ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆ ಬದಲಾಗಲಿ ; ಮುಸ್ಲಿಂ ತುಷ್ಟೀಕರಣ ನಿಲ್ಲಲಿ : ಸೀಕಲ್ ಆನಂದ ಗೌಡ ಆಗ್ರಹ

ಕಾಂಗ್ರೆಸ್ ಅಧಿಕಾರದಲ್ಲೇ ಇದ್ದರೆ, ರಾಜ್ಯದೊಳಗೆ ಇಂತಹ ಕೋಮು ಸಂಘರ್ಷಗಳು ಉದ್ಭವ ವಾಗುತ್ತವೆ. ‘ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂಧರ್ಭದಲ್ಲಿ ಮಸೀದಿ ಒಳಗಿನಿಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಹೊರಗಡೆಯಿಂದ ಬಂದವರು ಹಾಗೂ ಸ್ಥಳೀಯ ಮುಸ್ಲಿಂ ಗೂಂಡಾಗಳಿಂದ ಕೃತ್ಯ ನಡೆದಿದೆ’

ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆ ಬದಲಾಗಲಿ

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮದ್ದೂರಿನಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟ ಖಂಡಿಸಿ ವಿಶ್ವ ಹಿಂದು ಪರಿಷದ್  ಮತ್ತು ಬಜರಂಗದಳದಿAದ   ನಗರದ ಅಂಬೇಡ್ಕರ್ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು -

Ashok Nayak Ashok Nayak Sep 12, 2025 1:53 AM

ಚಿಕ್ಕಬಳ್ಳಾಪುರ: ರಾಜ್ಯದ ಕಾಂಗ್ರೆಸ್ ಸರಕಾರ ಕಳೆದ ಎರಡು ವರ್ಷಗಳಿಂದ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ.ಇನ್ನಾದರೂ ಸರಿಯೆ ಮುಸ್ಲಿಂ ತುಷ್ಠೀಕರಣ ನಿಲ್ಲಿಸಿ,ಹಿಂದೂಗಳ ಭಾವನೆಗಳನ್ನು ಗೌರವಿಸಲಿ ಎಂದು ಬಿಜೆಪಿ ಮುಖಂಡ ಸೀಕಲ್ ಆನಂದ್‌ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಮದ್ದೂರಿನ ಘಟನೆ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳದ ವತಿಯಿಂದ ಏರ್ಪಡಿಸಿದ್ದ ಕಲ್ಲು ತೂರಾಟ ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

ಗೌರಿ ಗಣೇಶ ಹಬ್ಬ ಹಿಂದೂಗಳ ಭಾವನಾತ್ಮಕ ಹಬ್ಬ.ದೇಶದ ಸ್ವಾತಂತ್ರ ಹೋರಾಟದ ಸಂದರ್ಭ ದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ದೇಶಭಕ್ತರನ್ನು ಸಂಘಟಿಸಲು  ಬಾಲಗಂಗಾಧರ್ ತಿಲಕ್ ಅವರು ಗಣೇಶ ಹಬ್ಬವನ್ನು ಸಾರ್ವಜನಿಕ ಗಣೇಶ ಹಬ್ಬವನ್ನಾಗಿ ಪರಿವರ್ತಿಸಿದರು. ಅಂದಿನಿಂದ ಇಂದಿನವರೆಗೂ ಸಹ ಗಣೇಶೋತ್ಸವು ಸಾರ್ವಜನಿಕ ಸ್ಥಳದಲ್ಲಿ ವಿಜೃಂಭಣೆಯಿಂದ ಆಚರಿಸಿ ಕೊಂಡು ಬರಲಾಗುತ್ತಿದೆ. ಆದರೆ ಈ ಬಾರಿ ಗಣೇಶ ಉತ್ಸವ  ಸಂದರ್ಭದಲ್ಲಿ ರಾಜ್ಯ ಸರ್ಕಾರವು ನಾನಾ ನಿಯಮಗಳನ್ನೇರಿ ನಮ್ಮ ಆಚರಣೆಗೆ ವಿಘ್ನತರುತ್ತಿದೆ ಎಂದು ದೂರಿದರು.

ಇದನ್ನೂ ಓದಿ: Chikkanayakanahalli News: ಶಿಕ್ಷಣದಿಂದ ಯಾರೂ ವಂಚಿತರಾಗಬಾರದು: ಸಿಎಸ್ ಕಾಂತರಾಜು

ಮಂಡ್ಯ ಜಿಲ್ಲೆಯ ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ ಕಲ್ಲು ತೂರುವ ಮೂಲಕ ಶಾಂತಿ ಯುತವಾಗಿ ನಡೆಯುತ್ತಿದ್ದ ಉತ್ಸವದಲ್ಲಿ ಅಶಾಂತಿಯನ್ನು ತಂದಿರುವುದು ಅಕ್ಷಮ್ಯ ಅಪರಾಧ. ‘ರಂಜಾನ್ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿರಬೇಕು ಎಂದರೆ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಧಿಕಾರದಲ್ಲೇ ಇದ್ದರೆ, ರಾಜ್ಯದೊಳಗೆ ಇಂತಹ ಕೋಮು ಸಂಘರ್ಷಗಳು ಉದ್ಭವ ವಾಗುತ್ತವೆ. ‘ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂಧರ್ಭದಲ್ಲಿ ಮಸೀದಿ ಒಳಗಿನಿಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಹೊರಗಡೆಯಿಂದ ಬಂದವರು ಹಾಗೂ ಸ್ಥಳೀಯ ಮುಸ್ಲಿಂ ಗೂಂಡಾಗಳಿಂದ ಕೃತ್ಯ ನಡೆದಿದೆ’ ಎಂದು ಆರೋಪಿಸಿದರು.

ಘಟನೆ ಖಂಡಿಸಿ ಸಾರ್ವಜನಿಕರು ಶಾಂತಿಯುತ ಹೋರಾಟ ಮಾಡುವಾಗ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ಮಾಡಿರುವುದು ಕೂಡ ಸರಿಯಲ್ಲ. ಮಹಿಳೆಯರ ಮೇಲೆ ಹಲ್ಲೆ ಮಾಡಿದ ಪೊಲೀಸ ರನ್ನು ಅಮಾನತು ಮಾಡಬೇಕು. ಕಲ್ಲು ತೂರಾಟದ ಗಲಭೆಯ ಹಿಂದೆ ಹಲವು ಸಂಘಟನೆಗಳಿವೆ. ಕೂಡಲೇ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಗಾಯಗೊಂಡಿರುವ ಭಕ್ತರಿಗೆ ಉಚಿತ ಚಿಕಿತ್ಸೆ ಹಾಗೂ ಆಸ್ತಿಹಾನಿಯ ವೆಚ್ಚವನ್ನು ಗಲಭೆಕೋರರಿಂದ ವಸೂಲಿ ಮಾಡಬೇಕು. ಒಂದು ವೇಳೆ ಗಲಭೆಕೋರರ ಬಗ್ಗೆ ಮೃದುಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗಣೇಶ ಉತ್ಸವದಲ್ಲಿ ಭಾಗವಹಿಸಲು ವಿಶ್ವ ಹಿಂದೂ ಪರಿಷತ್ತಿನ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಚಿತ್ರದುರ್ಗ ಜಿಲ್ಲಾ  ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಲವು ಕಡೆ ಧ್ವನಿವರ್ಧಕ ಗಳನ್ನು ಬಳಸಲು ನಿಷೇಧ ಹೇರಿದೆ. ನಮ್ಮ ರಾಜ್ಯದಲ್ಲಿ ಮದ್ದೂರು, ಸಾಗರ  ಸೇರಿದಂತೆ   ಅನೇಕ  ಸ್ಥಳಗಳಲ್ಲಿ ಗಣೇಶ ಶೋಭ ಯಾತ್ರೆ ಹಾಗೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ರೆಂಬ ಹಣೆಪಟ್ಟಿ ಹೊತ್ತಿರುವ ಕಿಡಿಗೇಡಿಗಳಿಂದ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಇವರ ಮೇಲೆ ರಾಜ್ಯ ಪೊಲೀಸರು ಯಾವುದೇ ಬಲವಾದ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಹಿಂದುಗಳ ಮೇಲೆಯೇ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.

ನಮ್ಮ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅನೇಕ ಮುಖಂಡರ ಮೇಲೆ ವಿಧಿಸಿರುವ ಜಿಲ್ಲಾ ಪ್ರವೇಶ  ನಿರ್ಬಂಧ ಆದೇಶವನ್ನು  ಸರ್ಕಾರ ತಕ್ಷಣ ಹಿಂಪಡೆಯಬೇಕು  ಹಾಗೂ ಗಣೇಶ ಉತ್ಸವ  ಹಾಗೂ  ಶೋಭಾ ಯಾತ್ರೆ ಮೆರವಣಿಗೆಗಳು ಸಂಭ್ರಮದಿಂದ ನಡೆಯಲು ಅನುಕೂಲ ಮಾಡಿಕೊಡ ಬೇಕು. ಗಣೇಶೋತ್ಸವ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ ಮಾಡುವವರ ಮೇಲೆ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳ ಬೇಕು  ಮತ್ತು ಕಲ್ಲು ತೂರುವ ಸ್ಥಳಗಳ ಮೇಲೆ ಡ್ರೋನ್ ಕ್ಯಾಮೆರಾ ಅಳವಡಿಸಬೇಕು ಎಂದು  ರಾಜ್ಯ ಸರ್ಕಾರವನ್ನು ಆಗ್ರಹಿಸಿ ದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂಪರಿಷತ್ತಿನ ಜಿಲ್ಲಾ ಕಾರ್ಯಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್,  ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ,ಭಜರಂಗದಳ ಸಂಯೋಜಕ ಜಿ.ಎ.ಅಮರೇಶ್, ಮುಖಂಡರಾದ ಚಿಕ್ಕನಹಳ್ಳಿ ನಾರಾಯಣಸ್ವಾಮಿ, ಲಕ್ಷ್ಮಿನಾರಾಯಣಗುಪ್ತ, ಸಾಗಾನಹಳ್ಳಿ ಶಿವಕುಮಾರ್, ಮಧುಚಂದ್ರ, ಆರ್ ಹೆ???ನ್ ಅಶೋಕ್ ಕುಮಾರ್, ಚಲುವರಾಜು,ಪುರುಷೋತ್ತಮ್, ನರೇಶ್, ಮಲ್ಲಿಕಮ್ಮ ಮ್ಮತ್ತಿತರರು ಇದ್ದರು.