿಗಳಿಗೆ ಪಡಿತರ ಚೀಟಿಗಳನ್ನು ಸಹ ವಿತರಣೆ ಮಾಡಲಾಯಿತು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕೂಡ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಸೀಲ್ದಾರ್ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆ ಯರು, ಸಹಾಯಕಿಯರು, ವಿವಿಧ ಯೋಜನೆಗಳಡಿ ಫಲಾನುಭವಿಗಳು ಹಾಜರಿದ್ದರು.