ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗಲಿದೆ: ಪುಟ್ಟು ಅಂಜಿನಪ್ಪ
ನಗರದಲ್ಲಿ ಬುಧವಾರ ಆಯೋಜಿಸಿದ್ದ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ದಲ್ಲಿ ಮಾತನಾಡಿ, ನೂತನ ಮುಖ್ಯಮಂತ್ರಿಯವರ ಯಶಸ್ವಿ ಆಡಳಿತ, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸುಖ-ಶಾಂತಿಗಾಗಿ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ
ನೂತನ ಮುಖ್ಯಮಂತ್ರಿಯ ಯಶಸ್ವಿ ಆಡಳಿತಕ್ಕಾಗಿ ಶಿಡ್ಲಘಟ್ಟದಲ್ಲಿ ಪುಟ್ಟು ಅಂಜಿನಪ್ಪ ನೇತೃತ್ವದ ಸರ್ವಧರ್ಮ ಪ್ರಾರ್ಥನೆ -
ಶಿಡ್ಲಘಟ್ಟ: "ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಡಿ.ಕೆ. ಶಿವಕುಮಾರ್ (D K Shivakumar) ಅವರು ಜನರ ಆಶೋತ್ತರಗಳಿಗೆ ಸ್ಪಂದಿಸುವ ಆಡಳಿತ ನೀಡಲಿದ್ದು, ಅವರ ನಾಯಕತ್ವದಲ್ಲಿ ಕರ್ನಾಟಕ ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿದೆ" ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಅಂಜಿನಪ್ಪ ಹೇಳಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ದಲ್ಲಿ ಮಾತನಾಡಿ, ನೂತನ ಮುಖ್ಯಮಂತ್ರಿಯವರ ಯಶಸ್ವಿ ಆಡಳಿತ, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸುಖ-ಶಾಂತಿಗಾಗಿ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Shidlaghatta News: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ: ಪುಟ್ಟು ಅಂಜಿನಪ್ಪ
ಈ ಹಿನ್ನೆಲೆಯಲ್ಲಿ ಪುಟ್ಟು ಅಂಜಿನಪ್ಪ ಅವರ ನೇತೃತ್ವದಲ್ಲಿ ನಗರದ ಕೋಟೆ ವೃತ್ತದಲ್ಲಿ ರುವ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಸ್ ನಿಲ್ದಾಣದ ಸಮೀಪದ ಶಮ್ಮತ್ ಶಾವಲಿ ಬಾಬಾ ಆಲಿ ದರ್ಗಾಕ್ಕೆ ಭೇಟಿ ನೀಡಿ ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ವಿಶೇಷ ದುಆ ಸಲ್ಲಿಸಲಾಯಿತು. ನಂತರ ಸಲ್ಲಾಪುರಂ ದೇವಾಲಯದಲ್ಲೂ ವಿಶೇಷ ಪೂಜೆ ನೆರವೇರಿಸಿ ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.
ಸರ್ವಧರ್ಮ ಸಮಭಾವದ ಸಂಕೇತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಧಾರ್ಮಿಕ ಮುಖಂಡರು ಭಾಗವಹಿಸಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದರು. ನಗರದಲ್ಲಿ ಹಬ್ಬದ ವಾತಾವರಣ ಕಂಡುಬಂತು.
ಈ ಸಂದರ್ಭದಲ್ಲಿ ಕೆಎಂಎಫ್ ಮಾಜಿ ನಿರ್ದೇಶಕ ಶ್ರೀನಿವಾಸ ರಾಮಯ್ಯ, ಮೆರೋ ಸರ್ಕಲ್ ರಾಜ್‌ಕುಮಾರ್, ಭೂದಾಳ ವರದರಾಜ್, ರಾಮಾಂಜನೇಯ, ಆಸ್ಪತ್ ರೆಡ್ಡಿ, ಅಶ್ವಥ್, ಆನೂರು ದೇವರಾಜ್, ಧರ್ಮಘಟ್ಟ ಕೃಷ್ಣಪ್ಪ, ಮಂಜುನಾಥ್, ಮಹೇಶ್, ಭಕ್ತರಹಳ್ಳಿ ಮಧು, ದರ್ಶನ್, ದಾಮೋದರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.