ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಶಕ್ತಿ; ಎಸ್‌ಐಆರ್‌ಗೆ ಸಹಕರಿಸಿ: ಸೀಕಲ್ ರಾಮಚಂದ್ರಗೌಡ

ಬಿಜೆಪಿ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ರಾಜ್ಯಾದ್ಯಂತ ಎಸ್‌ಐಆರ್ ಕುರಿತು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಅಭಿಯಾನ ನಡೆಯುತ್ತಿದೆ. ಅದರಂತೆ ಶಿಡ್ಲಘಟ್ಟದಲ್ಲಿಯೂ ಮತದಾರರಿಗೆ ಪ್ರಕ್ರಿಯೆಯ ಮಹತ್ವವನ್ನು ತಿಳಿಸಿ, ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲರೂ ಜವಾಬ್ದಾರಿ ಯಿಂದ ಈ ಅಭಿಯಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು

ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಶಕ್ತಿ; ಎಸ್‌ಐಆರ್‌ಗೆ ಸಹಕರಿಸಿ

-

Profile
Ashok Nayak Jul 27, 2026 5:07 PM

ಶಿಡ್ಲಘಟ್ಟ: ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಅತಿದೊಡ್ಡ ಶಕ್ತಿಯಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸರಿಯಾಗಿರುವುದು ಅತ್ಯಂತ ಮುಖ್ಯ. ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಕರೆ ನೀಡಿದರು.

ನಗರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಎಸ್‌ಐಆರ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸ ಬೇಕು. ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಅಳಿಸುವಿಕೆ ಸೇರಿದಂತೆ ಯಾವುದೇ ಬದಲಾವಣೆ ಅಗತ್ಯವಿದ್ದರೆ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮಾಡಿಸಿಕೊಳ್ಳಬೇಕು. ನಿಖರ ಮತದಾರರ ಪಟ್ಟಿ ಯಿಂದಲೇ ಪ್ರಜಾಪ್ರಭುತ್ವ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Shidlaghatta News: ಶಿಡ್ಲಘಟ್ಟದಲ್ಲಿ ಬೃಹತ್ ಸಸ್ಯಾಹಾರ ಜನಜಾಗೃತಿ ಜಾಥಾ; ವೆಂಕಟೇಶ್ವರ ಚಿತ್ರಮಂದಿರದಲ್ಲಿ ಡಾ. ಸುಭಾಷ್ ಪತ್ರೀಜಿ ಜೀವನಾಧಾರಿತ ಕಿರುಚಿತ್ರ ಪ್ರದರ್ಶನ

ಬಿಜೆಪಿ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ರಾಜ್ಯಾದ್ಯಂತ ಎಸ್‌ಐಆರ್ ಕುರಿತು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಅಭಿಯಾನ ನಡೆಯುತ್ತಿದೆ. ಅದರಂತೆ ಶಿಡ್ಲಘಟ್ಟದಲ್ಲಿಯೂ ಮತದಾರರಿಗೆ ಪ್ರಕ್ರಿಯೆಯ ಮಹತ್ವವನ್ನು ತಿಳಿಸಿ, ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲರೂ ಜವಾಬ್ದಾರಿಯಿಂದ ಈ ಅಭಿಯಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸ ಬೇಕು ಎಂದು ಮನವಿ ಮಾಡಿದರು.

ಬಳಿಕ ಬಿಜೆಪಿ ಕಾರ್ಯಕರ್ತರು ನಗರದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಕರಪತ್ರಗಳನ್ನು ವಿತರಿಸಿದರು. ಮತದಾರರ ಪಟ್ಟಿಯನ್ನು ಪರಿಶೀಲಿಸುವ ವಿಧಾನ, ಅಗತ್ಯ ದಾಖಲೆ ಗಳ ಸಲ್ಲಿಕೆ ಹಾಗೂ ತಿದ್ದುಪಡಿ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಅಭಿಯಾನದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ರೂಪಸಿ ರಮೇಶ್, ನಗರ್ಥ ಮಂಡಳಿ ಅಧ್ಯಕ್ಷ ಶಿವಶಂಕರ್, ಎಸ್. ನಾಗರಾಜ್, ಮಲ್ಲಿಕಾರ್ಜುನ್, ಮುರುಳಿ, ಮೋಹನ್, ಮಹಿಳಾ ಮಂಡಳಿ ಅಧ್ಯಕ್ಷೆ ಎಸ್. ಮಂಜುಳಾ, ತ್ರಿವೇಣಿ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.