ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Five Guarantee Scheme: ರಾಜ್ಯದಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇಯಿಲ್ಲ : ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಯಲುವಹಳ್ಳಿ ಎನ್ ರಮೇಶ್

ಜಿಲ್ಲೆಯಲ್ಲಿ ಈವರೆಗೆ 5 ಗ್ಯಾರೆಂಟಿ ಯೋಜನೆಗಳನ್ನು ಶೇ.95 ರಿಂದ 98ರಷ್ಟು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ. ಇದರಲ್ಲಿ ಯುವನಿಧಿ ಒಂದು ತೃಪ್ತಿಕರವಾದ ಪ್ರಗತಿ ಸಾಧನೆ ಮಾಡಿಲ್ಲ. ಆದರೂ ಕೂಡ ಇಂತಹ ಯಶಸ್ವಿ ಕಾರ್ಯಕ್ರಮದ ಅನುಷ್ಠಾನದಲ್ಲಿ ಕೂಡ ಲೋಪಗಳಾಗಿರುವುದು ಕಂಡು ಬಂದಿರುವ ಹಿನ್ನೆಯಲ್ಲಿ ಪಾರದರ್ಶಕತೆ ತರಲು ನಮ್ಮ ಸರಕಾರ ಮುಂದಾಗಿದೆ

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವಧಿಯಲ್ಲಿಯೂ ಕೂಡ ಪಂಚಗ್ಯಾರೆಂಟಿ ಯೋಜನೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಇದರ ಬಗ್ಗೆ ಯಾರಿಗೂ ಅನುಮಾನವೇ ಬೇಡ ಎಂದು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಯಲುವಹಳ್ಳಿ ಎನ್ ರಮೇಶ್ ಹೇಳಿದರು.

ಚಿಕ್ಕಬಳ್ಳಾಪುರ : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivkumar) ಅವಧಿ ಯಲ್ಲಿಯೂ ಕೂಡ ಪಂಚಗ್ಯಾರೆಂಟಿ ಯೋಜನೆ(Five Guarantee Scheme)ಗಳು ಅಬಾಧಿತವಾಗಿ ಮುಂದುವರೆಯಲಿವೆ. ಇದರ ಬಗ್ಗೆ ಯಾರಿಗೂ ಅನುಮಾನವೇ ಬೇಡ ಎಂದು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಯಲುವಹಳ್ಳಿ ಎನ್ ರಮೇಶ್ ಹೇಳಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಬುಧವಾರ  ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಈವರೆಗೆ 5 ಗ್ಯಾರೆಂಟಿ ಯೋಜನೆಗಳನ್ನು ಶೇ.95 ರಿಂದ 98ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.ಇದರಲ್ಲಿ ಯುವನಿಧಿ ಒಂದು ತೃಪ್ತಿಕರವಾದ ಪ್ರಗತಿ ಸಾಧನೆ ಮಾಡಿಲ್ಲ. ಆದರೂ ಕೂಡ ಇಂತಹ ಯಶಸ್ವಿ ಕಾರ್ಯಕ್ರಮದ ಅನುಷ್ಠಾನದಲ್ಲಿ ಕೂಡ ಲೋಪಗಳಾಗಿರುವುದು ಕಂಡು ಬಂದಿರುವ ಹಿನ್ನೆಯಲ್ಲಿ ಪಾರದರ್ಶಕತೆ ತರಲು ನಮ್ಮ ಸರಕಾರ ಮುಂದಾಗಿದೆ. ಇದರ ಅರ್ಥ ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಬೇಕಿದೆ. ಈ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಹೊಸ ಅರ್ಜಿ ಸಲ್ಲಿಸಬೇಕಿಲ್ಲ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನ

ಮರಣ ಹೊಂದಿರುವವರ ಹೆಸರಿನಲ್ಲಿಯೇ ಬೇರೆಯವರು ಹಣಪಡೆಯುತ್ತಿರುವ ಬಗ್ಗೆ ಸರಕಾರದ ಗಮನಕ್ಕೆ ಬಂದಿದೆ.ಜಿಲ್ಲೆಯಲ್ಲಿಯು ಕೂಡ ಈ ಸಂಬಂಧ ಗಮನ ಹರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು. ಇದಕ್ಕೆ ನಿದರ್ಶನ ವೆಂಬಂತೆ ಒಂದೇ ಖಾತೆಗೆ 19020 ಮಂದಿ ಫಲಾನುಭವಿಗಳ ಹಣ ಸರಿಸುಮಾರು 45 ಕೋಟಿ ಜಮೆಯಾಗಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದರು.ಈ ಪ್ರಕರವನ್ನು ಎಇಜಿ ತನಿಖೆಗೆ ಒಪ್ಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಅಚಾತುರ್ಯವಾಗಲಿ, ದುರ್ಭಳಕೆಯಂತಹ ಪ್ರಕರಣಗಳಾಗಲಿ ಕಂಡು ಬರಬಾರದು ಎಂದ ಅವರು ಗೃಹಲಕ್ಷ್ಮೀ ಯೋಜನೆ ಪ್ರಾರಂಭ ವಾದಾಗಿನಿಂದ ಈವರೆಗೆ ಜಿಲ್ಲೆಗೆ 3092 ಕೋಟಿ ರೂಪಾಯಿ ಅನುದಾನ ಬಂದಿದೆ.

ಗೃಹಲಕ್ಷ್ಮೀಯಲ್ಲಿ 56 ಕೋಟಿ 5 ಲಕ್ಷ, ಗೃಹಜ್ಯೋತಿಯಲ್ಲಿ 14.50 ಲಕ್ಷ,ಅನ್ನಭಾಗ್ಯ-16 ಕೋಟಿ 79 ಲಕ್ಷ, ಶಕ್ತಿ ಯೊಜನೆಯಲ್ಲಿ 15.40 ಲಕ್ಷ ,ವಿದ್ಯಾನಿಧಿ 77 ಲಕ್ಷ ಹೀಗೆ ಒಟ್ಟಾರೆ 3092ಕೋಟಿ ರೂಪಾಯಿ ಜಿಲ್ಲೆಗೆ ಬಂದಿದ್ದು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದರು.

cbpm4gk

ಸಂತೋಷದ ಸಂಗತಿ ಎಂದರೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಹುಡುಗರಿಗೂ ಕೂಡ ಮುಖ್ಯಮಂತ್ರಿಗಳು ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 6 ಸಾವಿರ ವಿದ್ಯಾಥಿಗಳು ಪಾಸ್‌ಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಸ್ಥಿತಿವಂತರು ಕೂಡ ಬಿಪಿಎಲ್ ಕಾರ್ಡು ಪಡೆದಿರುವ ಬಗ್ಗೆ ಮಾಹಿತಿಯಿದೆ. ಬಡವರಿಗೆ ನೀಡುವ ಈ ಕಾರ್ಡನ್ನು ಸ್ಥಿತಿವಂತರು ಪಡೆಯುವ ಮೂಲಕ ಭಗವಂತನಲ್ಲಿ ನನ್ನನ್ನು ಈ ಸ್ಥಿತಿಗೆ ತಳ್ಳು ಎಂದ ಹಾಗೆ ಇರಲಿದೆ.ಕೈಮುಗಿದು ಮನವಿ ಮಾಡುತ್ತೇನೆ. ಸ್ವಯಂಪ್ರೇರಿತವಾಗಿ ಬಿಪಿಎಲ್ ಕಾರ್ಡು ವಾಪಸ್ಸು ಮಾಡಿ. ಇಲ್ಲವಾದಲ್ಲಿ ಎಪಿಎಲ್‌ಗೆ ಪರಿವರ್ತನೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆಗೆ ವಿಶೇಷ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸದ್ಯದಲ್ಲೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡ ಲಿದೆ. ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪುವಂತೆ ಫಲಾನು ಭವಿಗಳ ಮಾಹಿತಿಯನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್.ರಮೇಶ್ ಹೇಳಿದರು.

ಶಕ್ತಿ ಯೋಜನೆ(Shakti Scheme)ಯಡಿ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಇದೇ ವೇಳೆ ಶಾಲಾ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ವಿತರಣೆಯ ಪ್ರಗತಿಯನ್ನೂ ಪರಿಶೀಲಿಸಿ, ಯಾವುದೇ ಅರ್ಹ ವಿದ್ಯಾರ್ಥಿ ಸೌಲಭ್ಯದಿಂದ ವಂಚಿತ ರಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಗೃಹ ಬಳಕೆಗೆ ನೀಡಲಾಗಿರುವ ವಿದ್ಯುತ್ ಸಂಪರ್ಕವನ್ನು ವಾಣಿಜ್ಯ ಉದ್ದೇಶಗಳಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಅಂತಹ ಸೌಲಭ್ಯಗಳನ್ನು ರದ್ದುಪಡಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದರು.

5 ಕೆ.ಜಿ. ಅಕ್ಕಿ ಜೊತೆಗೆ ಸಕ್ಕರೆ, ಬೇಳೆ, ಉಪ್ಪು, ಅಡುಗೆ ಎಣ್ಣೆ ಸೇರಿದಂತೆ ಇತರ ಪದಾರ್ಥಗಳನ್ನು ಒಳಗೊಂಡ ಇಂದಿರಾ ಕಿಟ್ ಅನ್ನು ಒಂದೆರಡು ತಿಂಗಳಲ್ಲಿ ಅನ್ನಭಾಗ್ಯ ಯೋಜನೆ(Annabhagya Scheme)ಯಡಿ ವಿತರಿಸಲಾಗುತ್ತದೆ. ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಆಹಾರ ನಿರೀಕ್ಷಕರು ನ್ಯಾಯಬೆಲೆ ಅಂಗಡಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ವಿತರಣೆ ವ್ಯವಸ್ಥೆಯನ್ನು ಪರಿಶೀಲಿಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳ ಬೇಕು ಎಂದು ತಿಳಿಸಲಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಆರ್ಥಿಕ ನೆರವು ಜಮೆಯಾಗುತ್ತಿದ್ದು, ಅನ್ನಭಾಗ್ಯ ಯೋಜನೆಯ ಮೂಲಕ ಆಹಾರ ಭದ್ರತೆ ಹಾಗೂ ಶಕ್ತಿ ಯೋಜನೆ ಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಯಶಸ್ವಿಯಾಗಿ ಜಾರಿಯಲ್ಲಿದೆ. ಈ ಪಂಚ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ಕಾಲಕಾಲಕ್ಕೆ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಿ ವ್ಯವಸ್ಥೆ ಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲಾಗುತ್ತಿದೆ.

ಯಾವುದೇ ಗ್ಯಾರಂಟಿ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ; ಬದಲಾಗಿ ನಿಜವಾದ ಫಲಾನುಭವಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳ ಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ರಾಮಕೃಷ್ಣಪ್ಪ, ಸದಸ್ಯರಾದ ಆದಿರೆಡ್ಡಿ, ಕೆ.ಎಲ್.ಜಯರಾಮ್, ನಿರ್ಮಲಾ ಗಂಗಾಧರ್, ವೇಣುಗೋಪಾಲ್, ಹೆಚ್.ಎಂ. ಮುನಿಯಪ್ಪ, ರಂಗರಾಜು, ತಾರಾನಾಥ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.